ಕಗ್ಗ ಸಂಚಯ alpha
  • ಡಿ.ವಿ.ಜಿ
  • ಕಗ್ಗ
  • ಸಂಶೋಧನೆ
  • ಪದಕೋಶ
  • ಸಂಪರ್ಕಿಸಿ
  • ನಮ್ಮ ಬಗ್ಗೆ
ಇದರಂತೆ : ಇದನ್ನು :

ಒಟ್ಟು 214 ಕಡೆಗಳಲ್ಲಿ , 1 ವಚನಕಾರರು , 186 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸ್ವಾರಸ್ಯವಮಿತಮಾರಿಗುಮಿರದು ಜೀವನದಿ |ಪಾರದಿರ್ಕೆಯ ನೆನೆದು ನಡೆಯಲದು ಸಫಲ ||ಸಾರಂಗಳ್ ಎಲ್ಲ ಪಣ್ಗಳವುಮ್ ಒಂದರೊಳಿರವು |ಆರೋಗಿಸಿರುವುದನು - ಮಂಕುತಿಮ್ಮ ||
--------------
ಡಾ. ಡಿ.ವಿ.ಗುಂಡಪ್ಪ

ಹರಿಗೆ ನಿನ್ನನುರಾಗವೆಲ್ಲವನು ಸಲ್ಲಿಸೆನೆ |ಮರುನುಡಿಯ ನುಡಿವನೇನ್ ಒಡಲ ತೋರದನು? ||ಪರಿತಪಿಸುವುದು ಜೀವ ಜೀವಸರಸವನೆಳಸಿ |ನರಧರ್ಮಸೂಕ್ಷ್ಮವಿದು - ಮಂಕುತಿಮ್ಮ ||

ಹೂವ ತಳೆದ ಗುಲಾಬಿಯಿಂದ ಮನಕಹುದೇನು? |ನೋವೊ? ಸಂತಸವೊ? ನೋಡಾಮುಳ್ಳು ಬಾಳ್ಗೆ ||ಹೂವೆ ದಿವ್ಯಕಿರೀಟವದುವೆ ಕಾಲಕಟಾಕ್ಷ |ಜೀವನದ ತಿರುಳಷ್ಟೆ - ಮಂಕುತಿಮ್ಮ ||

ಹೃದಯಜೀವನಕಿನಿತು ಬೆಲೆಯಿರದೆ? ಫಲವಿರದೆ? |ಮಧುರಭಾವ ಪ್ರೇಮ ದಯೆಯೆಲ್ಲ ಬರಿದೆ? ||ವಿಧಿಯಂಗಡಿಯೊಳದನು ಕಸವೆಂದು ತಳ್ಳುವೊಡೆ |ಬದುಕಿನಲಿ ತಿರುಳೇನು? - ಮಂಕುತಿಮ್ಮ ||

ಹೊರಗು ಹೊರೆಯಾಗದವೊಲ್ ಒಳಗನನುಗೊಳಿಸಿ; ನೀ- |ನೊಳಗು ಶೆಕೆಯಾಗದವೊಲ್ ಅಳವಡಿಸೆ ಹೊರಗ ||ಸರಿಸಮದೊಳೆರಡನುಂ ಬಾಳಿನಲಿ ಜೋಡಿಪುದೆ |ಪರಮಜೀವನಯೋಗ - ಮಂಕುತಿಮ್ಮ ||

ಹೊಸ ಚಿಗುರು ಹಳೆ ಬೇರು ಕೂಡಿರಲು ಮರಸೊಬಗು |ಹೊಸಯುಕ್ತಿ ಹಳೆತತ್ತ್ವದೊಡಗೂಡೆ ಧರ್ಮ ||ಋಷಿವಾಕ್ಯದೊಡನೆ ವಿಜ್ಞಾನ ಕಲೆ ಮೇಳವಿಸೆ |ಜಸವು ಜನಜೀವನಕೆ - ಮಂಕುತಿಮ್ಮ ||

ಹಿಂದೆ 1 2 … 5 6 7 8 9 10 11 12 13 ಮುಂದೆ
©2014 - 2020 ಕನ್ನಡ ಸಂಚಯ | ಸಾಹಿತ್ಯ ಸಂಶೋಧನೆ ಹಾಗೂ ಅಧ್ಯಯನ ವೇದಿಕೆ