ಕಗ್ಗ ಸಂಚಯ alpha
  • ಡಿ.ವಿ.ಜಿ
  • ಕಗ್ಗ
  • ಸಂಶೋಧನೆ
  • ಪದಕೋಶ
  • ಸಂಪರ್ಕಿಸಿ
  • ನಮ್ಮ ಬಗ್ಗೆ
ಇದರಂತೆ : ಇದನ್ನು :

ಒಟ್ಟು 39 ಕಡೆಗಳಲ್ಲಿ , 1 ವಚನಕಾರರು , 35 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವ್ಯಸನಕಾರಣವೊಂದು ಹಸನಕಾರಣವೊಂದು |ರಸಗಳೀಯೆರಡಕಿಂತಾಳವಿನ್ನೊಂದು ||ಭೃಶವಿಶ್ವಜೀವಿತಗಭೀರತೆಯ ದರ್ಶನದ |ರಸವದದ್ಭುತಮೌನ - ಮಂಕುತಿಮ್ಮ ||
--------------
ಡಾ. ಡಿ.ವಿ.ಗುಂಡಪ್ಪ

ಸಚ್ಚಿದಾನಂದಂಗಳಾತ್ಮ ಸ್ವಭಾವ ರಸ |ಬಚ್ಚಿಡುವುದದನು ಜೀವಿತೆಯ ಮಾಯಿಕತೆ ||ಇಕ್ಷುವೊಲ್ ಜೀವ; ಗಾಣದವೊಲ್ ಜಗನ್ಮಾಯೆ |ನಿಚ್ಚವಿಳೆಯಾಲೆಮನೆ - ಮಂಕುತಿಮ್ಮ ||

ಸಾರಸುಖರಸನಿಧಿ ಪರಬ್ರಹ್ಮನಿರುತಿರಲ್ |ಸ್ವಾರಸ್ಯಹೀನವೆನ್ನುವರೆ ಜೀವಿತವ? ||ಪೌರುಷ ಪ್ರೇಮ ಸೌಂದರ್ಯಗಳುಮಂತೆಯೇ |ಸ್ವಾರಸ್ಯವೊ ರಹಸ್ಯ - ಮಂಕುತಿಮ್ಮ ||

ಸೌಂದರ್ಯ ಬಾಂಧವ್ಯಗಳನು ಬರಿದೆನಲಹುದೆ? |ಹೊಂದಿಸವೆ ಕುಂದಿಸವೆ ಜೀವಿಗಳನವುಗಳ್? ||ಸಿಂಧುಪೂರದಿ ಬಿದ್ದವರೊಳೊಬ್ಬರೊಬ್ಬರನು |ಅಂದಿಕೊಳಲದು ಬರಿದೆ? - ಮಂಕುತಿಮ್ಮ ||

ಸೌಂದರ್ಯವೊಂದು ದೈವರಹಸ್ಯ; ಸೃಷ್ಟಿವೊಲು |ನಿಂದಿರ್ಪುದದರಾಶೆಯಿನೆ ಜೀವಿತಾಶೆ ||ಅಂದುವುದು ಕಣ್ಣಿಗದು ಸಂಸ್ಕೃತಿಗೆ ತಕ್ಕಂತೆ |ಚೆಂದದರಿವೆ ತಪಸ್ಸೊ - ಮಂಕುತಿಮ್ಮ ||

ಹಿಂದೆ 1 2 3 ಮುಂದೆ
©2014 - 2020 ಕನ್ನಡ ಸಂಚಯ | ಸಾಹಿತ್ಯ ಸಂಶೋಧನೆ ಹಾಗೂ ಅಧ್ಯಯನ ವೇದಿಕೆ