ಒಟ್ಟು 4119 ಕಡೆಗಳಲ್ಲಿ , 1 ವಚನಕಾರರು , 937 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಇರಲಿ ಜೀವರಹಸ್ಯವರೆಪರದೆಯೊಳಗಡಗಿ |ಅರಸಿ ವರಿಸುವರಾರು ಬೀದಿಬತ್ತಲಿಯ? ||ಅರಳಿಪುದದಡಗಿರ್ಡೊಡಾಗ ನಮ್ಮೆದೆಗಣ್ಣ |ಸುರಸತೆಯ ಕುತುಕದಿಂ - ಮಂಕುತಿಮ್ಮ ||
ಇರುವ ಕೆಲಸವ ಮಾಡು ಕಿರಿದೆನದೆ ಮನವಿಟ್ಟು |ದೊರೆತುದ ಹಸಾದವೆಂದುಣ್ಣು ಗೊಣಗಿಡದೆ ||ಧರಿಸು ಲೋಕದ ಭರವ ಪರಮಾರ್ಥವನು ಬಿಡದೆ |ಹೊರಡು ಕರೆ ಬರಲ್ ಅಳದೆ - ಮಂಕುತಿಮ್ಮ ||
ಇರುವನ್ನಮೀ ಬಾಳು ದಿಟವದರ ವಿವರಣೆಯ |ಹೊರೆ ನಮ್ಮ ಮೇಲಿಲ್ಲ ನಾದವರ ಸಿರಿಯ ||ಪಿರಿದಾಗಿಸಲು ನಿಂತು ಯುಕ್ತಿಯಿಂ ದುಡಿಯುವುದೆ |ಪುರುಷಾರ್ಥಸಾಧನೆಯೊ - ಮಂಕುತಿಮ್ಮ ||
ಇರುವುದರೊಳಾದನಿತು ಸೊಗವ ಪಡೆವೊಡೆ ಲೋಗರ್ |ಅರಿಗೆ ಮೊದಲ್ ಇಹಕೆ ಪರದಾವರಣವಿಹುದನ್ ||ಪರಮಾರ್ಥಗಣಿತದಿಂದಿಹದರ್ಥಗಳನೆಣಿಸೆ |ಸರಿ ಲೋಕಬಾಂಧವ್ಯ - ಮಂಕುತಿಮ್ಮ ||
ಇಲ್ಲಿ ಚೆನ್ನಲ್ಲಿ ಚೆನ್ನೆಲ್ಲೊ ಚೆನ್ನೆನುತೆಣಿಸಿ |ಹುಲ್ಲುಬಯಲೊಂದೆಡೆಯಿನೊಂದಕ್ಕೆ ನೆಗೆದು ||ಮೆಲ್ಲದೆಯೆ ಧಾವಿಸುತ ದಣಿವ ಕರುವನು ಪೋಲ್ತೊ- |ಡೆಲ್ಲಿಯೋ ಸುಖ ನಿನಗೆ? - ಮಂಕುತಿಮ್ಮ ||
ಇಹುದಕಿಂತೊಳಿತಿಹುದು; ಒಳಿತ ಗಳಿಸಲ್ಬಹುದು |ಸಹಸಿಸುವೆನದಕೆನುವ ಮತಿಯಿನೇ ಪ್ರಗತಿ ||ರಹಸಿಯದ ಬುಗ್ಗೆಯದು; ಚಿಮ್ಮುತಿಹುದೆಲ್ಲರೊಳು |ಸಹಜವಾ ಮತಿಕೃತಕ - ಮಂಕುತಿಮ್ಮ ||
ಇಹುದೊ ಇಲ್ಲವೊ ತಿಳಿಯಗೊಡದೊಂದು ವಸ್ತು ನಿಜ |ಮಹಿಮೆಯಿಂ ಜಗವಾಗಿ ಜೀವವೇಷದಲಿ ||ವಿಹರಿಪುದದೊಳ್ಳಿತೆಂಬುದು ನಿಸದವಾದೊಡಾ |ಗಹನ ತತ್ತ್ವಕೆ ಶರಣೊ - ಮಂಕುತಿಮ್ಮ ||
ಇಳಿಯುವೆನು ಮುಳುಗುವೆನು ವಿಶ್ವಾತ್ಮಸಾಗರದಿ |ಮುಳುಮುಳುಗಿ ಕಳೆಯುವೆನು ಬೇರೆತನದರಿವ ||ಇಳೆಬಾನ್ಗಳಾಟದಲಿ ಕುಣಿಯುವೆನು ಮೈಮರೆತು |ಗಳಿಸೀ ಮನಃಸ್ಥಿತಿಯ - ಮಂಕುತಿಮ್ಮ ||
ಇಳೆಯ ಬಿಟ್ಟಿನ್ನು ಮೆತ್ತಲುಮೈದದ ಪ್ರೇತ |ವಲೆಯಂತೆ ಲೋಕ ತಲ್ಲಣಿಸುತಿಹುದಿಂದು ||ಹಳೆಧರ್ಮ ಸತ್ತಿಹುದು ಹೊಸಧರ್ಮ ಹುಟ್ಟಿಲ್ಲ |ತಳಮಳಕೆ ಕಡೆಯೆಂದೊ? - ಮಂಕುತಿಮ್ಮ ||
ಇಳೆಯಿಂದ ಮೊಳಕೆಯೊಗೆವಂದು ತಮಟೆಗಳಿಲ್ಲ |ಫಲ ಮಾಗುವಂದು ತುತ್ತೂರಿ ದನಿಯಿಲ್ಲ ||ಬೆಳಕೀವ ಸೂರ್ಯಚಂದ್ರರದೊಂದು ಸದ್ದಿಲ್ಲ |ಹೊಲಿ ನಿನ್ನ ತುಟಿಗಳನು - ಮಂಕುತಿಮ್ಮ ||
ಈ ಜಗದ ಗಂಧ ಪರಿಪರಿ ಹಸಿವ ಕೆಣಕುತಿರೆ |ಭೋಜನವ ನೀಡೆನೆನೆ ಮನ ಸುಮ್ಮನಿಹುದೆ? ||ಸಾಜಗಳ ಕೊಲ್ಲೆನುವ ಹಠಯೋಗಕಿಂತ ಸರಿ |ರಾಜಯೋಗದುಪಾಯ - ಮಂಕುತಿಮ್ಮ ||
ಈ ವಿಶ್ವದಲಿ ನೋಡಲೆಲ್ಲರೆಲ್ಲರ ನಂಟು |ಆವನಾ ಬಂಧುತೆಯ ಜಡೆಯ ಬಿಡಿಸುವನು? ||ಜೀವ ಜೀವಕೆ ನಂಟು ಜಡ ಚೇತನಕೆ ನಂಟು |ಆವುದದಕಂಟಿರದು? - ಮಂಕುತಿಮ್ಮ ||
ಉಂಡಾತನುಣುತಿರುವರನು ಕಾಣ್ಬ ನಲವಿಂದ |ಪಂಡಿತನು ವಿದ್ಯಾರ್ಥಿಗಳಿಗೊರೆವ ನಯದಿಂ ||ಕಂಡು ಲೋಕವನು ಸಂತೈಸುತಿರುವಂ ಜ್ಞಾನಿ |ಕಂಡೆಲ್ಲರೊಳು ತನ್ನ - ಮಂಕುತಿಮ್ಮ ||
ಉಣುವುದುಡುವುದು ಪಡುವುದಾಡುವುದು ಮಾಡುವುದು |ಋಣಗಳೆಲ್ಲವು ಪೂರ್ವಸಂಚಿತಾಂಶಗಳು ||ಹಣೆಯೊಳದು ಲಿಖಿತಮಿರೆಯುಂ ವಾಚಿಸುವನಿಲ್ಲ |ಗೊಣಗಾಟವಳಿಸುವುದೆ? - ಮಂಕುತಿಮ್ಮ ||
ಉತ್ತಮತೆಯಿಂತೆಂದು ಮತಿಗೆ ತೋರ್ದೊಡದೇನು? |ವೃತ್ತಿಯೊಳ್ ಅದೂರಿ ಸ್ವಭಾವಾಂಶವಾಗಲ್ ||ಮತ್ತು ಮತ್ತನುವರ್ತಿಸುತ; ಭಂಗವಾದಂದು |ಯತ್ನಿಸಿನ್ನುಂ ಮರಳಿ - ಮಂಕುತಿಮ್ಮ ||