ಒಟ್ಟು 63 ಕಡೆಗಳಲ್ಲಿ , 1 ವಚನಕಾರರು , 60 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ನಭದ ಬಲಯೊಳನಂತ; ಮನದ ಗುಹೆಯೊಳನಂತ |ವುಭಯದಾ ನಡುವೆ ಸಾದ್ಯಂತ ಜೀವಕಥೆ ||ವಿಭುವೊಬ್ಬನೀ ಗಾಳಿಬುಡ್ಡೆಗಳನೂದುವನು |ಹಬೆಗುಳ್ಳೆಯೋ ಸೃಷ್ಟಿ - ಮಂಕುತಿಮ್ಮ ||
ನಯದಿಂದ ಸೋಕು; ನೀಂ ದಯೆಯಿಂದ ನೋಡದನು |ಭಯದಿನೋಲಗಿಸು; ನೀಂ ಪೂಜೆಗೈಯದನು ||ಸ್ವಯಮಂಕುರಿತ ಸಕಲ ವಿಶ್ವಸತ್ತ್ವವೊ; ಜೀವ |ಪ್ರಿಯತಮವೊ ಸೃಷ್ಟಿಯಲಿ - ಮಂಕುತಿಮ್ಮ ||
ಪರಮಾಣುವಿಂ ಪ್ರಪಂಚಗಳ ಸಂಯೋಜಿಪುದು |ಮರೆಯಿಂದ ಸೃಷ್ಟಿಯಂತ್ರವ ಚಾಲಿಸುವುದು ||ಚರಲೀಲೆಯಲಿ ಜೀವವೆನಿಪ ಚೈತನ್ಯವದು |ಪರಸತ್ತ್ವಶಕ್ತಿಯೆಲೊ - ಮಂಕುತಿಮ್ಮ ||
ಪರಿಪರಿಯ ರೂಪಕಾಂತಿಗಳ ಕಣ್ಣಾಗಿಸುವ |ಪರಿಪರಿಯ ಫಲಮಧುರಗಳ ರಸನೆಗುಣಿಪ ||ಪರಿಪರಿಯ ಕಂಠರವಗಳ ಕಿವಿಗೆ ಸೋಕಿಸುವ |ಗುರು ಸೃಷ್ಟಿ ರಸಿಕತೆಗೆ - ಮಂಕುತಿಮ್ಮ ||
ಪರಿಪರಿಯ ರೂಪಿನಲಿ ಕಾಂತಿಯಲಿ ರಾಗದಲಿ |ನೆರೆಯಿಸುತ ಪರಿಪರಿಯ ರಸಗಳಂ ಪ್ರಕೃತಿ ||ಕೆರಳಿಸುತ ಹಸಿವುಗಳ; ಸವಿಗಳನು ಕಲಿಸುವಳು |ಗುರು ರುಚಿಗೆ ಸೃಷ್ಟಿಯಲ - ಮಂಕುತಿಮ್ಮ ||
ಪೊಸರಸಂ ಬೇರಿಗನುದಿನಮೊದವಿ ಧರೆಯಿಂದ |ಸಸಿಗೆ ಹೊಸತಳಿರ ತಲೆಯಲಿ ಮುಡಿಸುವಂತೆ ||ಹೊಸ ಸೃಷ್ಟಿಸತ್ತ್ವಮೆತ್ತಣಿನೊ ಬರುತನುದಿನಂ |ಪೊಸತಾಗಿಪುದು ಜಗವ - ಮಂಕುತಿಮ್ಮ ||
ಪ್ರಕೃತಿಯಿಂ ಪೊರಗಿರುವ ನರನಾರು ಸೃಷ್ಟಿಯಲಿ? |ಸ್ವಕೃತಿಯೆಂದವನೆನ್ನುವುದವಳಿರದೊಡಿರದು ||ಸುಕೃತವೆನಿಸುವುದವಳ ನೀಂ ವಶಕೆ ಕೊಳುವ ನಯ |ವಿಕೃತಿಗೆಡೆಯಾಗದಿರೊ - ಮಂಕುತಿಮ್ಮ ||
ಪ್ರೇಮಬೀಜಗಳಿಹುವು ವೈರಬೀಜಗಳವೊಲೆ |ಸೌಮ್ಯಮುಂ ಸಂಕ್ಷೋಭೆಯಂತೆ ಪ್ರಕೃತಿಯಲಿ ||ಭ್ರಾಮಕದ ಸೃಷ್ಟಿಯಾ ವಿಷಮಲಕ್ಷಣಗಳಲಿ |ಸಾಮರಸ್ಯವನರಸೊ - ಮಂಕುತಿಮ್ಮ ||
ಬಚ್ಚಿಟ್ಟುಕೊಂಡಿಹುದೆ ಸತ್ಯ ಮಿಥ್ಯೆಯ ಹಿಂದೆ? |ನಚ್ಚುವುದೆ ಮರೆಯೊಳಿಹುದನೆ ಸತ್ಯವೆಂದು? ||ಅಚ್ಚರಿಯ ತಂತ್ರವಿದು; ಬ್ರಹ್ಮ ಸೃಷ್ಟಿಗಳೇಕೊ |ಮುಚ್ಚಿಹವು ಸಾಜತೆಯ - ಮಂಕುತಿಮ್ಮ ||
ಬರೆವ ಹಲಗೆಯನೊಡೆದು ಬಾಲಕನು ತಾನದನು |ಮರಳಿ ಜೋಡಿಪೆನೆನ್ನುತಾಯಾಸಗೊಳುತ ||ಸರಿಚೌಕಗೈವಾಟದಲಿ ಜಗವ ಮರೆವಂತೆ |ಪರಬೊಮ್ಮ ಸೃಷ್ಟಿಯಲಿ - ಮಂಕುತಿಮ್ಮ ||
ಬಹುರಹಸ್ಯವೊ ಸೃಷ್ಟಿ; ಬಹುರಹಸ್ಯವೊ ಜೀವ |ಅಹುದದಲ್ಲವಿದೆಂಬ ವಾದ ಬರಿ ಹರಟೆ ||ಗುಹೆಯೊಳಿಹುದೆಲ್ಲ ತತ್ತ್ವಗಳ ತತ್ತ್ವದ ಮೂಲ |ಬಹಿರಂತರ ರಹಸ್ಯ - ಮಂಕುತಿಮ್ಮ ||
ಬ್ರಹ್ಮವೇ ಸತ್ಯ; ಸೃಷ್ಟಿಯೆ ಮಿಥ್ಯೆಯೆನ್ನುವೊಡೆ |ಸಂಬಂಧವಿಲ್ಲವೇನಾ ವಿಷಯಯುಗಕೆ? ||ನಮ್ಮ ಕಣ್ಮನಸುಗಳೆ ನಮಗೆ ಸಟೆ ಪೇಳುವೊಡೆ |ನೆಮ್ಮುವುದದಾರನೋ? - ಮಂಕುತಿಮ್ಮ ||
ಮರ ತನ್ನ ಹೆತ್ತ ಬೀಜವನಿಲ್ಲವೆನಿಸಿ ವಿ- |ಸ್ತರಿಸುವಂದದಿ; ಸೃಷ್ಟಿ ತನ್ನ ಮೂಲವನು ||ಮರೆಮಾಚಿ ತಾನೆ ಮೆರೆಯುತ್ತಿಹುದು ಕಣ್ಗಳಿಗೆ |ನೊರೆ ಸೃಷ್ಟಿ ಪಾಲ್ ಬ್ರಹ್ಮ - ಮಂಕುತಿಮ್ಮ ||
ಮೆರೆಯುವುವು ನೂರಾರು ಮೈಮೆಗಳು ಸೃಷ್ಟಿಯಲಿ |ಧರಣಿಯವು; ಗಗನದವು; ಮನುಜಯತ್ನದವು ||ಪಿರಿದೆಂಬೆನವುಗಳೊಳು ಧರುಮವರಿತವನೊಲುಮೆ |ಅರಿವುಳ್ಳೊಲುಮೆ ಪಿರಿದು - ಮಂಕುತಿಮ್ಮ ||
ವಿವಿಧರಸಗಳ ಭಟ್ಟಿ; ಸೌಂದರ್ಯಕಾಮೇಷ್ಟಿ |ಕವಿಜಗತ್ಸೃಷ್ಟಿಯದು; ಕಲೆಗನಾಕೃಷ್ಟಿ ||ಗವಿಯೊಳಗಣ ಪ್ರಕೃತಿಯಂತ್ರ ವೈಚಿತ್ರ್ಯವದು |ತಪಸೊಂದೆ ಪಥವದಕೆ - ಮಂಕುತಿಮ್ಮ ||