ಒಟ್ಟು 170 ಕಡೆಗಳಲ್ಲಿ , 1 ವಚನಕಾರರು , 151 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಗುಣಿಗುಣಿಸಿ ತಿಣಕುತ್ತ ಹೆಣಗಾಡಿ ಫಲವೇನು |ಗಣನೆಗೆಟುಕದದೊಂದಚಿಂತ್ಯವೆತ್ತಲೊ ತಾನ್ ||ಅಣಗಿರ್ದು ನಿನ್ನೆಲ್ಲ ಗಣಿತಗಳನಣಕಿಪುದು |ದಣಿಯದಾ ವಿಧಿ ವಿಕಟ - ಮಂಕುತಿಮ್ಮ ||
ಗ್ರೀಸಿನಾ ಕಬ್ಬಗಳನೋದುವರು ದೆಹಲಿಯಲಿ |ಕಾಶಿಯಾ ಶಾಸ್ತ್ರಗಳನಾಕ್ಸ್ಫರ್ಡಿನವರು ||ದೇಶಕಾಲವಿಭಾಗ ಮನದ ರಾಜ್ಯದೊಳಿರದು |ಶ್ವಾಸವದು ಬೊಮ್ಮನದು - ಮಂಕುತಿಮ್ಮ ||
ಘನತತ್ತ್ವವೊಂದಕ್ಕೆ ದಿನರಾತ್ರಿ ಮನಸೋತು |ನೆನೆಯದಿನ್ನೊಂದನೆಲ್ಲವ ನೀಡುತದರಾ ||ಅನುಸಂಧಿಯಲಿ ಜೀವಭಾರವನು ಮರೆಯುವುದು |ಹನುಮಂತನುಪದೇಶ - ಮಂಕುತಿಮ್ಮ ||
ಚೂರುಗಳು ಹದಿನಾರು ಚಂದ್ರಮಂಡಲಕಂತೆ |ನೂರಾರು ಚೂರುಗಳು ಸತ್ಯಚಂದ್ರನವು ||ಸೇರಿಸುತಲವುಗಳನು ಬಗೆಯರಿತು ಬೆಳಸುತಿರೆ |ಸಾರ ಋತಪೂರ್ಣಿಮೆಯೊ - ಮಂಕುತಿಮ್ಮ ||
ಜಟ್ಟಿ ಕಾಳಗದಿ ಗೆಲ್ಲದೊಡೆ ಗರಡಿಯ ಸಾಮು |ಪಟ್ಟುವರಸೆಗಳೆಲ್ಲ ವಿಫಲವೆನ್ನುವೆಯೇಂ? ||ಮುಟ್ಟಿ ನೋಡವನ ಮೈಕಟ್ಟು ಕಬ್ಬಿಣ ಗಟ್ಟಿ |ಗಟ್ಟಿತನ ಗರಡಿ ಫಲ - ಮಂಕುತಿಮ್ಮ ||
ಜನಿಸಿದುದು ಮೃತಿಯನೆಳಸದೆ ಕುಲವ ಬೆಳಸುವುದು |ಒಣಗಿದಂತಿರುವ ತೃಣಮೂಲ ಮೊಳೆಯುವುದು ||ಮನುಜರಳಿವರು ಮನುಜಸಂತಾನ ನಿಂತಿಹುದು |ಅಣಗದಾತ್ಮದ ಸತ್ತ್ವ - ಮಂಕುತಿಮ್ಮ ||
ಜನಿಸಿದೆಡೆಯಿಂ ಕಡಲವರೆಗಮಡಿಯಡಿ ನೆಲದ |ಗುಣವ ಕೊಳ್ಳುತ ಕೊಡುತ ಪೊನಲು ಮಾರ್ಪಡುಗುಂ ||ಮನುಜಸಂತಾನದಲಿ ಗುಣದವತರಣವಂತು |ಗುಣಿಪುದೆಂತಾ ತೆರನ - ಮಂಕುತಿಮ್ಮ ||
ಜಲಧಿತೀರದಿ ನಿಂತು ವೀಕ್ಷಿಸಿಕ್ಕೆಲಗಳಲಿ |ಚಲವೊಂದಚಲವೊಂದು ಸಮವದಸಮವಿದು ||ಕಲೆತಿರ್ಪುವಂತು ಮೇಯಾಮೇಯಗಳು ಜಗದಿ |ಮಿಲಿತತೆಯಿನೇ ರುಚಿಯೊ - ಮಂಕುತಿಮ್ಮ ||
ತಡಕಾಟ ಬದುಕೆಲ್ಲವೇಕಾಕಿಜೀವ ತ |ನ್ನೊಡನಾಡಿ ಜೀವಗಳ ತಡಕಿ ಕೈಚಾಚಿ ||ಪಿಡಿಯಲಲೆದಾಡುಗುಂ; ಪ್ರೀತಿ ಋಣ ಮಮತೆಗಳ |ಮಡುವೊಳೋಲಾಡುತ್ತೆ - ಮಂಕುತಿಮ್ಮ ||
ತನ್ನ ಹೊಳಹೊಳಪುಗಳ ನೆನೆನೆನೆದು ಮೈಮರೆತ |ರನ್ನವೋ ಬ್ರಹ್ಮ; ನೋಡವನು---ನಿಜಪಿಂಛ ||ವರ್ಣದೆಣಿಕೆಯಲಿ ತನ್ನನೆ ಮರೆತ ನವಿಲವೊಲು |ತನ್ಮಯನೊ ಸೃಷ್ಟಿಯಲಿ - ಮಂಕುತಿಮ್ಮ ||
ತರಚುಗಾಯವ ಕೆರೆದು ಹುಣ್ಣನಾಗಿಪುದು ಕಪಿ |ಕೊರತೆಯೊಂದನು ನೀನು ನೆನೆನೆನೆದು ಕೆರಳಿ ||ಧರೆಯೆಲ್ಲವನು ಶಪಿಸಿ; ಮನದಿ ನರಕವ ನಿಲಿಸಿ |ನರಳುವುದು ಬದುಕೇನೊ? - ಮಂಕುತಿಮ್ಮ ||
ತರುಣಿ ತನ್ನೊಡವೆಗಳ ತಳೆಯುತ್ತ ತೆಗೆಯುತ್ತ |ಪರಿಕಿಸುತೆ ಮುಕುರದಲಿ ಸೊಗಸುಗಳ ಪರಿಯ ||ಮರೆತೆಲ್ಲವನು ವಿಲಸಿಪಂತೆ ತಾಂ ವಿಶ್ವದಲಿ |ಮೆರೆಯುವನು ಪರಬೊಮ್ಮ - ಮಂಕುತಿಮ್ಮ ||
ತಳೆಯಲಾರನೆ ಬೊಮ್ಮ ಬೀಭತ್ಸರೂಪಗಳ? |ನಲಿಯಲಾರನೆ ತಿಪ್ಪೆರೊಚ್ಚು ನಾತದಲಿ? ||ಮಲವೇನೊ! ಹೊಲೆಯೇನೊ! ಜೀವಸಂಬಂಧವಲ |ಮಲಿನದಲಿ ನೆನೆ ಶುಚಿಯ - ಮಂಕುತಿಮ್ಮ ||
ತಿರುತಿರುಗಿ ತಿರುಗುತ್ತೆ ಬುಗುರಿ ತಾನೇ ಸೋತು |ತಿರೆಗುರುಳುವುದು ತನ್ನ ಬಲವ ತಾಂ ಕಳೆದು ||ನರನುಮಂತೆಯೆ ಸುತ್ತಿ ಸುತ್ತಿ ಕಡೆಗೊಂದು ದಿನ |ತೆರುವನಸ್ಥಿಯ ಧರೆಗೆ - ಮಂಕುತಿಮ್ಮ ||
ತೆರಿಗೆಗಳು ಹಲವುಂಟು ಪ್ರಕೃತಿಗಂ ಸಲ್ಲುವುವು |ತೆರದೆ ನೀಂ ಮರೆಯೆ ದಂಡಿಪಳಾಕೆ ಮುನಿದು ||ಕರಣಂಗಳಾಕೆಯವು ಮಿತದೊಳವುಗಳ ಬಳಸಿ |ತೆರು ಸಲುವ ಬಾಡಿಗೆಯ - ಮಂಕುತಿಮ್ಮ ||