ಒಟ್ಟು 21 ಕಡೆಗಳಲ್ಲಿ , 1 ವಚನಕಾರರು , 19 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಸುತ್ತಮುತ್ತಣ ಗಾಳಿಯಾವಗಂ ನಮ್ಮೊಡಲ |ನೊತ್ತಿದೊಡಮಾ ಹೊರೆಯ ಮನಸು ಕಾಣದವೋಲ್ ||ಬಿತ್ತರದ ಲೋಕಭಾರವನಾತ್ಮನರಿಯದಿರೆ |ಮುಕ್ತಲಕ್ಷಣವದುವೆ - ಮಂಕುತಿಮ್ಮ ||
ಸುಳ್ಳಲ್ಲ ಕಥೆಯ ತಿರುಕನು ಕಂಡ ಸವಿಗನಸು |ಚೆಲ್ಲಿತಲ್ಲವೆ ಹಿಟ್ಟು ಘಟವನವನೊದೆಯೆ? ||ಜಳ್ಳು ಸುಖದುಃಖವಿರಬಹುದಾದೊಡದರ ಮೊನೆ |ಮುಳ್ಳಹುದು ಜೀವಕ್ಕೆ - ಮಂಕುತಿಮ್ಮ ||
ಸೆಳೆಯುತಿರುವುದದೊಂದು ಹೊರಬೆಡಗಿನೆಳೆಗಳೆ |ನ್ನೊಳಗಿನಸುವೆಲ್ಲವನು ಕಟ್ಟಿನಿಂ ಬಿಗಿದು ||ಎಳೆದಾಟವೇಂ ಋಣಾಕರ್ಷಣೆಯೊ? ಸೃಷ್ಟಿವಿಧಿ |ಯೊಳತಂತ್ರವೋ? ನೋಡು - ಮಂಕುತಿಮ್ಮ ||
ಹೊಸಹೊಸದು ತಾನಾಗುತಿರ್ದೊಡಂ ತನ್ನಯ |ಪ್ರಸವ ಪ್ರವಾಹ ಭೂಮಿಗಳ ಹಳೆತನದಿಂ ||ನಸುಸೋಂಕು ವಾಸನೆಯ ಪೊನಲೊಂದಬೇಕಲ್ತೆ? |ಹೊಸದು ಹಳದಾಗದೇ - ಮಂಕುತಿಮ್ಮ ||