ಒಟ್ಟು 20 ಕಡೆಗಳಲ್ಲಿ , 1 ವಚನಕಾರರು , 19 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಸಂದೇಹವೀ ಕೃತಿಯೊಳಿನ್ನಿಲ್ಲವೆಂದಲ್ಲ |ಇಂದು ನಂಬಿಹುದೆ ಮುಂದೆಂದುಮೆಂದಲ್ಲ ||ಕುಂದು ತೋರ್ದಂದದನು ತಿದ್ದಿಕೊಳೆ ಮನಸುಂಟು |ಇಂದಿಗೀ ಮತವುಚಿತ - ಮಂಕುತಿಮ್ಮ ||
ಸಿಂಧುವನು ಹಿಮಗಿರಿಗೆ ಹಿಂದಿರುಗಿ ಬೇರೊಂದು |ಚೆಂದದಲಿ ಪರಿದು ಬಾರೆಂದಾಣತಿಪೆಯಾ? ||ಸಂದರ್ಭವಿಡಿದು ಜನಚೈತನ್ಯ ಪರಿದಿಹುದು |ಅಂಧಗತಿಯಲ್ಲವದು - ಮಂಕುತಿಮ್ಮ ||
ಸೌಂದರ್ಯ ಬಾಂಧವ್ಯಗಳು ಸತ್ಯವಲ್ಲದೊಡೆ |ಕುಂದುವಡೆಯದ ಸತ್ಯವಿಳೆಯೊಳಿನ್ನೆಲ್ಲಿ? ||ಗಂಧಾನಿಲಂಗಳವು ಪರಸತ್ತ್ವಪುಷ್ಪದವು |ಸಂದೇಹವೇನೆಲವೊ - ಮಂಕುತಿಮ್ಮ ||
ಸೌಂದರ್ಯದಾಲಯ ಬರಿ ದ್ವಂದ್ವವೇನಲ್ಲ |ದ್ವಂದ್ವದೊಳಗನುವು; ಅದು ಪರಿಮಾಣದುಚಿತ ||ಸಂಧಾನರೀತಿಯದು; ಸಹಕಾರ ನೀತಿಯದು |ಸಂದರ್ಭಸಹಜತೆಯೊ - ಮಂಕುತಿಮ್ಮ ||