ಒಟ್ಟು 35 ಕಡೆಗಳಲ್ಲಿ , 1 ವಚನಕಾರರು , 34 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಸದ್ದು ಮಾಡದೆ ನೀನು ಜಗಕೆ ಬಂದವನಲ್ಲ |ಒದ್ದಾಟ ಗುದ್ದಾಟ ಬಾಳೆಲ್ಲವಾಯ್ತು ||ಗದ್ದಲವ ಬಿಡಲು ಕಡೆದಿನವಾನುಮಾದೀತೆ? |ನಿದ್ದೆವೊಲು ಸಾವ ಪಡೆ - ಮಂಕುತಿಮ್ಮ ||
ಸೈನಿಕನು ನೀನು; ಸೇನಾಧಿಪತಿಯೆಲ್ಲಿಹನೊ! |ಆಣತಿಯ ಕಳುಹುತಿಹನದನು ನೀನರಿತು ||ಜಾಣಿನಧಟಿಂ ಪೋರು; ಸೋಲುಗೆಲವವನೆಣಿಕೆ |ಕಾಣಿಸದನಾಳ್ಕೆಯದು - ಮಂಕುತಿಮ್ಮ ||
ಹೆಸರು ಹೆಸರೆಂದು ನೀಂ ಬಸವಳಿವುದೇಕಯ್ಯ? |ಕಸದೊಳಗೆ ಕಸವಾಗಿ ಹೋಹನಲೆ ನೀನು? ||ಮುಸುಕಲೀ ಧರೆಯ ಮರೆವೆನ್ನನ್; ಎನ್ನುತ ಬೇಡು |ಮಿಸುಕದಿರು ಮಣ್ಣಿನಲಿ - ಮಂಕುತಿಮ್ಮ ||
ಹೊನ್ನೆಂದು ಜಗದಿ ನೀಂ ಕೈಗೆ ಕೊಂಡುದನು ವಿಧಿ |ಮಣ್ಣೆನುವನ್; ಅವನ ವರ ಮಣ್ಣೆನುವೆ ನೀನು ||ಭಿನ್ನಮಿಂತಿರೆ ವಸ್ತುಮೌಲ್ಯಗಳ ಗಣನೆಯೀ |ಪಣ್ಯಕ್ಕೆ ಗತಿಯೆಂತೊ? - ಮಂಕುತಿಮ್ಮ ||