ಒಟ್ಟು 20 ಕಡೆಗಳಲ್ಲಿ , 1 ವಚನಕಾರರು , 17 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಸಂಪೂರ್ಣಗೋಳದಲಿ ನೆನೆದೆಡೆಯೆ ಕೇಂದ್ರವಲ |ಕಂಪಿಸುವ ಕೇಂದ್ರ ನೀಂ ಬ್ರಹ್ಮಕಂದುಕದಿ ||ಶಂಪಾತರಂಗವದರೊಳು ತುಂಬಿ ಪರಿಯುತಿದೆ |ದಂಭೋಳಿ ನೀನಾಗು - ಮಂಕುತಿಮ್ಮ ||
ಸ್ವರರಾಗಗೀತಿಗಳು ನಾಟ್ಯಾಭಿನೀತಿಗಳು |ಕರೆದೇಳಿಸುವುವು ಮನಸಿನಲಿ ನಿದ್ರಿಸುವಾ ||ಪರಿಪರಿಯ ಭಾವಗಳ ಗೂಢಸ್ವಭಾವಗಳ |ಪರಮೇಷ್ಠಿ ಟೀಕು ಕಲೆ - ಮಂಕುತಿಮ್ಮ ||