ಒಟ್ಟು 22 ಕಡೆಗಳಲ್ಲಿ , 1 ವಚನಕಾರರು , 18 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ವೈವಿಧ್ಯವೊಂದು ಕೃಪೆ ನಮಗಿರುವ ಕಷ್ಟದಲಿ |ಆವರಿಸದಳಲ್ ಎಲ್ಲರನುಮೊಂದೆ ಸಮಯ ||ನೋವಿಲ್ಲದರು ನೊಂದವರನು ಸಂತಯಿಸುತಿರೆ |ಜೀವನವು ಕಡಿದಹುದೆ? - ಮಂಕುತಿಮ್ಮ ||
ಸ್ವಾರಸ್ಯವಮಿತಮಾರಿಗುಮಿರದು ಜೀವನದಿ |ಪಾರದಿರ್ಕೆಯ ನೆನೆದು ನಡೆಯಲದು ಸಫಲ ||ಸಾರಂಗಳ್ ಎಲ್ಲ ಪಣ್ಗಳವುಮ್ ಒಂದರೊಳಿರವು |ಆರೋಗಿಸಿರುವುದನು - ಮಂಕುತಿಮ್ಮ ||
ಹುಲ್ಲಾಗು ಬೆಟ್ಟದಡಿ; ಮನೆಗೆ ಮಲ್ಲಿಗೆಯಾಗು |ಕಲ್ಲಾಗು ಕಷ್ಟಗಳ ಮಳೆಯ ವಿಧಿ ಸುರಿಯೆ ||ಬೆಲ್ಲ ಸಕ್ಕರೆಯಾಗು ದೀನದುರ್ಬಲರಿಂಗೆ |ಎಲ್ಲರೊಳಗೊಂದಾಗು - ಮಂಕುತಿಮ್ಮ ||