ಒಟ್ಟು 21 ಕಡೆಗಳಲ್ಲಿ , 1 ವಚನಕಾರರು , 17 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಸುತ್ತಮುತ್ತಣ ಗಾಳಿಯಾವಗಂ ನಮ್ಮೊಡಲ |ನೊತ್ತಿದೊಡಮಾ ಹೊರೆಯ ಮನಸು ಕಾಣದವೋಲ್ ||ಬಿತ್ತರದ ಲೋಕಭಾರವನಾತ್ಮನರಿಯದಿರೆ |ಮುಕ್ತಲಕ್ಷಣವದುವೆ - ಮಂಕುತಿಮ್ಮ ||
ಸುತ್ತಿ ಸುತ್ತುವ ಖಗವ ಗೂಡ ನೆನಪೆಳೆಯುವುದು |ಗೊತ್ತುನೂಲ್ ಪಿಡಿದಿಹುದು ದನವ ಬಯಲಿನಲಿ ||ತತ್ತ್ವವೊಂದರ ಹಿಡಿತಕೊಗ್ಗದಿಹ ಬಾಳೇನು? |ಕಿತ್ತ ಗಾಳಿಯ ಪಟವೊ - ಮಂಕುತಿಮ್ಮ ||