ಕಗ್ಗ ಸಂಚಯ alpha
  • ಡಿ.ವಿ.ಜಿ
  • ಕಗ್ಗ
  • ಸಂಶೋಧನೆ
  • ಪದಕೋಶ
  • ಸಂಪರ್ಕಿಸಿ
  • ನಮ್ಮ ಬಗ್ಗೆ
ಇದರಂತೆ : ಇದನ್ನು :

ಒಟ್ಟು 137 ಕಡೆಗಳಲ್ಲಿ , 1 ವಚನಕಾರರು , 124 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹುರಿಯುರುಳೆ ಹಾವಲ್ಲವಾದೊಡಂ ಮಬ್ಬಿನಲಿ |ಹರಿದಾಡಿದಂತಾಗೆ ನೋಳ್ಪವಂ ಬೆದರಿ ||ಸುರಿಸುವಾ ಬೆವರು ದಿಟ; ಜಗುವುಮಂತುಟೆ ದಿಟವು |ಜರೆಯದಿರು ತೋರ್ಕೆಗಳ - ಮಂಕುತಿಮ್ಮ ||
--------------
ಡಾ. ಡಿ.ವಿ.ಗುಂಡಪ್ಪ

ಹೊನ್ನೆಂದು ಜಗದಿ ನೀಂ ಕೈಗೆ ಕೊಂಡುದನು ವಿಧಿ |ಮಣ್ಣೆನುವನ್; ಅವನ ವರ ಮಣ್ಣೆನುವೆ ನೀನು ||ಭಿನ್ನಮಿಂತಿರೆ ವಸ್ತುಮೌಲ್ಯಗಳ ಗಣನೆಯೀ |ಪಣ್ಯಕ್ಕೆ ಗತಿಯೆಂತೊ? - ಮಂಕುತಿಮ್ಮ ||

ಹೊರಗಾವುದೊಳಗಾವುದೀ ಸೃಷ್ಟಿಚಕ್ರದಲಿ |ಎರಡನೊಂದಾಗಿಪುದು ಹರಿವ ನಮ್ಮುಸಿರು ||ಇರುವುದುಳಿದಿನಿತು ಹೊರಗಾಳಿ ಯೋಗಿಗಳೊಳಂ |ಬರಿ ಸುಷಿರಪಿಂಡ ಜಗ - ಮಂಕುತಿಮ್ಮ ||

ಹೊಸಹೊಸಬನಾಗುವನನುಕ್ಷಣಂ ಮಾನವನು |ವಸುಧೆಯಾ ಮೂಸೆಯಲಿ ಪುಟಪಾಕವಾಂತು ||ರಸಮೂರ್ತಿಯಾಗುವನು ಜಗದಾತ್ಮಮತಿ ಬೆಳೆಯೆ |ಕಸವೆಲ್ಲ ಕಳೆದವನು - ಮಂಕುತಿಮ್ಮ ||

ಹಿಂದೆ 1 2 3 4 5 6 7 8 9 ಮುಂದೆ
©2014 - 2020 ಕನ್ನಡ ಸಂಚಯ | ಸಾಹಿತ್ಯ ಸಂಶೋಧನೆ ಹಾಗೂ ಅಧ್ಯಯನ ವೇದಿಕೆ