ಒಟ್ಟು 946 ಕಡೆಗಳಲ್ಲಿ , 1 ವಚನಕಾರರು , 945 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಬೆರಳುಗಳ ನೋಡವುಗಳೊಂದರಂತೊಂದಿಲ್ಲ |ಕರಧರ್ಮಕುಚಿತವಾ ಹೆಚ್ಚು ಕಡಮೆಗಳು ||ಪುರುಳ ಪಿಡಿವುವೆ ಬೆರಳ್ಗಳೆಲ್ಲಮೊಂದುದ್ದವಿರೆ? |ಸರಿಯಹುದು ಕಾರ್ಯದಲಿ - ಮಂಕುತಿಮ್ಮ ||
ಬೆಳೆ ಹೊಳಪು ವಿಕಸನ ವಿಕಾರ ಸಂಭ್ರಮಗಳಲಿ |ಬೆಳಕು ವೇಗಗಳೆನಿಪ ಕಾಲ ದಿಕ್ಕುಗಳ ||ಚಲನೆಯಲಿ ವಿಶ್ವಸಂಮೋಹನಗಳೆಲ್ಲವಾ |ವಿಲಸಿತವು ಬೊಮ್ಮನದು - ಮಂಕುತಿಮ್ಮ ||
ಬೇಕು ಜೀವನಯೋಗಕೊಂದು ಬಹುಸೂಕ್ಷ್ಮ ನಯ |ಬೇಕೊಂದು ಜಾಗರೂಕತೆ; ಬುದ್ಧಿಸಮತೆ ||ತಾಕನೊಂದನು ಯೋಗಿ; ನೂಕನೊಂದನು ಜಗದಿ |ಏಕಾಕಿ ಸಹವಾಸಿ - ಮಂಕುತಿಮ್ಮ ||
ಬೇಕು ಬೇಕದು ಬೇಕು ಬೇಕಿದೆನಗಿನ್ನೊಂದು |ಬೇಕೆನುತ ಬೊಬ್ಬಿಡುತಲಿಹ ಘಟವನಿದನು ||ಏಕೆಂದು ರಚಿಸಿದನೊ ಬೊಮ್ಮನೀ ಬೇಕು ಜಪ |ಸಾಕೆನಿಪುದೆಂದಿಗೆಲೊ - ಮಂಕುತಿಮ್ಮ ||
ಬೇಡಿದುದನೀವನೀಶ್ವರನೆಂಬ ನಚ್ಚಿಲ್ಲ |ಬೇಡಲೊಳಿತಾವುದೆಂಬುದರರಿವುಮಿಲ್ಲ ||ಕೂಡಿಬಂದುದನೆ ನೀನ್ ಅವನಿಚ್ಛೆಯೆಂದು ಕೊಳೆ |ನೀಡುಗೆದೆಗಟ್ಟಿಯನು - ಮಂಕುತಿಮ್ಮ ||
ಬೇರಯಿಸಿ ನಿಮಿಷನಿಮಿಷಕಮೊಡಲಬಣ್ಣಗಳ |ತೋರಿಪೂಸರವಳ್ಳಿಯಂತೇನು ಬೊಮ್ಮಂ? ||ಪೂರ ಮೈದೋರೆನೆಂಬಾ ಕಪಟಿಯಂಶಾವ |ತಾರದಿಂದಾರ್ಗೇನು? - ಮಂಕುತಿಮ್ಮ ||
ಬೊಮ್ಮನೇ ಸಂಸ್ಕೃತಿಯ ಕಟ್ಟಿಕೊಂಡುತ್ಸಹಿಸೆ |ಸುಮ್ಮನರೆಚಣವಿರದೆ ಪ್ರಕೃತಿ ತೊಡಗುತಿರೆ ||ಜನ್ಮ ಸಾಕೆನುವುದೇಂ? ದುಮ್ಮಾನವಡುವುದೇಂ? |ಚಿಮ್ಮುಲ್ಲಸವ ಧರೆಗೆ - ಮಂಕುತಿಮ್ಮ ||
ಬ್ರಹ್ಮವೇ ಸತ್ಯ; ಸೃಷ್ಟಿಯೆ ಮಿಥ್ಯೆಯೆನ್ನುವೊಡೆ |ಸಂಬಂಧವಿಲ್ಲವೇನಾ ವಿಷಯಯುಗಕೆ? ||ನಮ್ಮ ಕಣ್ಮನಸುಗಳೆ ನಮಗೆ ಸಟೆ ಪೇಳುವೊಡೆ |ನೆಮ್ಮುವುದದಾರನೋ? - ಮಂಕುತಿಮ್ಮ ||
ಬ್ರಹ್ಮಾನುಸಂಧಾನ ಲೋಕಸಂಧಾನದಲಿ |ಬ್ರಹ್ಮದರ್ಶನವೆಲ್ಲ ಜೀವರೂಪದಲಿ ||ಬ್ರಹ್ಮಾನುಭವ ದೇಹಕರಣಾನುಭವಗಳಲಿ! |ಮರ್ಮವಿದು ಮುಕ್ತಿಗೆಲೊ - ಮಂಕುತಿಮ್ಮ ||
ಭಕ್ತಿ ನಂಬುಗೆ ಸುಲಭ; ಭಜನೆ ವಂದನೆ ಸುಲಭ |ತತ್ತ್ವಶೋಧನೆ ಕಷ್ಟ; ಮತಿಕಾರ್ಯ ಕಷ್ಟ ||ಸುತ್ತುವುದು ಗಿರಿಸುತ್ತ ಸುಳುವೆಂದು ಲೋಕಜನ |ಹತ್ತುವನು ತಾಪಸಿಯೊ - ಮಂಕುತಿಮ್ಮ ||
ಭಾನೂದಯಾಸ್ತಗಳಿನಲ್ತೆ ದಿಕ್ಕಾಲಗಳ |ಮಾನಗಣಿತವು ನಮಗೆ? ಭಾನುವಿರದೊಡದೇಂ? ||ಆನಂತ್ಯ; ಶುದ್ಧಸತ್ತಾಮಾತ್ರ; ಬೊಮ್ಮನದು |ಲೀನನಾಗದರೊಳಗೆ - ಮಂಕುತಿಮ್ಮ ||
ಭಾವದಾವೇಶದಿಂ ಮನವಶ್ವದಂತಿರಲಿ |ಧೀವಿವೇಚನೆಯದಕೆ ದಕ್ಷರಾಹುತನು ||ತೀವಿದೊಲವಿನ ದಂಪತಿಗಳಾಗೆ ಮನಬುದ್ಧಿ |ಜೀವಿತವು ಜೈತ್ರಕಥೆ - ಮಂಕುತಿಮ್ಮ ||
ಭಾವರಾಗೋದ್ರೇಕ ತಾನೆ ತಪ್ಪೇನಲ್ಲ |ಧೀವಿವೇಕದ ಸಮತೆಯದರಿನದಿರದಿರೆ ||ಸ್ವಾವಿದ್ಯೆಯಾ ಮೋಹ ಮಮತೆಯದನಂಟದಿರೆ |ಪಾವನವೊ ಹೃನ್ಮಥನ - ಮಂಕುತಿಮ್ಮ ||
ಭಿತ್ತಿಯೊಂದಿಲ್ಲದಿರೆ ಚಿತ್ರವೆಂತಿರಲಹುದು? |ಚಿತ್ರವಿಲ್ಲದ ಭಿತ್ತಿ ಸೊಗಸಹುದದೆಂತು? ||ನಿತ್ಯಸತ್ತ್ವವೆ ಭಿತ್ತಿ; ಜೀವಿತ ಕ್ಷಣಚಿತ್ರ |ತತ್ತ್ವವೀ ಸಂಬಂಧ - ಮಂಕುತಿಮ್ಮ ||
ಭುಕ್ತಿ ನಿನಗೆಲ್ಲಿಯದು? ಭತ್ತ ತಾನೆಲ್ಲಿಯದೊ! |ಎತ್ತಲಿನ ಗೊಬ್ಬರವೊ! ಎತ್ತಲಿನ ನೀರೋ! ||ಭಾಕ್ತವಾರಾರ ದುಡಿತದಿನೊ ನಿನಗಾಗಿಹುದು! |ಗುಪ್ತಗಾಮಿನಿಯೊ ಋಣ - ಮಂಕುತಿಮ್ಮ ||