ಕಗ್ಗ ಸಂಚಯ alpha
  • ಡಿ.ವಿ.ಜಿ
  • ಕಗ್ಗ
  • ಸಂಶೋಧನೆ
  • ಪದಕೋಶ
  • ಸಂಪರ್ಕಿಸಿ
  • ನಮ್ಮ ಬಗ್ಗೆ
ಇದರಂತೆ : ಇದನ್ನು :

ಒಟ್ಟು 27 ಕಡೆಗಳಲ್ಲಿ , 1 ವಚನಕಾರರು , 21 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನರರವೊಲೆ ಸುರರುಮಲೆದಲೆದು ಮರೆಯಾಗಿಹರು |ಭರತದೇಶದೊಳಮೈಗುಪ್ತಯವನರೊಳಂ ||ಸುರ ನಾಮ ರೂಪಗಳಸಂಖ್ಯಾತ; ನಿಜವೊಂದು |ತೆರೆ ಕೋಟಿ ಕಡಲೊಂದು - ಮಂಕುತಿಮ್ಮ ||
--------------
ಡಾ. ಡಿ.ವಿ.ಗುಂಡಪ್ಪ

ನೀಳುಗರೆ ಬಳುಬಳುಕೆ ಕಡಲತೆರೆಯೊಯ್ಯಾರ |ತಾಳಲಯ ಸೇರೆ ರಾಗದ ನಾಟ್ಯ ಧಾಟಿ ||ಗೋಳದ ಜ್ವಾಲೆಯಿಂ ಗಗನಪಟ ಸಿಂಗಾರ |ವೈಲಕ್ಷಣದೊಳಿಂಬು - ಮಂಕುತಿಮ್ಮ ||

ಮುಳುಗದಿರು; ಜೀವನದ ತೆರೆಯ ಮೇಲೀಜುತಿರು |ಒಳಿತನಾಗಿಸು; ಕೊಡುತ ಕೊಳುತ ಸಂತಸವ ||ಕಳವಳಂಬಡದೆ ನಡೆ ಕಡೆಯ ಕರೆ ಬಂದಂದು |ಮಿಳಿತನಿರು ವಿಶ್ವದಲಿ - ಮಂಕುತಿಮ್ಮ ||

ಶರಧಿಯೊಳಗಣ ವಸ್ತುಗಳನಲಚಿ ಜಾಲಿಸುವ |ತೆರೆಯಂತೆ ವಿಶ್ವಸತ್ತ್ವದ ಲಹರಿ ನಮ್ಮ ||ಹೊರಗೊಳಗುಗಳಲಿ ಸಂತತ ನೆರೆದು ಹರಿಯುತ್ತ |ಭರಿಸುತಿರುವುದು ಬಾಳ - ಮಂಕುತಿಮ್ಮ ||

ಸತ್ತೆನೆಂದೆನಬೇಡ; ಸೋತೆನೆಂದೆನಬೇಡ |ಬತ್ತಿತೆನ್ನೊಳು ಸತ್ತ್ವದೂಟೆಯೆನಬೇಡ ||ಮೃತ್ಯುವೆನ್ನುವುದೊಂದು ತೆರೆಯಿಳಿತ; ತೆರೆಯೇರು |ಮತ್ತೆ ತೋರ್ಪುದು ನಾಳೆ - ಮಂಕುತಿಮ್ಮ ||

ಸರಕಾರ ಹರಿಗೋಲು; ತೆರೆಸುಳಿಗಳತ್ತಿತ್ತ |ಸುರೆ ಕುಡಿದವರು ಕೆಲರು ಹುಟ್ಟು ಹಾಕುವರು ||ಬಿರುಗಾಳಿ ಬೀಸುವುದು; ಜನವೆದ್ದು ಕುಣಿಯುವುದು |ಉರುಳದಿಹುದಚ್ಚರಿಯೊ! - ಮಂಕುತಿಮ್ಮ ||

ಹಿಂದೆ 1 2 ಮುಂದೆ
©2014 - 2020 ಕನ್ನಡ ಸಂಚಯ | ಸಾಹಿತ್ಯ ಸಂಶೋಧನೆ ಹಾಗೂ ಅಧ್ಯಯನ ವೇದಿಕೆ