ಒಟ್ಟು 71 ಕಡೆಗಳಲ್ಲಿ , 1 ವಚನಕಾರರು , 64 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಹಿಮಗಿರಿಯ ಕಂಡಂಗೆ ಕ್ರಿಮಿಯ ಹಿರಿಮೆಯದೇನು? |ಕ್ರಿಮಿಗೆ ಹಸಿವುಂಟಿನಿತು ಬೆದಕಾಟಮುಂಟು ||ಅಮಿತ ಸಂತತಿಯುಂಟು ಹಿಮಗಿರಿಯ ಸಮಯುಗದ |ಕ್ರಿಮಿಪಂಕ್ತಿ ಕಿರಿದಹುದೆ? - ಮಂಕುತಿಮ್ಮ ||
ಹಿಮಗಿರಿಯೊಳವಿತಿಹುದು ಚೈತನ್ಯದಗ್ನಿ ಕಣ |ಸ್ತಿಮಿತದಿಂ ನಿಂತಿರ್ಪುದದು ಧರೆಯ ಹಿತಕೆ ||ಶಮದ ಸುಂದರದ ಸಾತ್ತ್ವಿಕದ ಗಾಂಭೀರ್ಯವದು |ನಮಗೊಂದು ವೇದನಿಧಿ - ಮಂಕುತಿಮ್ಮ ||
ಹೇಮಕುಂಭದಿ ಕೊಳಚೆರೊಚ್ಚುನೀರ್ಗಳ ತುಂಬಿ |ರಾಮಣೀಯಕದೊಳಿಟ್ಟಾಮಗಂಧವನು ||ಪ್ರೇಮಪುಷ್ಪಕೆ ಮೊನಚು ಗರಗಸವನಂಚಿರಿಸಿ |ಏಂ ಮಾಡಿದನೊ ಬೊಮ್ಮ! - ಮಂಕುತಿಮ್ಮ ||
ಹೇಳಲಾಗದ ಹಸಿವು; ತಾಳಲಾಗದ ತಪನೆ |ಆಳದಲಿ ನಾಚನಾಗಿಪ ಚಿಂತೆಯೂಟೆ ||ಗಾಳಿಯೆತ್ತೆತ್ತಣಿನೊ ತಂದೀವ ಸೋಂಕು---ಇವೆ |ಬಾಳ ಸಾಮಗ್ರಿಯಲ - ಮಂಕುತಿಮ್ಮ ||