ಒಟ್ಟು 4119 ಕಡೆಗಳಲ್ಲಿ , 1 ವಚನಕಾರರು , 937 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಘೋರವನು ಮೋಹವನು ದೇವತೆಗಳಾಗಿಪರು |ಭೀರು ಯಾಚಕರಾಸ್ಥೆ ತಪ್ಪದಿರಲೆಂದು ||ಆರಿಂದಲೇಂ ಭೀತಿ; ಏಂ ಬಂದೊಡದ ಕೊಳುವ |ಪಾರಮಾರ್ಥಿಕನಿಗೆಲೊ? - ಮಂಕುತಿಮ್ಮ ||
ಚಲನೆ ವಿಶ್ವಾಸ್ತರಣೆಯದುವೆ ಮಾಯಾಭ್ರಮಣೆ |ಸಲೆ ಬಗೆಯಲದು ಪರಬ್ರಹ್ಮ ವಿಸ್ಫುರಣೆ ||ಥಳಥಳಿಕೆ ವಜ್ರದಲಿ ನೈಜವಿರುವಂತೆಯು |ಜ್ಜ್ವಲತೆ ಬೊಮ್ಮಗೆ ನೈಜ - ಮಂಕುತಿಮ್ಮ ||
ಚಾರುದೃಶ್ಯಂಗಳಿಂ ಪ್ರೀತಿ ಹೃದಯವಿಕಾಸ |ಕ್ರೂರದೌಷ್ಟ್ಯಂಗಳಿಂ ವೀರಾನುಕಂಪ ||ಭೈರವಾದ್ಭುತಗಳಿಂ ಮೌನದಂತರ್ಮನನ |ದಾರಿಯುದ್ಧಾರಕಿವು - ಮಂಕುತಿಮ್ಮ ||
ಚಿಂತೆಸಂತಾಪಗಳು ಮನಸಿಗೆ ವಿರೇಚಕವೊ |ಸಂತಸೋತ್ಸಾಹಗಳೆ ಪಥ್ಯದುಪಚಾರ ||ಇಂತುಮಂತುಂ ನಡೆಯುತಿರುವುದಾತ್ಮ ಚಿಕಿತ್ಸೆ |ಎಂತಾದೊಡಂತೆ ಸರಿ - ಮಂಕುತಿಮ್ಮ ||
ಚಿತ್ತದನುಭವ ಭಾವ ಸಂಭಾವನೆಗಳೆಲ್ಲ |ಬತ್ತವದನು ವಿಚಾರಯುಕ್ತಿಗಳು ಕುಟ್ಟೆ ||ತತ್ತ್ವತಂಡುಲ ದೊರೆಗುಮದು ವಿವೇಚಿತತತ್ತ್ವ |ನಿತ್ಯ ಭೋಜನ ನಮಗೆ - ಮಂಕುತಿಮ್ಮ ||
ಚಿರಶಿಕ್ಷೆಯಿಂ ನಿನಗೆ ಸರ್ವಾತ್ಮತಾಭ್ಯಾಸ |ಸರಳ ಸಹಜವದಹುದು ಮೂಗಿನುಸಿರವೊಲು ||ಪರನಿಯತಿಯಿರದು ಸ್ವತಸ್ಸಿದ್ಧ ನಿಯತಿಯಿರೆ |ಹೊರಸಡಿಲಕೊಳಹಿಡಿತ - ಮಂಕುತಿಮ್ಮ ||
ಚೀಟಿಯಾಟದ ಬಿನದಿ ತಾನೊರ್ವನಿರ್ವರವೊಲ್ |ಆಟವಾಡುತಲಿ ತನ್ನೊರ್ತನವ ಮರೆವಾ ||ಮಾಟದಲಿ ಬೊಮ್ಮನುಂ ತನ್ನೇಕತೆಯ ಜೀವ |ಪಾಟಿಯಲಿ ಮರೆತಿಹನು - ಮಂಕುತಿಮ್ಮ ||
ಚೂರುಗಳು ಹದಿನಾರು ಚಂದ್ರಮಂಡಲಕಂತೆ |ನೂರಾರು ಚೂರುಗಳು ಸತ್ಯಚಂದ್ರನವು ||ಸೇರಿಸುತಲವುಗಳನು ಬಗೆಯರಿತು ಬೆಳಸುತಿರೆ |ಸಾರ ಋತಪೂರ್ಣಿಮೆಯೊ - ಮಂಕುತಿಮ್ಮ ||
ಚೆಲುವುನಗುವುಗಳ ಕಂಡವನ ಕಣ್ಣರಳುವುದು |ಅಳುವುನೋವುಗಳ ಕಂಡೊದ್ದೆಯಾಗುವುದು ||ಇಳೆಯ ದನಿಗವನೆದೆಯೊಳೊಪ್ಪು ಮರುದನಿಯಹುದು |ಶಿಲೆಯಲ್ಲ ಯೋಗಿಯೆದೆ - ಮಂಕುತಿಮ್ಮ ||
ಚೌಕಟ್ಟನಂತವದರೊಳು ಚಿತ್ರಪಟ ಸಾಂತ |ಸಾಕಾರ ಘನತತಿ ನಿರಾಕಾರ ನಭದಿ ||ಲೌಕಿಕದ ಮೌಲ್ಯ ನಿರ್ಲೌಕಿಕದ ನಾಣ್ಯದಲಿ |ಲೆಕ್ಕ ತಾತ್ತ್ವಿಕನಿಗಿದು - ಮಂಕುತಿಮ್ಮ ||
ಜಗ ಬೆಳೆದು ಚಿಗುರುತಿರೆ ಶಾಸ್ತ್ರ ಕರಟಿರಲಹುದೆ? |ನಿಗಮಸಂತತಿಗೆ ಸಂತತಿಯಾಗದಿಹುದೆ? ||ಬಗೆಬಗೆಯ ಜೀವಸತ್ತ್ವವಿಕಾಸವಾಗುತಿರ- |ಲೊಗೆವುದೈ ವಿಜ್ಞಾನ - ಮಂಕುತಿಮ್ಮ ||
ಜಗದ ಕಲ್ಯಾಣದೊಳಗಾತ್ಮ ಕಲ್ಯಾಣವನು |ಜಗದ ಬೀದಿಗಳೊಳು ನಿಜಾತ್ಮಯಾತ್ರೆಯನು ||ಜಗದ ಜೀವಿತದಿ ನಿಜಜೀವಿತದ ಪೂರ್ತಿಯನು |ಬಗೆಯಲರಿತವನೆ ಸುಖಿ - ಮಂಕುತಿಮ್ಮ ||
ಜಗದ ಬಂದೀಗೃಹದಿ ಬಿಗಿಯುತಿರೆ ವಿಧಿ ನಿನ್ನ |ನಿಗಮ ಸತ್ಕಲೆ ಕಾವ್ಯಗಳ ಗವಾಕ್ಷಗಳಿಂ ||ಗಗನದೊಳನಂತದರ್ಶನದೆ ಮುಕ್ತಿಯನೊಂದು |ನಗುನಗಿಸಿ ಲೋಕವನು - ಮಂಕುತಿಮ್ಮ ||
ಜಗದ ಸಂತಾಪ ಸಂತಸ ಸಂಭ್ರಮಂಗಳುಲಿ |ಬಗಿದು ನರನೆದೆಯ; ಜೀವವ ಪಿಡಿದು ಕುಲುಕೆ ||ಸೊಗಯಿಪುದು ಮನಸಿಗದು ಕವಿಕಲಾರಸಿಕರ್ಗೆ |ಜಗ ಸೂರ್ಯಂ ನೀಂ ಕಮಲ - ಮಂಕುತಿಮ್ಮ ||
ಜಗದ ಸೊಗದರಸಿಕೆಯ ಫಲ; ನೋಡು; ಬರಿಕಲಹ |ಮೃಗಗಳಾವೇಶಗೊಳಲಪ್ಪುದಿನ್ನೇನು? ||ಮುಗಿಯುವುದು ಕಾಳ್ಗಿಚ್ಚು ವನ ಬೂದಿಯಾದಂದು |ಹಗೆತನವುಮಂತು ಬಿಡು - ಮಂಕುತಿಮ್ಮ ||