ಒಟ್ಟು 170 ಕಡೆಗಳಲ್ಲಿ , 1 ವಚನಕಾರರು , 151 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಇಹುದೊ ಇಲ್ಲವೊ ತಿಳಿಯಗೊಡದೊಂದು ವಸ್ತು ನಿಜ |ಮಹಿಮೆಯಿಂ ಜಗವಾಗಿ ಜೀವವೇಷದಲಿ ||ವಿಹರಿಪುದದೊಳ್ಳಿತೆಂಬುದು ನಿಸದವಾದೊಡಾ |ಗಹನ ತತ್ತ್ವಕೆ ಶರಣೊ - ಮಂಕುತಿಮ್ಮ ||
ಉಂಡಾತನುಣುತಿರುವರನು ಕಾಣ್ಬ ನಲವಿಂದ |ಪಂಡಿತನು ವಿದ್ಯಾರ್ಥಿಗಳಿಗೊರೆವ ನಯದಿಂ ||ಕಂಡು ಲೋಕವನು ಸಂತೈಸುತಿರುವಂ ಜ್ಞಾನಿ |ಕಂಡೆಲ್ಲರೊಳು ತನ್ನ - ಮಂಕುತಿಮ್ಮ ||
ಉಣುವುದುಡುವುದು ಪಡುವುದಾಡುವುದು ಮಾಡುವುದು |ಋಣಗಳೆಲ್ಲವು ಪೂರ್ವಸಂಚಿತಾಂಶಗಳು ||ಹಣೆಯೊಳದು ಲಿಖಿತಮಿರೆಯುಂ ವಾಚಿಸುವನಿಲ್ಲ |ಗೊಣಗಾಟವಳಿಸುವುದೆ? - ಮಂಕುತಿಮ್ಮ ||
ಋಣದ ಜಾಲವನಂತ; ಕರುಮಚಕ್ರವನಂತ |ಜನುಮಜನುಮದ ಕಥೆಯ ತಂತುಗಳನಂತ ||ಅನವರತ ನೂತನವಿದೆನಿಪ ವಿಶ್ವದ ತಂತ್ರ |ಬಿನದ ಪರಬೊಮ್ಮಂಗೆ - ಮಂಕುತಿಮ್ಮ ||
ಎದೆ ಮಾರುವೋಗದೊಡೆ; ಕಣ್ ಸೊಬಗನುಂಡರೇಂ? |ಹೃದಯ ಮುಯ್ ಕೇಳದೊಡೆ; ನಲವ ಸೂಸಿದರೇಂ? ||ಕದಡದಿರ್ದೊಡೆ ಮನವ; ತನು ಸೊಗವ ಸವಿದೊಡೇಂ? |ಮುದ ತಾನೆ ತಪ್ಪಲ್ಲ - ಮಂಕುತಿಮ್ಮ ||
ಎದ್ದೆದ್ದು ಬೀಳುತಿಹೆ; ಗುದ್ದಾಡಿ ಸೋಲುತಿಹೆ |ಗದ್ದಲವ ತುಂಬಿ ಪ್ರಸಿದ್ಧನಾಗುತಿಹೆ ||ಉದ್ಧರಿಸುವೆನು ಜಗವನೆನ್ನುತಿಹ ಸಖನೆ; ನಿ- |ನ್ನುದ್ಧಾರವೆಷ್ಟಾಯ್ತೊ? - ಮಂಕುತಿಮ್ಮ ||
ಎನಗೆ ಸುಖವಿಲ್ಲವದರಿಂ ದೇವರಿರನೆನ್ನು- |ವನುಮಿತಿಯ ನೀಂ ಗೆಯ್ಯೆ; ಸುಖಿಯದೇನೆನುವಂ? ||ತನುಬಾಹ್ಯಕರಣದನುಭವಕಿಂತ ಸೂಕ್ಷ್ಮತರ- |ದನುಭವವ ನೀನರಸೊ - ಮಂಕುತಿಮ್ಮ ||
ಎನಿತು ನೀಂ ಗೆಲಿದೆಯೆಂದೆನರು ಬಲ್ಲವರೆಂದು- |ಮೆನಿತು ನೀಂ ಪೋರ್ದೆಯೆನಿತನು ಪೊತ್ತೆಯೆನುವರ್ ||ಗಣನೆ ಸಲುವುದು ತೋರ್ದ ಪೌರುಷಕೆ; ಜಯಕಲ್ಲ |ದಿನದಿನದ ಗರಡಿಯಿದು - ಮಂಕುತಿಮ್ಮ ||
ಎಲೆಗಳನು ಕಡ್ಡಿ; ಕಡ್ಡಿಯ ರಂಬೆಕೊಂಬೆಗಳು |ತಳೆದು ಪೆರ್ಚಿಸುತಿಹುವು ಮರದ ಬಾಳ್ಸಿರಿಯ ||ಸ್ಥಲವೊಂದು ನಿನಗಿಹುದು ವಿಶ್ವವೃಕ್ಷದೊಳಂತು |ಹಳಿಯದಿರು ನಿನ್ನಿರವ - ಮಂಕುತಿಮ್ಮ ||
ಎಲ್ಲ ನಾಶನವೆಲ್ಲಕಾಲವಶವಾದೊಡಂ |ಕ್ಷುಲ್ಲಕನು ನರನಾದೊಡಂ ಕಾಲನಿದಿರೊಳ್ ||ಉಲ್ಲಾಸವೇ ಧರ್ಮ; ಕೊಲ್ಲಿಪನೆ ಬೆಳೆಯಿಪನು |ಹುಲ್ಲೊಣಗಿ ಬೆಳೆವುದಲ? - ಮಂಕುತಿಮ್ಮ ||
ಎಲ್ಲರೊಳು ತಾನು ತನ್ನೊಳಗೆಲ್ಲರಿರುವವೋ- |ಲೆಲ್ಲೆಲ್ಲಿಯುಂ ನೋಡಿ ನಡೆದು ನಗುತಳುತ ||ಬೆಲ್ಲ ಲೋಕಕ್ಕಾಗಿ ತನಗೆ ತಾಂ ಕಲ್ಲಾಗ |ಬಲ್ಲವನೆ ಮುಕ್ತನಲ - ಮಂಕುತಿಮ್ಮ ||
ಏನಾದೊಡೇನು? ನೀನೆಲ್ಲಿ ಪೋದೊಡಮೇನು? |ಪ್ರಾಣವೇಂ ಮಾನವೇನಭ್ಯುದಯವೇನು? ||ಮಾನವಾತೀತವೊಂದೆಲ್ಲವನು ನುಂಗುವುದು |ಜಾನಿಸದನಾವಗಂ - ಮಂಕುತಿಮ್ಮ ||
ಒಡರಿಸುವನೆಲ್ಲವನ್; ಅದಾವುದುಂ ತನದಲ್ಲ |ಬಿಡನೊಂದನುಂ ರಾಜ್ಯ ತನದಲ್ಲವೆಂದು ||ನಡೆವಂ ಸ್ವತಂತ್ರದಲಿ ಸಲಿಸುತೆ ವಿಧೇಯತೆಯ |ಕಡುಯೋಗಿ ಭರತನಲ? - ಮಂಕುತಿಮ್ಮ ||
ಒಡೆಯನೆಂದೋ ಬಂದು ಕೇಳ್ವನದಕುತ್ತರವ |ಕೊಡಬೇಕು ತಾನೆನುವವೊಲು ಋಜುತೆಯಿಂದ ||ಒಡಲ; ಜಾಣಿನ; ಜೀವಶಕ್ತಿಗಳನೆಲ್ಲವನು |ಮುಡುಪುಕೊಟ್ಟನು ಭರತ - ಮಂಕುತಿಮ್ಮ ||
ಒಂದಿಹುದುಪಾಯವೋರೊರ್ವನರೆಗಣ್ಣುಗಳು |ಮೊಂದೊಂದು ಸತ್ಯಾಂಶಕಿರಣಗಳ ಪಿಡಿದು ||ಒಂದುಗೂಡಿದೊಡವರ್ಗಳರಿವನೆಲ್ಲವನಾಗ |ಮುಂದು ಸಾಗುವೆವಿನಿತು - ಮಂಕುತಿಮ್ಮ ||