ಒಟ್ಟು 946 ಕಡೆಗಳಲ್ಲಿ , 1 ವಚನಕಾರರು , 945 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ದಿವಸದಿಂ ದಿವಸಕ್ಕೆ; ನಿಮಿಷದಿಂ ನಿಮಿಷಕ್ಕೆ |ಭವಿಷಿಯವ ಚಿಂತಿಸದೆ ಬದುಕ ನೂಕುತಿರು ||ವಿವರಗಳ ಜೋಡಿಸುವ ಯಜಮಾನ ಬೇರಿಹನು |ಸವೆಸು ನೀಂ ಜನುಮವನು - ಮಂಕುತಿಮ್ಮ ||
ದಿವಿಜಸುಧೆ ಬರಿಮಧುವೊ; ಹುಳಿಯುಪ್ಪುಮಿಶ್ರಿತವೊ? |ಅವನಿಯುಣಿಸಿನಲಿ ಷಡ್ರಸ ತಪ್ಪದಿಹುದು ||ಲವಲೇಶಮಾನುಮಿರದಿರೆ ಕಯ್ಪು ಜೀವನದಿ |ಪವಳಿಸಿರನೇ ನರನು? - ಮಂಕುತಿಮ್ಮ ||
ದಿವ್ಯಚರಿತಂಗಳ ಪ್ರತ್ಯುಕ್ತಿ ನರಚರಿತೆ |ಕಾವ್ಯವಿಜ್ಞಾನಗಳ್ ನಿಗಮಾನುಸರಗಳ್ ||ನವ್ಯಸಂಪದವಾರ್ಷಸಂಪದುದ್ಧೃತವಿಂತು |ಸವ್ಯಪೇಕ್ಷಗಳುಭಯ - ಮಂಕುತಿಮ್ಮ ||
ದೃಶ್ಯವೆಲ್ಲವು ನಶ್ಯವಾದೊಡೇಂ? ದೃಷ್ಟಿಗದು |ವಶ್ಯವಿರುವನಕದನು ದೃಷ್ಟಿಪುದೆ ಕಾರ್ಯಂ ||ವಿಶ್ವಾನುಭವವೆ ವಿಶ್ವಾತ್ಮಾನುಭವಕೆ ಪಥ |ನಶ್ಯದಿಂದವಿನಶ್ಯ - ಮಂಕುತಿಮ್ಮ ||
ದೃಷ್ಟಿಚುಕ್ಕೆಯದೊಂದನೆಲ್ಲ ಚೆಂದಂಗಳ್ಗ- |ಮಿಟ್ಟಿಹನು ಪರಮೇಷ್ಠಿ; ಶಶಿಗೆ ಮಶಿಯವೊಲು ||ಗುಟ್ಟೇನೊ? ರಕ್ಷೆಯೋ? ಸಿಂಗರವೊ? ಹೇಳನವೊ? |ಮಷ್ಟು ಸೃಷ್ಟಿಗೆ ಬೊಟ್ಟು - ಮಂಕುತಿಮ್ಮ ||
ದೇವದಾನವರ ರಣರಂಗ ಮಾನವಹೃದಯ |ಭಾವ ರಾಗ ಹಠಂಗಳವರ ಸೇನೆಗಳು ||ಭೂವಿಭವಜಯಗಳ ಭ್ರಾಂತಿಯಲಿ ಮರೆಯುವರು |ಜೀವಾಮೃತವನವರು - ಮಂಕುತಿಮ್ಮ ||
ದೇವನೇನತಿಶಯಿತಮಾನಿಸನೆ ಭೋಗಕ್ಕೆ? |ಹೂವುಣಿಸು ಮುಡುಪೊಡವೆಯವನಿಗಂ ಬೇಕೆ? ||ಆವುದೊಳ್ಳಿತೊ ತನಗೆ ನರನದನು ಪರಮಂಗೆ |ನೈವೇದಿಪುದು ಸಾಜ - ಮಂಕುತಿಮ್ಮ ||
ದೇವಮಂದಿರ ಭಜನೆ ಪೂಜೆ ಪ್ರಸಾದಗಳು |ಜೀವನದಲಂಕಾರ; ಮನಸಿನುದ್ಧಾರ ||ಭಾವವಂ ಕ್ಷುಲ್ಲಜಗದಿಂ ಬಿಡಿಸಿ ಮೇಲೊಯ್ವು- |ದಾವುದಾದೊಡಮೊಳಿತು - ಮಂಕುತಿಮ್ಮ ||
ದೇವರದಿದೆಲ್ಲ ದೇವರಿಗೆಲ್ಲವೆಂದೊರಲು- |ತಾವುದನುಮವನ ನಿರ್ಣಯಕೆ ಬಿಡದೆಯೆ ತಾಂ ||ದಾವನ್ತಬಡುತ ತನ್ನಿಚ್ಛೆಯನೆ ಘೋಷಿಸುವ |ಭಾವವೆಂತಹ ಭಕುತಿ? - ಮಂಕುತಿಮ್ಮ ||
ದೇವರೆಂಬುದದೇನು ಕಗ್ಗತ್ತಲೆಯ ಗವಿಯೆ? |ನಾವರಿಯಲಾರದೆಲ್ಲದರೊಟ್ಟು ಹೆಸರೆ? ||ಕಾವನೊರ್ವನಿರಲ್ಕೆ ಜಗದ ಕಥೆಯೇಕಿಂತು? |ಸಾವು ಹುಟ್ಟುಗಳೇನು? - ಮಂಕುತಿಮ್ಮ ||
ದೇವರ್ಕಳುದಿಸಿ ಮರೆಯಹರು; ದೇವತ್ವ ಚಿರ |ಜಾವ ದಿನ ಬಂದು ಪೋಗುವುವು; ಕಾಲ ಚಿರ ||ಜೀವದ ವ್ಯಕ್ತಿ ಸಾಯ್ವುದು; ಜೀವಸತ್ತ್ವ ಚಿರ |ಭಾವಿಸಾ ಕೇವಲವ - ಮಂಕುತಿಮ್ಮ ||
ದೇವಾಂಶ ಪಶ್ವಂಶಗಳ ಗಂಟು ಮಾನುಷತೆ |ಧೀವಿಮರ್ಶೆಯಿನೊಂದ ಸತ್ಕರಿಸಿ ಬಲಿಸಿ ||ಭಾವಪರಿಶೋಧನೆಯಿನಿನ್ನೊಂದ ದಂಡಿಪುದೆ |ಜೀವಪ್ರಕರ್ಷಗತಿ - ಮಂಕುತಿಮ್ಮ ||
ದೇಹವೆಂಬುದು ಕುದುರೆಯಾತ್ಮನದರಾರೋಹಿ |ವಾಹನವನುಪವಾಸವಿರಿಸೆ ನಡೆದೀತೆ? ||ರೋಹಿ ಜಾಗ್ರತೆದಪ್ಪೆ ಯಾತ್ರೆ ಸುಖ ಸಾಗೀತೆ? |ಸ್ನೇಹವೆರಡಕಮುಚಿತ - ಮಂಕುತಿಮ್ಮ ||
ದೇಹಾತುಮಂಗಳೆರಡಂಗಗಳು ಜೀವನಕೆ |ನೇಹದಿಂದೊಂದನೊಂದಾದರಿಸೆ ಲೇಸು ||ದಾಹಗೊಂಡಿರಲೊಂದು ಮಿಕ್ಕೊಂದಕೆಲ್ಲಿ ಸುಖ? |ದ್ರೋಹ ಬೇಡೊಂದಕಂ - ಮಂಕುತಿಮ್ಮ ||
ದೈವಕೃಪೆಯೆನುವುದೇಂ? ಪರಸತ್ತ್ವನವವೃಷ್ಟಿ |ಜೀವಗುಣ ಪಕ್ವಪಟ್ಟಂತದರ ವೇಗ ||ಭಾವಚೋದನೆಗಳಲಿ ಬಾಹ್ಯಸಾಧನೆಗಳಲಿ |ತೀವಿ ದೊರೆಕೊಳುವುದದು - ಮಂಕುತಿಮ್ಮ ||