ಒಟ್ಟು 946 ಕಡೆಗಳಲ್ಲಿ , 1 ವಚನಕಾರರು , 945 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ದೈವವೆನಿಸಿರುತೆ ವಿಶ್ವಪ್ರಕೃತಿಶಕ್ತಿಯಲಿ |ಜೀವವಾಸನೆಗಳಲಿ ಪೂರ್ವಕೃತವೆನಿಸಿ ||ಧೀವರ್ತನೆಯಲಿ ಪೌರುಷವೆನಿಸಿ ಪರಸತ್ತ್ವ |ತ್ರೈವಿಧದೊಳಿರುತಿಹುದು - ಮಂಕುತಿಮ್ಮ ||
ದೊರೆ ಮೂವರಿರುವಲ್ಲಿ ಸರಿಯಿಹುದೆ ಸೋಜಿಗವು |ಕೊರತೆ ಹೆಚ್ಚಿಕೆಗಳಿರಲಚ್ಚರಿಯದೇನು? ||ಬರಲಿ ಬರುವುದು; ಸರಿವುದೆಲ್ಲ ಸರಿಯಲಿ; ನಿನಗೆ |ಪರಿವೆಯೇನಿಲ್ಲೆಲವೊ - ಮಂಕುತಿಮ್ಮ ||
ದೊರೆಗೆ ನೀಂ ಬಿನ್ನಯಿಸೆ ನೂರೆಂಟು ಬಯಕೆಗಳ |ಸರಿ ತನಗೆ ತೋರ್ದನಿತನ್ ಅದರೊಳವನೀವಂ ||ಅರಿಕೆಯೆಲ್ಲವ ನಡಸದಿರೆ ದೊರೆಯೆ ಸುಳ್ಳಹನೆ? |ಕರುಣೆ ನಿರ್ಬಂಧವೇಂ? - ಮಂಕುತಿಮ್ಮ ||
ದೊರೆತನದ ಜಟಿಲಗಳ; ಕುಟಿಲಗಳ; ಕಠಿನಗಳ |ಭರತನುಳಿಸಿದನೆ ರಾಮನ ತೀರ್ಪಿಗೆಂದು? ||ಅರಿವಿಗಿಹ ಕರ್ತವ್ಯಭಾರವನು ತಾನರಿತು |ಧುರವ ಧರಿಸಿದನವನು - ಮಂಕುತಿಮ್ಮ ||
ದೊರೆಯ ವೇಷವ ಧರಿಸಿ ಮರೆಯುವೆಯ ಮೀಸೆಯನು? |ತಿರುಕಹಾರುವನಾಗಿ ಮೀಸೆ ತಿರಿಚುವೆಯ? ||ಇರುವುದವನವನಿಗವನವನ ತಾಣದ ಧರ್ಮ |ಅರಿವೆ ಋತುಗತಿಯಂತೆ - ಮಂಕುತಿಮ್ಮ ||
ದೊರೆವ ಜೀತಕೆ ದುಡಿತ; ಮರುದಿನದ ಚಿಂತೆ ಮಿತ |ಹೊರೆಯ ಹಗುರಾಗಿಸುವ ಕೆಳೆಯರೊಡನಾಟ ||ಸರಳತೆಯ ಪರಿತುಷ್ಟಿ; ಪರಮಾರ್ಥ ದೃಷ್ಟಿಯಿವು |ಸರಿಗೂಡೆ ಸುಕೃತವದು - ಮಂಕುತಿಮ್ಮ ||
ದೋಷಿಯವನಿವನು ಪಾಪಿಯೆನುತ್ತ ಗಳಹದಿರು |ಆಶೆಯೆನಿತವನು ಸಹಿಸಿದನೊ| ದಹಿಸಿದನೊ! ||ವಾಸನೆಗಳವನನೇನೆಳೆದವೋ ಬಲವೇನೊ! |ಪಾಶಬದ್ಧನು ನರನು - ಮಂಕುತಿಮ್ಮ ||
ದ್ರಾಕ್ಷಿರಸವೇನಲ್ಲ ಜೀವನದ ತಿರುಳಾರ್ಗಮ್ |ಇಕ್ಷುದಂಡದವೊಲದು ಕಷ್ಟಭೋಜನವೆ ||ದಕ್ಷತೆಯಿನಿಡಿಯುವಂಗೊಂದೆರಡು ಗುಟುಕು ರಸ |ಮಾಕ್ಷಿಕರು ಮಿಕ್ಕೆಲ್ಲ - ಮಂಕುತಿಮ್ಮ ||
ದ್ವಂದ್ವಲೋಕವನಕ್ಷಿಯುಗದೆ ಪೊರೆದು ತ್ರ್ಯಕ್ಷ- |ನೊಂದರಿಂ ಮಾಯೆಯಾಟವ ಮೀರುವಂತೆ ||ಇಂದ್ರಿಯಾತೀತದರ್ಶನಕೆ ಬೇರೊಂದಕ್ಷಿ |ಸಂಧಾನವನು ಗಳಿಸೊ - ಮಂಕುತಿಮ್ಮ ||
ದ್ವೇಷರೋಷಗಳವೊಲೆ ನೇಹಮುಂ ಮೋಹಮುಂ |ಪಾಶವಾಗಲ್ಪಹುದು ನಿನಗೆ ಮೈಮರಸಿ ||ವಾಸನೆಗಳುರುಬಿ ಚಿತ್ತಜ್ವರಂಗಳ ಬಿತ್ತಿ |ಮೋಸದಲಿ ಕೊಲ್ಲುವುವೊ - ಮಂಕುತಿಮ್ಮ ||
ದ್ವೈತವೇನದ್ವೈತವೇನಾತ್ಮದರ್ಶನಿಗೆ? |ಶ್ರೌತಾದಿವಿಧಿಯೇನು? ತಪನಿಯಮವೇನು? ||ನೀತಿ ಸರ್ವಾತ್ಮಮತಿಯದರಿನಮಿತಪ್ರೀತಿ |ಭೀತಿಯಿಲ್ಲದನವನು - ಮಂಕುತಿಮ್ಮ ||
ಧನ್ಯ ಹೊಲೆಯರ ನಂದ; ಹಿಡಿದುದವನನು ಕನಸು |ಸ್ವರ್ಣಸಭೆಯಾ ಶೈವತಾಂಡವದ ಕನಸು ||ಅನ್ಯಚಿಂತೆಗಳನದು ಬಿಡಿಸುತವನಾತ್ಮವನು |ಚಿನ್ಮಯಕೆ ಸೇರಿಸಿತು - ಮಂಕುತಿಮ್ಮ ||
ಧನ್ಯತಮವಾ ಘಳಿಗೆ; ಪುಣ್ಯತಮವಾ ಘಳಿಗೆ |ನಿನ್ನ ಮಮತೆಯ ನೂಲ ವಿಧಿಯೆ ಪರಿದಂದು ||ಉನ್ನತಿಯಿನಾತ್ಮವನು ತಡೆದಿಡುವ ಪಾಶಗಳು |ಛಿನ್ನವಾದಂದೆ ಸೊಗ - ಮಂಕುತಿಮ್ಮ ||
ಧರಣಿಗೋಳವು ಮೂಸೆ; ಜೀವಗಳನದರೊಳಗೆ |ಪರಿಶುದ್ಧಿಗೊಳಿಸುವುದು ಸಂಸಾರತಾಪ ||ಪರಿಪರಿಯ ಬಂಧುಧರ್ಮದಿನ್ ಅಹಂಮತಿ ಕರಗೆ |ಹರಡಿ ಹಬ್ಬುವುದಾತ್ಮ - ಮಂಕುತಿಮ್ಮ ||
ಧರಿಸಿರ್ಪುದಲ ಧರ್ಮ? ಧರಿಸು ಜೀವನಧುರವ |ಚರಿಸು ಲೋಕದ ಮಾರ್ಗಗಳಲಿ ಹಿತವರಿತು ||ಸರಿಪಡಿಸಿ ದಾರಿಗಳ ಕೆರೆ ತೋಪು ಸತ್ರಗಳ |ನೆರವಾಗು ಪಯಣಕ್ಕೆ - ಮಂಕುತಿಮ್ಮ ||