ಒಟ್ಟು 4119 ಕಡೆಗಳಲ್ಲಿ , 1 ವಚನಕಾರರು , 937 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ತನ್ನ ರುಚಿ ರಾಮರುಚಿ; ತನ್ನ ಸಂತುಷ್ಟಿ ಪರಿ- |ಪೂರ್ಣವಪ್ಪುದು ರಾಮಸಂತುಷ್ಟಿಯಿಂದೆ ||ಎನ್ನುವಾ ಸಾಜದಾ ದೈವಾತ್ಮಭಾವದಲಿ |ಧನ್ಯಳಾದಳು ಶಬರಿ - ಮಂಕುತಿಮ್ಮ ||
ತನ್ನ ಶಕ್ತಿಯನಳೆದು; ತನ್ನ ಗುಣಗಳ ಬಗೆದು |ಸನ್ನಿವೇಶದ ಸೂಕ್ಷ್ಮವರಿತು; ಧೃತಿದಳೆದು ||ತನ್ನ ಕರ್ತವ್ಯಪರಿಧಿಯ ಮೀರದುಜ್ಜುಗಿಸೆ |ಪುಣ್ಯಶಾಲಿಯ ಪಾಡು - ಮಂಕುತಿಮ್ಮ ||
ತನ್ನ ಶಿಲುಬೆಯ ತಾನೆ ಹೊತ್ತನಲ ಗುರು ಯೇಸು? |ನಿನ್ನ ಕರ್ಮದ ಹೊರೆಯ ಬಿಡದೆ ನೀನೆ ಹೊರು ||ಖಿನ್ನನಾಗದೆ ತುಟಿಯ ಬಿಗಿದು ಶವಭಾರವನು |ಬೆನ್ನಿನಲಿ ಹೊತ್ತು ನಡೆ - ಮಂಕುತಿಮ್ಮ ||
ತನ್ನ ಹೊಳಹೊಳಪುಗಳ ನೆನೆನೆನೆದು ಮೈಮರೆತ |ರನ್ನವೋ ಬ್ರಹ್ಮ; ನೋಡವನು---ನಿಜಪಿಂಛ ||ವರ್ಣದೆಣಿಕೆಯಲಿ ತನ್ನನೆ ಮರೆತ ನವಿಲವೊಲು |ತನ್ಮಯನೊ ಸೃಷ್ಟಿಯಲಿ - ಮಂಕುತಿಮ್ಮ ||
ತನ್ನಯ ಮನೋರಥಂಗಳ ಚಕ್ರವೇಗದಿನೆ |ತನ್ನ ಮಣಿಹಾರಗಳ ಸಿಕ್ಕು ಬಿಗಿತದಿನೇ ||ತನ್ನ ಸಂಕಲ್ಪ ವಿಪರೀತದಿನೆ ಮಾನವನ |ಬೆನ್ನು ಮುರಿದೀತೇನೊ! - ಮಂಕುತಿಮ್ಮ ||
ತಪ್ಪನಿನಿತುಂ ಸೈಸದಪ್ಪಟದ ಗುಣಶಾಲಿ |ಕಪ್ಪು ಕಂಡು ಕನಲ್ವ ಕೆಂಡ ಗುಲಗಂಜಿ ||ಉಪ್ಪೊ ಸಪ್ಪೆಯೊ ನಿನ್ನ ಮೈಬೆವರು ನೆಕ್ಕಿ ತಿಳಿ |ಒಪ್ಪಿಹೆಯ ನೀನಜನ? - ಮಂಕುತಿಮ್ಮ ||
ತಮ್ಮೆಲ್ಲ ಹಸಿವುಗಳ ತಣಿಯಿಪನಿತನ್ಯೋನ್ಯ |ಹೊಮ್ಮುಗೌದಾರ್ಯ ಜನಜನಪದಂಗಳಲಿ ||ಬೊಮ್ಮನೆಲ್ಲರನಾಳ್ವನಿಹನೆನುವ ನೆನಪಿನಲಿ |ನೆಮ್ಮದಿಯ ಪಡೆಗೆ ಜಗ - ಮಂಕುತಿಮ್ಮ ||
ತರಚುಗಾಯವ ಕೆರೆದು ಹುಣ್ಣನಾಗಿಪುದು ಕಪಿ |ಕೊರತೆಯೊಂದನು ನೀನು ನೆನೆನೆನೆದು ಕೆರಳಿ ||ಧರೆಯೆಲ್ಲವನು ಶಪಿಸಿ; ಮನದಿ ನರಕವ ನಿಲಿಸಿ |ನರಳುವುದು ಬದುಕೇನೊ? - ಮಂಕುತಿಮ್ಮ ||
ತರಣಿ ಕಿರಣದ ನಂಟು ಗಗನ ಸಲಿಲದ ನಂಟು |ಧರಣಿ ಚಲನೆಯ ನಂಟು ಮರುತನೊಳ್ನಂಟು ||ಪರಿಪರಿಯ ನಂಟುಗಳಿನೊಂದು ಗಂಟೀ ವಿಶ್ವ |ಕಿರಿದು ಪಿರಿದೊಂದಂಟು - ಮಂಕುತಿಮ್ಮ ||
ತರಣಿದರ್ಶನಕಿಂತ ಕಿರಣಾನುಭವ ಸುಲಭ |ಪರಮಶಾಸ್ತ್ರಕ್ಕಿಂತ ಸರಿಯುದಾಹರಣೆ ||ಪರಮತತ್ತ್ವವ ಕಂಡ ಗುರುವನರಸುವುದೆಲ್ಲಿ? |ದೊರೆತಂದು ನೀಂ ಧನ್ಯ - ಮಂಕುತಿಮ್ಮ ||
ತರಣಿಶಶಿಪಥಗಳನು; ಧರೆವರುಣಗತಿಗಳನು |ಮರುದಗ್ನಿವೇಗಗಳ ನಿಯಮಿಸಿಹ ದಕ್ಷನ್ ||ನರನರಸಿಕೊಳಲಿ ದಾರಿಯ ತನಗೆ ತಾನೆಂದು |ತೊರೆದನೇತಕೆ ನಮ್ಮ? - ಮಂಕುತಿಮ್ಮ ||
ತರಿದುಬಿಡು; ತೊರೆದುಬಿಡು; ತೊಡೆದುಬಿಡು ನೆನಹಿಂದ |ಕರೆಕರೆಯ ಬೇರುಗಳ; ಮನದ ಗಂಟುಗಳ ||ಉರಕೆ ಸೊಗಸೆನಿಸಿದಾ ಪ್ರೀತಿಹಾರಮುಮೊರ್ಮೆ |ಉರುಳಪ್ಪುದಾತ್ಮಕ್ಕೆ - ಮಂಕುತಿಮ್ಮ ||
ತರುಜಾತಿ ಖಗಜಾತಿ ಮೃಗಜಾತಿಗಳು ನೂರು |ನರಜಾತಿ ಮಿಕ್ಕ ಜಾತಿಗಳಿಂದ ಬೇರೆ ||ನರರೊಳೋರೊರ್ವನುಂ ತಾನೊಂದು ಬೇರೆ ಜಗ |ಬೆರಕೆ ಸಾಮ್ಯಾಸಾಮ್ಯ - ಮಂಕುತಿಮ್ಮ ||
ತರುಣಿ ತನ್ನೊಡವೆಗಳ ತಳೆಯುತ್ತ ತೆಗೆಯುತ್ತ |ಪರಿಕಿಸುತೆ ಮುಕುರದಲಿ ಸೊಗಸುಗಳ ಪರಿಯ ||ಮರೆತೆಲ್ಲವನು ವಿಲಸಿಪಂತೆ ತಾಂ ವಿಶ್ವದಲಿ |ಮೆರೆಯುವನು ಪರಬೊಮ್ಮ - ಮಂಕುತಿಮ್ಮ ||
ತಲೆ ಕೊಡವ ತಳೆದಿರಲು; ಕೈ ಕತ್ತಿ ಪಿಡಿದಿರಲು |ಬಳುಕು ಹಗ್ಗದ ಮೇಲೆ ತಾನಡಿಯನಿಡುತ ||ಕೆಲ ಬಲಕೆ ಬೀಳದೆ ಮುನ್ನಡೆವ ಡೊಂಬನುಪಾಯ |ಕಲೆಯೆ ಜೀವನಯೋಗ - ಮಂಕುತಿಮ್ಮ ||