ಒಟ್ಟು 4119 ಕಡೆಗಳಲ್ಲಿ , 1 ವಚನಕಾರರು , 937 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಕಲ್ಲಾಗಿ ನಿಲ್ಲುವನು; ಬಳ್ಳಿವೊಲು ಬಳುಕುವನು |ಮುಳ್ಳಾಗಿ ಚುಚ್ಚುವನು; ಫುಲ್ಲ ಸುಮವಹನು ||ಕಲ್ಲೋಲವಾರಿಧಿವೊಲುರವಣಿಸಿ ಮೊರೆಯುವನು |ಕ್ಷುಲ್ಲಮಾನಿಸನಿವನು - ಮಂಕುತಿಮ್ಮ ||
ಕವಿ ಚಿತ್ರಕೋವಿದನು ಪರತತ್ತ್ವಶೋಧಕನು |ವಿವಿಧ ವಾದನ ಗೀತ ನೃತ್ಯ ಕುಶಲಿಗಳು ||ನವನವತೆಯಂ ಮನಸಿಗೀವೆಲ್ಲ ಕಲೆಗಾರ- |ರವರಿಂದ ಸುಂದರತೆ - ಮಂಕುತಿಮ್ಮ ||
ಕವಿಯಲ್ಲ; ವಿಜ್ಞಾನಿಯಲ್ಲ; ಬರಿ ತಾರಾಡಿ |ಅವನಿರಿವಿಗೆಟುಕುವವೊಲೊಂದಾತ್ಮನಯವ ||ಹವಣಿಸಿದನಿದನು ಪಾಮರಜನದ ಮಾತಿನಲಿ |ಕವನ ನೆನಪಿಗೆ ಸುಲಭ - ಮಂಕುತಿಮ್ಮ ||
ಕಷ್ಟ ಜೀವದ ಪಾಕ; ಕಷ್ಟ ಧರ್ಮವಿವೇಕ |ಎಷ್ಟೆಷ್ಟು ನೀತಿಯುಕ್ತಿಗಳ ಬಗೆದಡೆಯುಂ ||ಇಷ್ಟಷ್ಟು ನಿನ್ನೊಳ್ ಒಳತಿಳಿವಿಲ್ಲದಿರೆ ನಷ್ಟ |ದೃಷ್ಟಿಸೂಕ್ಷ್ಮವೆ ಗತಿಯೊ - ಮಂಕುತಿಮ್ಮ ||
ಕಳವಳವ ನೀಗಿಬಿಡು; ತಳಮಳವ ದೂರವಿಡು |ಕಳೆ; ತಳ್ಳು ಗಲಭೆ ಗಾಬರಿಯ ಮನದಿಂದ ||ಅಲೆದಾಡುತಿರೆ ದೀಪ ಕಣ್ಗೆ ಗುರಿ ತಪ್ಪುವುದು |ತಿಳಿತಿಳಿವು ಶಾಂತಿಯಲಿ - ಮಂಕುತಿಮ್ಮ ||
ಕಾಕತಾಳೀಯ ಕಥೆ ಲೋಕಚರಿತೆಯೊಳೆಷ್ಟೊ! |ಟೀಕೆಗೆಟುಕವು ನಮಗೆ ಕಾರ್ಯಕಾರಣಗಳ್ ||ಏಕೊ ಕಣ್ಣಲೆಯುವುದು; ಏನೊ ಅದ ಪಿಡಿಯುವುದು |ವ್ಯಾಕುಲತೆ ಫಲಿತಾಂಶ - ಮಂಕುತಿಮ್ಮ ||
ಕಾಂಕ್ಷೆಗಳ ಬೋಧಿಸುವ ಬಂಧುಸಖರುಪಕಾರ |ಯಕ್ಷಿಯರು ಮ್ಯಾಕ್ಬೆತನಿಗೆಸಗಿದುಪದೇಶ |ಉತ್ಸಾಹವಿದ್ದೇನು? ವಾತ್ಸಲ್ಯವಿದ್ದೇನು? |ಅಕ್ಷಿ ನಿರ್ಮಲವೇನೊ? - ಮಂಕುತಿಮ್ಮ ||
ಕಾಗೆಯುಂ ಕೋಗಿಲೆಯುಮೊಂದೆ ಮೇಲ್ನೋಟಕ್ಕೆ |ಯೋಗಿಯುಂ ಸಂಸಾರಭೋಗಿಯೇ ಹೊರಕೆ ||ಲೋಗರವೊಲಿರುತೆ ಸುಖದುಃಖಸಂಭ್ರಮಗಳಲಿ |ತ್ಯಾಗಿಯವನಂತರದಿ - ಮಂಕುತಿಮ್ಮ ||
ಕಾಡುಹಕ್ಕಿ ಹುಳಕ್ಕೆ ವರ್ಣಚಿತ್ರಗಳೇಕೆ? |ನೋಡುವರ ಕಣ್ಣೊಲವ ಬೇಡುವಳೆ ಸೃಷ್ಟಿ? ||ಮಾಡುವಾ ಮಾಟಗಳನಾದನಿತು ಬೆಳಗಿಪುದು |ರೂಢಿಯಾ ಪ್ರಕೃತಿಯದು - ಮಂಕುತಿಮ್ಮ ||
ಕಾಯ ನಿರ್ಣೇಯವದರೊಳು ಮನವನಿರ್ಣೇಯ ||ಸ್ನಾಯು ಸಂಖ್ಯೇಯ ಜೀವಳಮಸಂಖ್ಯೇಯ ||ಮೇಯಾಪ್ರಮೇಯಮಿಶ್ರಣವಿಂತು ನರಜಂತು |ನೇಯವದು ವಿಶ್ವಕಂ - ಮಂಕುತಿಮ್ಮ ||
ಕಾಯಕವ ಚರಿಸುತ್ತ; ಮಾನಸವ ಸಯ್ತಿಡುತ |ಆಯಸಂಬಡಿಸದವೊಲಂತರಾತ್ಮನನು ||ಮಾಯೆಯೊಡನಾಡುತ್ತ; ಬೊಮ್ಮನನು ಭಜಿಸುತ್ತ |ಆಯುವನು ಸಾಗಿಸೆಲೊ - ಮಂಕುತಿಮ್ಮ ||
ಕಾಯಂಕಿಂತಾತ್ಮ ಪಿರಿದೆಂದು ಜನವರಿತಂದು |ಸ್ವೀಯೇಚ್ಛೆಯಿಂ ಸಮಾಧಾನ ಕೆಡದಂದು ||ದಾಯ ಸಮ ಸಂಸೃಷ್ಟಿ ಭೂಭಾಗ್ಯವಾದಂದು |ಶ್ರೇಯ ನೆರೆವುದು ಜಗಕೆ - ಮಂಕುತಿಮ್ಮ ||
ಕಾಯಮಾತ್ರದುದಲ್ಲವಾತ್ಮಮಾತ್ರದುದಲ್ಲ- |ವಾಯೆರಡುಮೊಂದಾಗಲದು ಜೀವಲೀಲೆ ||ತಾಯಿವೊಲು ನಿನಗಾತ್ಮ; ಮಡದಿವೊಲು ಕಾಯವವ- |ರಾಯವನು ಸರಿನೋಡು - ಮಂಕುತಿಮ್ಮ ||
ಕಾಯವನು ಮೃದ್ಭಾಂಡ ಮಾಂಸಪಿಂಡವೆನುತ್ತೆ |ಹೇಯವೆಂದೆಂದೊಡಾತ್ಮಂಗಪ್ಪುದೇನು? ||ಆಯುಧವನದನು ತೊರೆದಾತ್ಮನೇಂಗೈದಪನು? |ನ್ಯಾಯ ತನುವಿಗಮಿರಲಿ - ಮಂಕುತಿಮ್ಮ ||
ಕಾರಿರುಳೊಳಾಗಸದಿ ತಾರೆ ನೂರಿದ್ದೇನು? |ದಾರಿಗನ ಕಣ್ಗೆ ಬೇಕೊಂದು ಮನೆಬೆಳಕು ||ದೂರದಾ ದೈವವಂತಿರಲಿ; ಮಾನುಷಸಖನ |ಕೋರುವುದು ಬಡಜೀವ - ಮಂಕುತಿಮ್ಮ ||