ಒಟ್ಟು 4119 ಕಡೆಗಳಲ್ಲಿ , 1 ವಚನಕಾರರು , 937 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ನರರ ಸ್ವಭಾವ ವಕ್ರಗಳನೆಣಿಸುವುದೇಕೆ? |ಗಿರಿ ಕಣಿವೆಗಳ ಗಣಿಸಿ ರೋಷಗೊಳ್ಳುವೆಯೇಂ? ||ಸುರೆ ಗರಲ ಸುಧೆಗಳ್ ಅಬ್ಧಿಯಲಿ ಸೋದರರಲ್ತೆ |ಅರಿತೊಗ್ಗು ಸಾಜಕ್ಕೆ - ಮಂಕುತಿಮ್ಮ ||
ನರರವೊಲೆ ಸುರರುಮಲೆದಲೆದು ಮರೆಯಾಗಿಹರು |ಭರತದೇಶದೊಳಮೈಗುಪ್ತಯವನರೊಳಂ ||ಸುರ ನಾಮ ರೂಪಗಳಸಂಖ್ಯಾತ; ನಿಜವೊಂದು |ತೆರೆ ಕೋಟಿ ಕಡಲೊಂದು - ಮಂಕುತಿಮ್ಮ ||
ನರವಿವೇಕವದೇನು ಬರಿಯ ಮಳೆನೀರಲ್ಲ |ಕೆರೆಯ ನೀರ್ ಊರ ಮೈಸೋಂಕುಗಳ ಬೆರಕೆ ||ಧರೆಯ ರಸವಾಸನೆಗಳಾಗಸದ ನಿರ್ಮಲದ |ವರವ ಕದಡಾಗಿಪುವು - ಮಂಕುತಿಮ್ಮ ||
ನಲಿಸುವೊಲಿಸುವ; ಕೆಣಕಿ ಕಾಡಿಸುವ; ಮುಳಿಯಿಸುವ |ಕೆಳೆ ನಂಟು ಹಗೆ ಕಲಹ ಕುಹಕದೋಲೆಗಳಂ ||ಹಲಬರಿಗೆ ಹಂಚಿ ಬಾರೆಂದು ವಿಧಿ ನೇಮಿಸಿಹ |ಇಳೆಯಂಚೆಯಾಳು ನೀಂ - ಮಂಕುತಿಮ್ಮ ||
ನವನವ ಪ್ರಶ್ನೆಗಳು; ನವನವ ಪರೀಕ್ಷೆಗಳು |ದಿವಸಾಬ್ದಯುಗ ಚಕ್ರ ತಿರುತಿರುಗಿದಂತೆ ||ಪ್ರವಹಿಪ್ಪುವದರಂತೆ ಪೌರುಷ ಹಿತಪ್ರಜ್ಞೆ |ಅವಿರತದ ಚೈತನ್ಯ - ಮಂಕುತಿಮ್ಮ ||
ನಶ್ವರಾಕೃತಿ ನಾಮಮಯ ವಿಶ್ವವಾರ್ಧಿಯಿದು |ಶಾಶ್ವತಬ್ರಹ್ಮದುಚ್ಛ್ವಾಸ ಘನ ಬಿಂದು ||ನಿಶ್ವಸಿತದಲೆಗಳನೆ ಪಿಡಿದು ಗುರಿಯರಿತೀಜೆ |ವಿಶ್ವಮೂಲಾಪ್ತಿಯಲ - ಮಂಕುತಿಮ್ಮ ||
ನಾಚಿಕೆಯದೇಕೆ ನೀಂ ಬದುಕಿನಲಿ ಸೊಗವಡಲು? |ಚಾಚುತಿಹುದಾತ್ಮ ನಾಲಗೆಯ ದೆಸೆದೆಸೆಗೆ ||ಬಾಚಿಕೊಳಲಮೃತಕಣಗಳನ್ನೆಲ್ಲ ತನ್ನೆಡೆಗೆ |ಸಾಜ ಸೊಗವಾತ್ಮಂಗೆ - ಮಂಕುತಿಮ್ಮ ||
ನಾಚಿಕೆಯನಾಗಿಪುವು ನಮ್ಮ ಸುಖದಾತುರದ |ಯೋಚನೆಗಳವನು ಮರುವಗಲು ಪರಿಕಿಸಲು ||ಚಾಚಿದ್ದ ರಸನೆ ತಾನೊಳಸೇದಿಕೊಳ್ಳುವುದು |ರೇಚನವದಾತ್ಮಕ್ಕೆ - ಮಂಕುತಿಮ್ಮ ||
ನಾಟಕದೊಳನುವಿಂದ ಬೆರೆತದನು ಮೆಚ್ಚೆನಿಸಿ |ನೋಟಕನುಮಾಗಿ ತಾಂ ನಲಿದು ನಲಿಯಿಸುವಾ ||ಪಾಠವನು ಕಲಿತವನೆ ಬಾಳನಾಳುವ ಯೋಗಿ |ಆಟಕಂ ನಯವುಂಟು - ಮಂಕುತಿಮ್ಮ ||
ನಾಟಕವ ನೋಡು ಬ್ರಹ್ಮಾಂಡರಂಗಸ್ಥಲದಿ |ಕೋಟಿ ನಟರಾಂತಿಹರು ಚಿತ್ರಪಾತ್ರಗಳ ||ಆಟಕ್ಕೆ ಕಥೆಯಿಲ್ಲ ಮೊದಲಿಲ್ಲ ಕಡೆಯಿಲ್ಲ |ನೋಟಕರು ಮಾಟಕರೆ - ಮಂಕುತಿಮ್ಮ ||
ನಾನು ನಾನೇ ನಾನೆನುತ್ತೆ ಕಿರಿಕೊಡದ ನೀರ್ |ಗಾನಗೆಯ್ವುದು ಹೆಮ್ಮೆಯಿಂ ಕಡಲ ಮರೆತು ||ನೂನದಿಂದೆಲ್ಲವೆನುವಬ್ಧಿಯೊಳಗದನಿರಿಸೆ |ಮೌನವದು ಮಣ್ಕರಗಿ - ಮಂಕುತಿಮ್ಮ ||
ನಾನೆನುವವನೆ ವಿಶ್ವಚಕ್ರನಾಭಿಯವಂಗೆ |ಕಾಣಬಹ ದಿಗ್ವಿವರ ಚಕ್ರನೇಮಿಪಥ ||ಆನಂತ್ಯವೀ ಜಗಚ್ಚಕ್ರನಾಭಿಕ್ರಮತೆ |ತಾನೊಂದೆ ಸತ್ತ್ವವದು - ಮಂಕುತಿಮ್ಮ ||
ನಾನೆಂಬುದೊಂದಂಶವಿತರ ಜಗವೊಂದಂಶ |ನಾನು ನೀನುಗಳಳಿದ ಸರ್ವೈಕ್ಯವೊಂದು ||ಧ್ಯಾನಿಸುತ್ತೈಕ್ಯವನು ಪಾಲಿಸುವುದುಭಯವನು |ಜಾಣಿನಾ ನಾಟಕವೊ - ಮಂಕುತಿಮ್ಮ ||
ನಾಯಕನಿಗಿರಲಿ ರಣವಿಜಯ ಪರಿಭವ ಗಣನೆ |ಆಯವದರಿಂ ಭಟನ ಸತ್ತ್ವಶಿಕ್ಷಣಕೆ ||ಸ್ವೀಯ ಸತ್ತ್ವವಿಕಾಸ ನಿಜಶಕ್ತಿಯಭ್ಯಾಸ |ಶ್ರೇಯಸಿಗೆ ಸೋಪಾನ - ಮಂಕುತಿಮ್ಮ ||
ನಾವುಣ್ಣುವನ್ನಗಳು ನಾವು ಕುಡಿವುದಕಗಳು |ನಾವುಸಿರುವೆಲರುಗಳು ನಾವುಡುವ ವಸ್ತ್ರ ||ಭೂವ್ಯೋಮಗಳ ಯಂತ್ರ ಸಂಘದುತ್ಪನ್ನಗಳು |ಜೀವವೆರಡರ ಶಿಶುವು - ಮಂಕುತಿಮ್ಮ ||