ಒಟ್ಟು 23 ಕಡೆಗಳಲ್ಲಿ , 1 ವಚನಕಾರರು , 20 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಮನೆಯ ಸಂಸಾರದಲಿ ವಾಸವಿರುತಾಗಾಗ |ನೆನೆದು ನೀಂ ದೇಗುಲಕೆ ಪೋಗಿಬರುವಂತೆ ||ದಿನವೆಲ್ಲ ದೇವಸನ್ನಿಧಿಯೊಳಿರುತಾಗಾಗ |ಮನೆಗೆ ಬರುವನವೊಲಿರು - ಮಂಕುತಿಮ್ಮ ||
ಮುಕ್ಕೋಟಿ ದೇವತೆಗಳಾಳುತಿಹ ಲೋಕದಲಿ |ದಿಕ್ಕುಗಾಣದೆ ಜೀವಿಯಲೆವುದಚ್ಚರಿಯೇಂ? ||ಒಕ್ಕಟ್ಟನೊಡೆಯರೇ ಕಲಿಯದಿರೆ ನಮ್ಮ ಗತಿ- |ಗಿಕ್ಕಟ್ಟು ತಪ್ಪುವುದೆ? - ಮಂಕುತಿಮ್ಮ ||
ಲಾವಣ್ಯವಾತ್ಮಗುಣವದರಿಂದೆ ಲೋಕಜನ |ದೇವವನು ಕಮನೀಯ ವಿಗ್ರಹಂಗಳಲಿ ||ಭಾವಿಸುತ ತಮ್ಮಿಷ್ಟಭೋಗಗಳನರ್ಪಿಸುವ |ಸೇವೆಯಿಂ ನಲಿಯುವರು - ಮಂಕುತಿಮ್ಮ ||
ಶ್ರೀವಿಷ್ಣು ವಿಶ್ವಾದಿಮೂಲ ಮಾಯಾಲೋಲ |ದೇವ ಸರ್ವೇಶ ಪರಬೊಮ್ಮನೆಂದು ಜನಂ ||ಆವುದನು ಕಾಣದೊಡಮಳ್ತಿಯಿಂ ನಂಬಿಹುದೊ |ಆ ವಿಚಿತ್ರಕೆ ನಮಿಸೊ - ಮಂಕುತಿಮ್ಮ ||
ಸರ್ವರುಂ ಸಾಧುಗಳೆ ಸರ್ವರುಂ ಬೋಧಕರೆ |ಜೀವನಪರೀಕ್ಷೆ ಬಂದಿದಿರು ನಿಲುವನಕ ||ಭಾವಮರ್ಮಂಗಳೇಳುವುವಾಗ ತಳದಿಂದ |ದೇವರೇ ಗತಿಯಾಗ - ಮಂಕುತಿಮ್ಮ ||