ಒಟ್ಟು 20 ಕಡೆಗಳಲ್ಲಿ , 1 ವಚನಕಾರರು , 18 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಸೃಷ್ಟಿಚೋದನೆಗಳಿಂ ನರನೊಳಿಷ್ಟಗಳುದಯ- |ವಿಷ್ಟಸಿದ್ಧಿಗೆ ಯಂತ್ರತಂತ್ರಗಳ ಯುಕ್ತಿ ||ತ್ವಷ್ಟೃಕುಶಲದೆ ಸೃಷ್ಟಿವಿಕೃತಿ; ಇಂತನ್ಯೋನ್ಯ- |ಸ್ಪೃಷ್ಟರ್ ಪ್ರಕೃತಿ ನರರು - ಮಂಕುತಿಮ್ಮ ||
ಸೆಳೆಯುತಿರುವುದದೊಂದು ಹೊರಬೆಡಗಿನೆಳೆಗಳೆ |ನ್ನೊಳಗಿನಸುವೆಲ್ಲವನು ಕಟ್ಟಿನಿಂ ಬಿಗಿದು ||ಎಳೆದಾಟವೇಂ ಋಣಾಕರ್ಷಣೆಯೊ? ಸೃಷ್ಟಿವಿಧಿ |ಯೊಳತಂತ್ರವೋ? ನೋಡು - ಮಂಕುತಿಮ್ಮ ||
ಹರಡುವುದು ಸಾಜ ವಾಯುಗೆ ಸೈಸದದು ತಡೆಯನ್ |ಉರುಳಿಪುದದೆಲ್ಲವನು ತಡೆಗಳಿಲ್ಲದಿರೆ ||ನರನ ಸ್ವತಂತ್ರಗತಿಯಂತು ಹಿತಮಿತವಿರಲು |ಅರಸೊ ಮಿತಿಯಾಯತಿಯ - ಮಂಕುತಿಮ್ಮ ||