ಒಟ್ಟು 21 ಕಡೆಗಳಲ್ಲಿ , 1 ವಚನಕಾರರು , 21 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ವೇದಗಳು ಶಾಸ್ತ್ರಗಳು ಲೋಕನೀತಿಗಳೆಲ್ಲ |ಹಾದಿತೋರಲು ನಿಶಿಯೊಳುರಿವ ಪಂಜುಗಳು ||ಸೌಧವೇರಿದವಂಗೆ; ನಭವ ಸೇರಿದವಂಗೆ |ಬೀದಿಬೆಳಕಿಂದೇನೊ? - ಮಂಕುತಿಮ್ಮ ||
ಶೀತವಾತಗಳಾಗೆ ದೇಹಕೌಷಧ ಪಥ್ಯ |ಚೇತ ಕೆರಳಿರೆ ಕಣ್ಣುಕಿವಿಗಳಾತುರದಿಂ ||ಪ್ರೀತಿಯಿಂದದನೊಲಿಸಿ ನೀತಿಯಲಿ ಶಿಕ್ಷಿಸುವು- |ದಾತುಮದ ನೆಮ್ಮದಿಗೆ - ಮಂಕುತಿಮ್ಮ ||
ಶುಭವಾವುದಶುಭವಾವುದು ಲೋಕದಲಿ ನೋಡೆ? |ವಿಭಜಿಸಲ್ಕಾಗದನ್ಯೋನ್ಯಸಂಬಂಧ ||ಉಭಯವನು ಮೀರ್ದ ಸಾಮ್ಯದ ನೀತಿಯೊಂದಿಹುದು |ಅಭಯಪಥವದು ನಿನಗೆ - ಮಂಕುತಿಮ್ಮ ||
ಸಾರ್ವಭೌಮತೆ ನಾಲ್ಕು ಗುಣಕೆ ಗುಣರಾಜ್ಯದಲಿ |ಧೈರ್ಯ ಮೊದಲಿನದೆರಡನೆಯದು ಮತಿಯೋಜೆ ||ಸರ್ವದಯೆ ಮೂರನೆಯದದುವೆ ನೀತಿಯ ಮೂಲ |ನಿರ್ಮಮತ್ವವೆ ಮುಕುಟ - ಮಂಕುತಿಮ್ಮ ||
ಸೌಂದರ್ಯದಾಲಯ ಬರಿ ದ್ವಂದ್ವವೇನಲ್ಲ |ದ್ವಂದ್ವದೊಳಗನುವು; ಅದು ಪರಿಮಾಣದುಚಿತ ||ಸಂಧಾನರೀತಿಯದು; ಸಹಕಾರ ನೀತಿಯದು |ಸಂದರ್ಭಸಹಜತೆಯೊ - ಮಂಕುತಿಮ್ಮ ||
ಸ್ವರರಾಗಗೀತಿಗಳು ನಾಟ್ಯಾಭಿನೀತಿಗಳು |ಕರೆದೇಳಿಸುವುವು ಮನಸಿನಲಿ ನಿದ್ರಿಸುವಾ ||ಪರಿಪರಿಯ ಭಾವಗಳ ಗೂಢಸ್ವಭಾವಗಳ |ಪರಮೇಷ್ಠಿ ಟೀಕು ಕಲೆ - ಮಂಕುತಿಮ್ಮ ||