ಒಟ್ಟು 23 ಕಡೆಗಳಲ್ಲಿ , 1 ವಚನಕಾರರು , 19 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಸ್ವಪ್ನಲೋಕವ ಜಾಗೃತಂ ಸುಳ್ಳೆನುದನಲ್ತೆ? |ಸುಪ್ತಂಗೆ ಜಾಗೃತನ ಲೋಕಮುಂ ಸುಳ್ಳೇ ||ಸ್ವಪ್ನ ಜಾಗ್ರತ್ಸುಪ್ತಿಗಳ ಹಿಂದೆ ನಿರ್ಲಿಪ್ತ- |ಗುಪ್ತಾತ್ಮನಿಹುದು ದಿಟ - ಮಂಕುತಿಮ್ಮ ||
ಹಟವಾದಕೆಡೆಯೆಲ್ಲಿ ಮನುಜಪ್ರಪಂಚದಲಿ? |ಸೆಟೆಯೆಷ್ಟೊ ದಿಟವೆಷ್ಟೊ ಬೆರೆತಿರುವುವಿಲ್ಲಿ ||ಪಟುವಾಗಿ ನಿಲಲಹುದೆ ಮಣಲೊಳೆಸಗಿದ ಗೋಡೆ? |ಕಟುತೆ ಸಲ್ಲದು ಜಗಕೆ - ಮಂಕುತಿಮ್ಮ ||
ಹುರಿಯುರುಳೆ ಹಾವಲ್ಲವಾದೊಡಂ ಮಬ್ಬಿನಲಿ |ಹರಿದಾಡಿದಂತಾಗೆ ನೋಳ್ಪವಂ ಬೆದರಿ ||ಸುರಿಸುವಾ ಬೆವರು ದಿಟ; ಜಗುವುಮಂತುಟೆ ದಿಟವು |ಜರೆಯದಿರು ತೋರ್ಕೆಗಳ - ಮಂಕುತಿಮ್ಮ ||
ಹೊಟ್ಟೆಯೊಂದರ ರಗಳೆ ಸಾಲದೆಂದೇನೊ ವಿಧಿ |ಹೊಟ್ಟೆಕಿಚ್ಚಿನ ಕಿಡಿಯ ನೆಟ್ಟಿಹನು ನರನೊಳ್ ||ಹೊಟ್ಟೆ ತುಂಬಿದ ತೋಳ ಮಲಗೀತು; ನೀಂ ಪೆರರ |ದಿಟ್ಟಿಸುತ ಕರುಬುವೆಯೊ - ಮಂಕುತಿಮ್ಮ ||