ಕಗ್ಗ ಸಂಚಯ alpha
  • ಡಿ.ವಿ.ಜಿ
  • ಕಗ್ಗ
  • ಸಂಶೋಧನೆ
  • ಪದಕೋಶ
  • ಸಂಪರ್ಕಿಸಿ
  • ನಮ್ಮ ಬಗ್ಗೆ
ಇದರಂತೆ : ಇದನ್ನು :

ಒಟ್ಟು 52 ಕಡೆಗಳಲ್ಲಿ , 1 ವಚನಕಾರರು , 52 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಿರಿ ಸೊಬಗುಗಳ ಬೆದಕು; ಕೆಳೆ ಬಲುಮೆಗಳ ಬೆದಕು |ಪರಬೊಮ್ಮ ನಾಟಕದ ವೇಷಚೇಷ್ಟೆಗಳು ||ಅರಸುತಿಹ ಜೀವ ನಾಯಕನು; ನಾಯಕಿಯವನ |ಕೆರಳಿಸುವ ಮೋಹರುಚಿ - ಮಂಕುತಿಮ್ಮ ||
--------------
ಡಾ. ಡಿ.ವಿ.ಗುಂಡಪ್ಪ

ಸುಂದರತೆಯೆನುವುದೇಂ? ಜನಕೆ ಮೈಮರೆಯಿಪಾ- |ನಂದದೊಳಮರುಮವೇಂ? ವಿಶ್ವಚೇತನದಾ ||ಸ್ಪಂದನವೆ ಸೌಂದರ್ಯಮದುವೆ ಜೀವನಮೂಲ |ಬಂಧುರತೆ ಬೊಮ್ಮನದು - ಮಂಕುತಿಮ್ಮ ||

ಸುಮ್ಮನಿರಲೊಲದೆ ತನಗೊಡನಾಡಿಯೊರ್ವಳನು |ನಿರ್ಮಿಸಿ ನಿಜಾಂಶದಿಂ ಮಾಯೆಯೆಂಬವಳಿಂ ||ದುಣ್ಮಿದ ಜಗಜ್ಜಾಲಗಳಲಿ ವಿಹರಿಸುತಿರುವ |ಬೊಮ್ಮನಾಟವ ಮೆರಸೊ - ಮಂಕುತಿಮ್ಮ ||

ಸುಮ್ಮನೊಬ್ಬಂಟಿಯೆಂತಿಹುದು? ಬೇಸರವಹುದು |ಹೊಮ್ಮುವೆನು ಕೋಟಿರೂಪದಲಿ ನಾನೆಂದು ||ಬೊಮ್ಮನೆಳಸಿದನಂತೆ. ಆಯೆಳಸಿಕೆಯೆ ಮಾಯೆ |ನಮ್ಮಿರವು ಮಾಯೆಯಲಿ - ಮಂಕುತಿಮ್ಮ ||

ಸ್ಥಿರ ಹಿಮಾಚಲ ಬೊಮ್ಮ; ಚರ ಜಾಹ್ನವಿಯೆ ಮಾಯೆ |ಪರಸತ್ತ್ವಘನದ ವಿದ್ರವರೂಪ ವಿಶ್ವ ||ಪರಮಾರ್ಥಕೊಂದಕ್ಷಿ ವೆವಹಾರಕಿನ್ನೊಂದು |ಎರಡುಮೊಂದಾಂತರ್ಯ - ಮಂಕುತಿಮ್ಮ ||

ಹಾಸ್ಯಗಾರನೊ ಬೊಮ್ಮ : ವಿಕಟ ಪರಿಹಾಸವದು |ಆಸ್ಯ ಗಂಭೀರ; ಬೆರಲಿಂದ ಚಕಳಗುಳಿ ||ವಿಶ್ವಾಸದುಪಚಾರ; ಹುಣಿಸೆಮೆಣಸಾಹಾರ |ವಿಶ್ವಪಾಲನೆಯಿಂತು - ಮಂಕುತಿಮ್ಮ ||

ಹೇಮಕುಂಭದಿ ಕೊಳಚೆರೊಚ್ಚುನೀರ್ಗಳ ತುಂಬಿ |ರಾಮಣೀಯಕದೊಳಿಟ್ಟಾಮಗಂಧವನು ||ಪ್ರೇಮಪುಷ್ಪಕೆ ಮೊನಚು ಗರಗಸವನಂಚಿರಿಸಿ |ಏಂ ಮಾಡಿದನೊ ಬೊಮ್ಮ! - ಮಂಕುತಿಮ್ಮ ||

ಹಿಂದೆ 1 2 3 4 ಮುಂದೆ
©2014 - 2020 ಕನ್ನಡ ಸಂಚಯ | ಸಾಹಿತ್ಯ ಸಂಶೋಧನೆ ಹಾಗೂ ಅಧ್ಯಯನ ವೇದಿಕೆ