ಒಟ್ಟು 34 ಕಡೆಗಳಲ್ಲಿ , 1 ವಚನಕಾರರು , 33 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಹಟವಾದಕೆಡೆಯೆಲ್ಲಿ ಮನುಜಪ್ರಪಂಚದಲಿ? |ಸೆಟೆಯೆಷ್ಟೊ ದಿಟವೆಷ್ಟೊ ಬೆರೆತಿರುವುವಿಲ್ಲಿ ||ಪಟುವಾಗಿ ನಿಲಲಹುದೆ ಮಣಲೊಳೆಸಗಿದ ಗೋಡೆ? |ಕಟುತೆ ಸಲ್ಲದು ಜಗಕೆ - ಮಂಕುತಿಮ್ಮ ||
ಹಳೆಯ ಮಲೆ ಹಳೆಯ ನೆಲವಾದೊಡೆಯುಮೊರತೆ ಮಳೆ |ಹೊಳೆನೀರನಾವಗಂ ಪೊಸದಾಗಿಸುವವೊಲ್ ||ಹಳೆಯ ಕರ್ಮವ ಹೊಸದು ಕೊಚ್ಚಿ ಪೌರುಷನದಿಯ |ಬೆಳೆಯಿಪುದು ನವತೆಯಲಿ - ಮಂಕುತಿಮ್ಮ ||
ಹುರಿಯುರುಳೆ ಹಾವಲ್ಲವಾದೊಡಂ ಮಬ್ಬಿನಲಿ |ಹರಿದಾಡಿದಂತಾಗೆ ನೋಳ್ಪವಂ ಬೆದರಿ ||ಸುರಿಸುವಾ ಬೆವರು ದಿಟ; ಜಗುವುಮಂತುಟೆ ದಿಟವು |ಜರೆಯದಿರು ತೋರ್ಕೆಗಳ - ಮಂಕುತಿಮ್ಮ ||