ಒಟ್ಟು 19 ಕಡೆಗಳಲ್ಲಿ , 1 ವಚನಕಾರರು , 19 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಮನೆಯೆ ಮಠವೆಂದು ತಿಳಿ; ಬಂಧು ಬಳಗವೆ ಗುರುವು |ಅನವರತಪರಿಚರ್ಯೆಯವರೊರೆವ ಪಾಠ ||ನಿನಗುಳಿದ ಜಗವ ಮುಟ್ಟಿಪ ಸೇತು ಸಂಸಾರ |ಮನಕೆ ಪುಟಸಂಸ್ಕಾರ - ಮಂಕುತಿಮ್ಮ ||
ಮನೆಯೆಲ್ಲಿ ಸತ್ಯಕ್ಕೆ? ಶ್ರುತಿ ತರ್ಕಮಾತ್ರದೊಳೆ? |ಅನುಭವಮುಮದರೊಂದು ನೆಲೆಯಾಗದಿಹುದೇಂ? ||ಮನು{ಜ}ಹೃದಯಾಂಗಣದೊಳೆನಿತೆನಿತೊ ದನಿಯುದಿಸಿ |ಅಣಕಿಪುವು ತರ್ಕವನು - ಮಂಕುತಿಮ್ಮ ||
ಮನೆಯೊಳೋ ಮಠದೊಳೋ ಸಭೆಯೊಳೋ ಸಂತೆಯೊಳೊ |ಕೊನೆಗೆ ಕಾಡೊಳೊ ಮಸಾಣದೊಳೊ ಮತ್ತೆಲ್ಲೋ ||ಗಣನೆಗೇರಲಿಕೆಂದು ಜನ ತಪಿಸಿ ತೊಳಲುವುದು |ನೆನೆಯದಾತ್ಮದ ಸುಖವ - ಮಂಕುತಿಮ್ಮ ||
ಮೊಗ ನಾಲ್ಕು ನರನಿಗಂತೆಯೆ ನಾರಿಗಂ ಬಗೆಯೆ |ಜಗಕೆ ಕಾಣಿಪುದೊಂದು; ಮನೆಯ ಜನಕೊಂದು ||ಸೊಗಸಿನೆಳಸಿಕೆಗೊಂದು; ತನ್ನಾತ್ಮಕಿನ್ನೊಂದು |ಬಗೆಯೆಷ್ಟೊ ಮೊಗವಷ್ಟು - ಮಂಕುತಿಮ್ಮ ||