ಒಟ್ಟು 19 ಕಡೆಗಳಲ್ಲಿ , 1 ವಚನಕಾರರು , 18 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಯುದ್ಧವಾಗಲಿ ರಾಜ್ಯವಿದ್ಯೆಯಾಗಲಿ ಶಾಸ್ತ್ರ- |ವೃದ್ಧಿಯಾಗಲಿ ನರನ ಹಣೆಯಿನಳಿಯಿಸದಾ ||ಕ್ಷುದ್ರಕಾರ್ಪಣ್ಯದನ್ಯಾಯದನಿತಿನಿತುಳಿಕೆ- |ಯಿದ್ದೆಯಿರುವುದು ನಮಗೆ - ಮಂಕುತಿಮ್ಮ ||
ಸಮವರ್ತಿಗಳು ಜಗದೊಳಿಬ್ಬರೇ ದಿಟವರಿಯೆ |ಯಮರಾಜನೊಬ್ಬ ಜಾಠರರಾಜನೊಬ್ಬ ||ಶ್ರಮವನನುದಿನಮುಮಾಗಿಪನೊಬ್ಬನೆಲ್ಲವನು |ಶಮಿಸಿ ಮುಗಿಸುವನೊಬ್ಬ - ಮಂಕುತಿಮ್ಮ ||
ಸಾರ್ವಭೌಮತೆ ನಾಲ್ಕು ಗುಣಕೆ ಗುಣರಾಜ್ಯದಲಿ |ಧೈರ್ಯ ಮೊದಲಿನದೆರಡನೆಯದು ಮತಿಯೋಜೆ ||ಸರ್ವದಯೆ ಮೂರನೆಯದದುವೆ ನೀತಿಯ ಮೂಲ |ನಿರ್ಮಮತ್ವವೆ ಮುಕುಟ - ಮಂಕುತಿಮ್ಮ ||