ಒಟ್ಟು 23 ಕಡೆಗಳಲ್ಲಿ , 1 ವಚನಕಾರರು , 23 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಮಗುವಾಗಿ ಬೊಂಬೆಗೆಂದತ್ತು ಪಿರಿಯರ ಕಾಡಿ |ಜಗದುಣಿಸುಗಳನುಂಡು ಬೆಳೆದವಂ ತಾನೆ ||ಮಗುಗಳನು ಬೆಳಸುತ್ತ ಮನೆಯನಾಳುವವೋಲು |ಜಗವನಾಳ್ವನು ಜಾಣ - ಮಂಕುತಿಮ್ಮ ||
ಮರ ತನ್ನ ಹೆತ್ತ ಬೀಜವನಿಲ್ಲವೆನಿಸಿ ವಿ- |ಸ್ತರಿಸುವಂದದಿ; ಸೃಷ್ಟಿ ತನ್ನ ಮೂಲವನು ||ಮರೆಮಾಚಿ ತಾನೆ ಮೆರೆಯುತ್ತಿಹುದು ಕಣ್ಗಳಿಗೆ |ನೊರೆ ಸೃಷ್ಟಿ ಪಾಲ್ ಬ್ರಹ್ಮ - ಮಂಕುತಿಮ್ಮ ||
ವಿಧಿಗೆ ನೀಂ ಕಾರ್ಯನಕ್ಷೆಯ ವಿಧಿಸ ಹೊರಡದಿರು |ಅಧಿಕಾರಿ ನೀನಲ್ಲ; ವಿಧಿ ಬೆಪ್ಪನಲ್ಲ ||ಹದವರಿತು ವಿಧಿ ತಾನೆ ಕುದುರಿಸುವನೆಲ್ಲವನು |ಅದಟದಿರು ನೀನವನ - ಮಂಕುತಿಮ್ಮ ||
ವಿಶದಮಾದೊಂದು ಜೀವನಧರ್ಮದರ್ಶನವ- |ನುಸುರಿಕೊಳೆ ತನ್ನ ಮನಸಿಗೆ ತಾನೆ ಬಗೆದು ||ನಿಸದವಂ ಗ್ರಂಥಾನುಭವಗಳಿಂದಾರಿಸುತ |ಹೊಸೆದನೀ ಕಗ್ಗವನ - ಮಂಕುತಿಮ್ಮ ||
ಶರನಿಧಿಯನೀಜುವನು; ಸಮರದಲಿ ಕಾದುವನು |ಗುರಿಯೊಂದನುಳಿದು ಪೆರತೊಂದ ನೋಡುವನೆ? ||ಮರೆಯುವನು ತಾನೆಂಬುದನೆ ಮಹಾವೇಶದಲಿ |ನಿರಹಂತೆಯದು ಮೋಕ್ಷ - ಮಂಕುತಿಮ್ಮ ||
ಶ್ಯಾಮಸುಂದರನವನೆ ಚಕ್ರಿ ನರಹರಿಯಂತೆ |ಸೋಮಶಂಕರನೆ ಭೈರವ ರುದ್ರನಂತೆ ||ಹೈಮವತಿ ಶಿವೆ ತಾನೆ ಕಾಳಿ ಚಂಡಿಕೆಯಂತೆ |ಪ್ರೇಮ ಘೋರಗಳೊಂದೆ! - ಮಂಕುತಿಮ್ಮ ||
ಸರ್ವಾರ್ಥ ಸಹಭಾಗಿತೆಗೆ ರಾಷ್ಟ್ರ ಕುಲ ವರ್ಗ |ಸರ್ವದಣು ತಾನೆನುತ್ತೋರೊರ್ವ ಮನುಜನ್ ||ಸರ್ವಜೀವ ಸಮೃದ್ಧಿಗನುಗೂಡಿ ದುಡಿಯುತಿರೆ |ಪರ್ವವಂದಿಳೆಗೆಲವೊ - ಮಂಕುತಿಮ್ಮ ||
ಸುತೆಯ ಪೋಷಿಸಿ ಬೆಳಸಿ; ಧನಕನಕದೊಡನವಳನ್- |ಇತರಗೃಹಕಿತ್ತು ನೀಂ ಕೇಳ್ವ ಮುಯ್ಯೇನು? ||ಪ್ರತಿಫಲವು ಬೇರೇಕೆ? ಸುಕೃತಕದು ತಾನೆ ಫಲ |ಹಿತ ಮನದ ಪಾಕಕದು - ಮಂಕುತಿಮ್ಮ ||