ಒಟ್ಟು 72 ಕಡೆಗಳಲ್ಲಿ , 1 ವಚನಕಾರರು , 69 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಶೂನ್ಯವೆಲ್ಲವುಮೆಂಬೊಡಂತೆನಿಸುವುದದೇನು? |ಅನ್ಯವಿಲ್ಲೆನುವರಿವದೊಂದಿರ್ಪುದಲ್ತೆ? ||ಚಿನ್ಮಯವನದನೆ ನೀಂ ಸತ್ಯವೆಂದಾಶ್ರಯಿಸು |ಶೂನ್ಯವಾದವೆ ಶೂನ್ಯ - ಮಂಕುತಿಮ್ಮ ||
ಸಂಪೂರ್ಣಗೋಳದಲಿ ನೆನೆದೆಡೆಯೆ ಕೇಂದ್ರವಲ |ಕಂಪಿಸುವ ಕೇಂದ್ರ ನೀಂ ಬ್ರಹ್ಮಕಂದುಕದಿ ||ಶಂಪಾತರಂಗವದರೊಳು ತುಂಬಿ ಪರಿಯುತಿದೆ |ದಂಭೋಳಿ ನೀನಾಗು - ಮಂಕುತಿಮ್ಮ ||
ಸುತೆಯ ಪೋಷಿಸಿ ಬೆಳಸಿ; ಧನಕನಕದೊಡನವಳನ್- |ಇತರಗೃಹಕಿತ್ತು ನೀಂ ಕೇಳ್ವ ಮುಯ್ಯೇನು? ||ಪ್ರತಿಫಲವು ಬೇರೇಕೆ? ಸುಕೃತಕದು ತಾನೆ ಫಲ |ಹಿತ ಮನದ ಪಾಕಕದು - ಮಂಕುತಿಮ್ಮ ||
ಹರಸುವುದದೇನ ನೀಂ? ವರವದೇನೆಂದರಿವೆ? |ಸರಿಯಿಂದು ತೋರುವುದು ನಾಳೆ ಸರಿಯಿಹುದೆ? ||ನಿರುಕಿಸುವುದೆಂತು ಚಿರಕಾಲದೊಳ್ಳಿತನಿಂದು? |ಅರಿವ ದೈವವೆ ಪೊರೆಗೆ - ಮಂಕುತಿಮ್ಮ ||
ಹೆಸರು ಹೆಸರೆಂದು ನೀಂ ಬಸವಳಿವುದೇಕಯ್ಯ? |ಕಸದೊಳಗೆ ಕಸವಾಗಿ ಹೋಹನಲೆ ನೀನು? ||ಮುಸುಕಲೀ ಧರೆಯ ಮರೆವೆನ್ನನ್; ಎನ್ನುತ ಬೇಡು |ಮಿಸುಕದಿರು ಮಣ್ಣಿನಲಿ - ಮಂಕುತಿಮ್ಮ ||
ಹೆಸರು ಹೆಸರೆಂಬುದೇಂ? ಕಸುರು ಬೀಸುವ ಗಾಳಿ |ಹಸೆಯೊಂದು ನಿನಗೇಕೆ ಬ್ರಹ್ಮಪುರಿಯೊಳಗೆ? ||ಶಿಶುವಾಗು ನೀಂ ಮನದಿ; ಹಸುವಾಗು; ಸಸಿಯಾಗು |ಕಸಬೊರಕೆಯಾಗಿಳೆಗೆ - ಮಂಕುತಿಮ್ಮ ||
ಹೊಟ್ಟೆಯೊಂದರ ರಗಳೆ ಸಾಲದೆಂದೇನೊ ವಿಧಿ |ಹೊಟ್ಟೆಕಿಚ್ಚಿನ ಕಿಡಿಯ ನೆಟ್ಟಿಹನು ನರನೊಳ್ ||ಹೊಟ್ಟೆ ತುಂಬಿದ ತೋಳ ಮಲಗೀತು; ನೀಂ ಪೆರರ |ದಿಟ್ಟಿಸುತ ಕರುಬುವೆಯೊ - ಮಂಕುತಿಮ್ಮ ||
ಹೊನ್ನೆಂದು ಜಗದಿ ನೀಂ ಕೈಗೆ ಕೊಂಡುದನು ವಿಧಿ |ಮಣ್ಣೆನುವನ್; ಅವನ ವರ ಮಣ್ಣೆನುವೆ ನೀನು ||ಭಿನ್ನಮಿಂತಿರೆ ವಸ್ತುಮೌಲ್ಯಗಳ ಗಣನೆಯೀ |ಪಣ್ಯಕ್ಕೆ ಗತಿಯೆಂತೊ? - ಮಂಕುತಿಮ್ಮ ||
ಹೊರಗೆ; ವಿಶ್ವದಿನಾಚೆ; ದೂರದಲಿ; ನೀಲದಲಿ |ಒಳಗೆ; ಹೃತ್ಕೂಪದಾಳದಲಿ; ಮಸಕಿನಲಿ ||ನೆಲೆಗಳಿಂತೆರಡು ಮೂಲ ರಹಸ್ಯಕವುಗಳುಲಿ |ಕಲೆತಂದು ನೀಂ ಜ್ಞಾನಿ - ಮಂಕುತಿಮ್ಮ ||