ಕಗ್ಗ ಸಂಚಯ alpha
  • ಡಿ.ವಿ.ಜಿ
  • ಕಗ್ಗ
  • ಸಂಶೋಧನೆ
  • ಪದಕೋಶ
  • ಸಂಪರ್ಕಿಸಿ
  • ನಮ್ಮ ಬಗ್ಗೆ
ಇದರಂತೆ : ಇದನ್ನು :

ಒಟ್ಟು 48 ಕಡೆಗಳಲ್ಲಿ , 1 ವಚನಕಾರರು , 36 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶೀತಾಳೆ ಸಿಡುಬು ಶಿಶುಗಳ ಕುಲುಕಿ ತೆರಳುವುದು |ಪ್ರೀತಿ ಕಾಮನೆಗಳಷ್ಟಿಷ್ಟು ಬೆಳೆದವರ ||ಯಾತನೆಗಳಿಂ ಕುದಿಸಿ ಕುಲುಕಿ ಬಳಿಕಾರುವುವು |ಕಾತರತೆ ಕಳೆಯೆ ಸುಖ - ಮಂಕುತಿಮ್ಮ ||
--------------
ಡಾ. ಡಿ.ವಿ.ಗುಂಡಪ್ಪ

ಸಾಕುಸಾಕೆನಿಸುವುದು ಲೋಕಸಂಪರ್ಕಸುಖ |ಸೋಕಿದೆಡೆ ತುರಿಯನೆಬ್ಬಿಸುವ ತುರುಚಿಯದು ||ಮೂಕನವೆ ತುರಿಸದಿರೆ; ತುರಿಯುತಿರೆ ಹುಣ್ಣುರಿತ |ಮೂಕನಪಹಾಸ್ಯವದು - ಮಂಕುತಿಮ್ಮ ||

ಸಾರಸುಖರಸನಿಧಿ ಪರಬ್ರಹ್ಮನಿರುತಿರಲ್ |ಸ್ವಾರಸ್ಯಹೀನವೆನ್ನುವರೆ ಜೀವಿತವ? ||ಪೌರುಷ ಪ್ರೇಮ ಸೌಂದರ್ಯಗಳುಮಂತೆಯೇ |ಸ್ವಾರಸ್ಯವೊ ರಹಸ್ಯ - ಮಂಕುತಿಮ್ಮ ||

ಸಾರ್ವಲೌಕಿಕಸೌಖ್ಯ ನೆಲಸುವನ್ನೆಗಮಿಳೆಯೊ- |ಳೊರ್ವನುಂ ಸುಖಿಯಲ್ತು; ದಿಟದಿ; ಪೂರ್ಣದಲಿ ||ಒರ್ವನುಬ್ಬಸದ ಬಿಸಿ ವಿಷವಾಯುವಾಗಿ ತಾ |ನುರ್ವರೆಯ ಮುಸುಕೀತು - ಮಂಕುತಿಮ್ಮ ||

ಸುಳ್ಳಲ್ಲ ಕಥೆಯ ತಿರುಕನು ಕಂಡ ಸವಿಗನಸು |ಚೆಲ್ಲಿತಲ್ಲವೆ ಹಿಟ್ಟು ಘಟವನವನೊದೆಯೆ? ||ಜಳ್ಳು ಸುಖದುಃಖವಿರಬಹುದಾದೊಡದರ ಮೊನೆ |ಮುಳ್ಳಹುದು ಜೀವಕ್ಕೆ - ಮಂಕುತಿಮ್ಮ ||

ಸ್ವಾತಿ ಮಳೆಹನಿ ಬೀಳ್ವ; ಶುಕ್ತಿ ಬಾಯ್ದೆರೆದೇಳ್ವ |ಕೌತುಕದ ಸಮಯಯೋಗದೆ ಮೌಕ್ತಿಕ ಫಲ ||ಪ್ರೀತಿ ಸುಖ ಸತ್ಯದರ್ಶನ ಶಾಂತಿಗಳ ಹುಟ್ಟುಮ್ |ಆ ತೆರದ ಯೋಗದಿನೆ - ಮಂಕುತಿಮ್ಮ ||

ಹಿಂದೆ 1 2 3 ಮುಂದೆ
©2014 - 2020 ಕನ್ನಡ ಸಂಚಯ | ಸಾಹಿತ್ಯ ಸಂಶೋಧನೆ ಹಾಗೂ ಅಧ್ಯಯನ ವೇದಿಕೆ