ಒಟ್ಟು 4119 ಕಡೆಗಳಲ್ಲಿ , 1 ವಚನಕಾರರು , 937 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಪುಣ್ಯದಿಂ ಬಂದ ಸಿರಿ ಮದಮೋಹಗಳ ಮೂಲ |ಖಿನ್ನನಾಗಿಪ ಪಾಪಫಲವಾತ್ಮಶುದ್ಧಿ ||ಅನ್ಯೋನ್ಯಜನಕಗಳು ಪುಣ್ಯಪಾಪಗಳಿಂತು |ಧನ್ಯನುಭಯವ ಮೀರೆ - ಮಂಕುತಿಮ್ಮ ||
ಪುಣ್ಯಪಾಪ ಋಣಾನುಬಂಧ ವಾಸನೆಗಳಿವು |ಜನ್ಮಾಂತರದ ಕರ್ಮಶೇಷದಂಶಗಳು ||ಎಣ್ಣಿಕೆಗೆ ಸಿಲುಕದಾಕಸ್ಮಿಕ ಯದೃಚ್ಛೆಗಳು |ಸನ್ನಿಹಿತ ದೈವಿಕದೆ - ಮಂಕುತಿಮ್ಮ ||
ಪುಣ್ಯಪಾಪದ ಮಿಶ್ರ ನರಜಂತುವವನ ನೆಲೆ |ಮಣ್ಣು ಕರುಳುಗಳೆಸಕವವನ ಮೈದೊಡವು ||ಬಣ್ಣಬಣ್ಣದ ವಸ್ತ್ರ; ಬಿಳ್ಪೊಡನೆ ಕಪ್ಪಿಹುದು |ಕಣ್ಣ ದುರುಗುಟಿಸದಿರು - ಮಂಕುತಿಮ್ಮ ||
ಪುರುಷಂ ಸ್ವತಂತ್ರನೋ? ದೈವವಿಧಿ ಪರವಶನೊ? |ಎರಡುಮನಿತಿನಿತುಳ್ಳ ತೋಳಿನಂತಿಹನೋ? ||ತಿರುಗುವುದು ಮಡಿಸುವುದು ತೋಳ್ ಮೈಯಕಟ್ಟಿನಲಿ |ನರನಂತು ಮಿತಶಕ್ತ - ಮಂಕುತಿಮ್ಮ ||
ಪುರುಷನ ಸ್ವಾತಂತ್ರ್ಯವವನ ತೋಳ್ಗಿರುವಷ್ಟು |ಪರಿಧಿಯೊಂದರೊಳದರ ಯತ್ನಕೆಡೆಯುಂಟು ||ತಿರುಗುವುದು ಮಡಿಸುವುದು ನಿಗುರುವುದು ನೀಳುವುದು |ತೊರೆದು ಹಾರದು ತೋಳು - ಮಂಕುತಿಮ್ಮ ||
ಪುರುಷಬುದ್ಧಿಯೆ ಸಾಕು ವರಸಿದ್ಧಿಗೆಂದಲ್ಲ |ಪರಮೇಶಕರುಣೆಯನವಶ್ಯವೆಂದಲ್ಲ ||ಚರಣ ನಡೆವನಿತು ಕಣ್ಣರಿವನಿತು ದೂರ ನೀಂ |ಚರಿಸದಿರೆ ಲೋಪವಲ? - ಮಂಕುತಿಮ್ಮ ||
ಪುರುಷಯೋಚನೆಯಿಲ್ಲ ಮುರಿದು ಮಣ್ಣಹುದೆಂದು |ಕೊರಗದಿರು; ಕೆಟ್ಟೆನೆಂದೆಂದುಮೆನ್ನದಿರು ||ಶರಧಿಯೊಳು ಮೀನೊಂದು ಪುಟ್ಟಲೇಂ ಸಾಯಲೇಂ? |ಪರವೆಯೇನಿಲ್ಲವೆಲೊ - ಮಂಕುತಿಮ್ಮ ||
ಪುರುಷಸ್ವತಂತ್ರತೆಯ ಪರಮಸಿದ್ಧಿಯದೇನು? |ಧರಣಿಗನುದಿನದ ರಕ್ತಾಭಿಷೇಚನೆಯೆ? ||ಕರವಾಲವನು ಪುಷ್ಪಸರವೆಂದು ಸೆಳೆದಾಡೆ |ಪರಿಮಳವ ಸೂಸುವುದೆ? - ಮಂಕುತಿಮ್ಮ ||
ಪುಲಿ ಸಿಂಗದುಚ್ಛ್ವಾಸ; ಹಸು ಹುಲ್ಲೆ ಹಯದುಸಿರು |ಹುಳು ಹಾವಿಲಿಯ ಸುಯ್ಲು; ಹಕ್ಕಿ ಹದ್ದುಯ್ಲು ||ಕಲೆತಿರ್ಪುವೀಯೆಲ್ಲ ನಾಮುಸಿರ್ವೆಲರಿನಲಿ |ಕಲಬೆರಕೆ ಜಗದುಸಿರು - ಮಂಕುತಿಮ್ಮ ||
ಪುಸಿಯ ನೀಂ ಪುಸಿಗೈದು ದಿಟವ ಕಾಣ್ಬವೊಲೆಸಗೆ |ಮುಸುಕ ತಳೆದಿಹನು ಪರಬೊಮ್ಮನೆನ್ನುವೊಡೆ ||ಒಸೆದೇತಕವನೀಯನೆಮಗೊಂದು ನಿಜಕುರುಹ |ನಿಶೆಯೊಳುಡುಕರದವೊಲು? - ಮಂಕುತಿಮ್ಮ ||
ಪುಸ್ತಕದಿ ದೊರೆತರಿವು ಮಸ್ತಕದಿ ತಳೆದ ಮಣಿ |ಚಿತ್ತದೊಳು ಬೆಳೆದರಿವು ತರು ತಳೆದ ಪುಷ್ಪ ||ವಸ್ತು ಸಾಕ್ಷಾತ್ಕಾರವಂತರೀಕ್ಷಣೆಯಿಂದ |ಶಾಸ್ತ್ರಿತನದಿಂದಲ್ಲ - ಮಂಕುತಿಮ್ಮ ||
ಪೂಸರದಿ ಕಾಂತಿ ಸೌರಭ ಮೊದಲನೆಯ ತಾಸು |ವಾಸನೆಯ ಹಳಸು ಕೊಳಕೊಳಚೆಯಾ ಬಳಿಕ ||ಮಾಸಿ ನಲುನಲುಗಿ ಮುಳ್ಳಹುದು ಮೂರನೆ ತಾಸು |ಸಂಸಾರಕಥೆಯದುವೆ - ಮಂಕುತಿಮ್ಮ ||
ಪೆರತೊಂದು ಬಾಳ ನೀನಾಳ್ವ ಸಾಹಸವೇಕೆ? |ಹೊರೆ ಸಾಲದೇ ನಿನಗೆ; ಪೆರರ್ಗೆ ಹೊಣೆವೋಗೆ? ||ಮರದಿ ನನೆ ನೈಜದಿಂದರಳೆ ಸೊಗವೆಲ್ಲರ್ಗೆ |ಸೆರೆಮನೆಯ ಸೇಮವೇಂ? - ಮಂಕುತಿಮ್ಮ ||
ಪೆರ್ಮೆಯ ಗುಣಂಗಳಿನ್ನೂರು ಶಾಸ್ತ್ರೋಕ್ತದವು |ಸರ್ವೋತ್ತಮಗಳೆರಡು ಸರ್ವಕಠಿನಗಳು ||ನಿರ್ಮತ್ಸರತೆಯೊಂದು ದೋಷಿಯೊಳ್ ಕ್ಷಮೆಯೊಂದು |ಬಾಹ್ಮಿಕಾಭ್ಯಾಸವದು - ಮಂಕುತಿಮ್ಮ ||
ಪೊಡೆಯುಣಿಸ ಮಿಗಹಕ್ಕಿಹುಳುಗಳಂದದಿ ನರನ |ತಡಕುವನು; ತನ್ನಾತ್ಮದುಣಿಸ ಮರೆಯುವನು ||ಒಡಲಿನಬ್ಬರವೇನು? ಆತುಮದ ನಾಣ್ಚೇನು? |ಪೊಡವಿಗಿದೆ ದುಮ್ಮಾನ - ಮಂಕುತಿಮ್ಮ ||