ಒಟ್ಟು 4119 ಕಡೆಗಳಲ್ಲಿ , 1 ವಚನಕಾರರು , 937 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಎಂದಿಗಾನುಂ ನಿನ್ನ ಪೂರ್ವಋಣಗಳ ಲೆಕ್ಕ |ನೊಂದಬೇಕೆಂದಿರ್ದೊಡಿಂದೆ ಮೊದಲನಿಡು ||ಅಂದಿಸಿಕೊ ಹೆರರೆನಿಪರನು ಹೃದಯವಿಸ್ತರದೆ |ಹೊಂದು ವಿಶ್ವಾತ್ಮತೆಯ - ಮಂಕುತಿಮ್ಮ ||
ಎದೆ ಮಾರುವೋಗದೊಡೆ; ಕಣ್ ಸೊಬಗನುಂಡರೇಂ? |ಹೃದಯ ಮುಯ್ ಕೇಳದೊಡೆ; ನಲವ ಸೂಸಿದರೇಂ? ||ಕದಡದಿರ್ದೊಡೆ ಮನವ; ತನು ಸೊಗವ ಸವಿದೊಡೇಂ? |ಮುದ ತಾನೆ ತಪ್ಪಲ್ಲ - ಮಂಕುತಿಮ್ಮ ||
ಎಂದೊ ನಿನಗೊಂದುದಿನ ಮೂಗು ಮುರಿಯುವುದು ದಿಟ |ವೃಂದಾರಕರು ಮತ್ಸರಿಸರೆ ಗರ್ವಿತರ? ||ಸಂದರ್ಭಗಳನದಕೆ ಜೋಡಿಪನು ವಿಧಿರಾಯ |ಅಂದಿಕೊಳ್ಳನೆ ನಿನ್ನ? - ಮಂಕುತಿಮ್ಮ ||
ಎದ್ದೆದ್ದು ಬೀಳುತಿಹೆ; ಗುದ್ದಾಡಿ ಸೋಲುತಿಹೆ |ಗದ್ದಲವ ತುಂಬಿ ಪ್ರಸಿದ್ಧನಾಗುತಿಹೆ ||ಉದ್ಧರಿಸುವೆನು ಜಗವನೆನ್ನುತಿಹ ಸಖನೆ; ನಿ- |ನ್ನುದ್ಧಾರವೆಷ್ಟಾಯ್ತೊ? - ಮಂಕುತಿಮ್ಮ ||
ಎನಗೆ ಸುಖವಿಲ್ಲವದರಿಂ ದೇವರಿರನೆನ್ನು- |ವನುಮಿತಿಯ ನೀಂ ಗೆಯ್ಯೆ; ಸುಖಿಯದೇನೆನುವಂ? ||ತನುಬಾಹ್ಯಕರಣದನುಭವಕಿಂತ ಸೂಕ್ಷ್ಮತರ- |ದನುಭವವ ನೀನರಸೊ - ಮಂಕುತಿಮ್ಮ ||
ಎನಿತು ನೀಂ ಗೆಲಿದೆಯೆಂದೆನರು ಬಲ್ಲವರೆಂದು- |ಮೆನಿತು ನೀಂ ಪೋರ್ದೆಯೆನಿತನು ಪೊತ್ತೆಯೆನುವರ್ ||ಗಣನೆ ಸಲುವುದು ತೋರ್ದ ಪೌರುಷಕೆ; ಜಯಕಲ್ಲ |ದಿನದಿನದ ಗರಡಿಯಿದು - ಮಂಕುತಿಮ್ಮ ||
ಎನಿತೆನಿತ್ತು ವಿಕಾರ ಪರಿಣಾಮಗಳ ನಮ್ಮ |ಮನಕಾಗಿಪುವೊ ಲೋಕರೂಪಶಕ್ತಿಗಳು ||ಅನಿತನಿತು ಸತ್ಯತೆಯವಕ್ಕುಂಟು ಜೀವಿತದಿ |ಅನುಭವವೆ ದಿಟದಳತೆ - ಮಂಕುತಿಮ್ಮ ||
ಎನ್ನ ಬೇಡಿಕೆ ನಷ್ಟವಹುದೆಂತು ದೇವನಿರೆ? |ಅನ್ಯಾಯ ಜಗವೆಲ್ಲ; ದೇವನಿರನೆನುತ ||ತನ್ನ ತನ್ನನುಭವವ ನಂಬಲೋರೊರ್ವನುಂ |ಭಿನ್ನವಾಗದೆ ಸತ್ಯ? - ಮಂಕುತಿಮ್ಮ ||
ಎರಡು ಕೋಣೆಗಳ ನೀಂ ಮಾಡು ಮನದಾಲಯದಿ |ಹೊರಕೋಣೆಯಲಿ ಲೋಗರಾಟಗಳನಾಡು ||ವಿರಮಿಸೊಬ್ಬನೆ ಮೌನದೊಳಮನೆಯ ಶಾಂತಿಯಲಿ |ವರಯೋಗಸೂತ್ರವಿದು - ಮಂಕುತಿಮ್ಮ ||
ಎರಡುತೆರ ಮೌಲ್ಯಂಗಳೆಲ್ಲಕಂ ಲೋಕದಲಿ |ಪರಮಾರ್ಥಕೊಂದು; ಸಾಂಪ್ರತದರ್ಥಕೊಂದು ||ಪರಿಕಿಸೆರಡಂ ನೀನು; ಹೊರಬೆಲೆಯ ಗುಣಿಪಂದು |ಮರೆಯಬೇಡೊಳಬೆಲೆಯ - ಮಂಕುತಿಮ್ಮ ||
ಎರಡುಮಿರಬಹುದು ದಿಟ; ಶಿವರುದ್ರನಲೆ ಬೊಮ್ಮ! |ಕರವೊಂದರಲಿ ವೇಣು; ಶಂಖವೊಂದರಲಿ! ||ಬೆರಳ್ಗಳೆರಡಾನುಮಿರೆ ಕೈ ಚಿಟಿಕೆಯಾಡುವುದು |ಒರುವನಾಡುವುದೆಂತು? - ಮಂಕುತಿಮ್ಮ ||
ಎಲೆಕಟ್ಟನಾಗಾಗ ಕಲಸಿಕೊಡುವುದೆ ಸೃಷ್ಟಿ |ಬಳಿಕೆಲೆಯ ಗತಿಯೆಂತೊ ಎಲ್ಲಿ ಸೇರುವುದೋ! ||ಬಳಸುತಿಹುದೊಂದೊಂದುಮೊಂದೊಂದು ದಿಕ್ಕಿನಲಿ |ಅಲೆಯುವೆವು ನಾವಂತು - ಮಂಕುತಿಮ್ಮ ||
ಎಲೆಗಳನು ಕಡ್ಡಿ; ಕಡ್ಡಿಯ ರಂಬೆಕೊಂಬೆಗಳು |ತಳೆದು ಪೆರ್ಚಿಸುತಿಹುವು ಮರದ ಬಾಳ್ಸಿರಿಯ ||ಸ್ಥಲವೊಂದು ನಿನಗಿಹುದು ವಿಶ್ವವೃಕ್ಷದೊಳಂತು |ಹಳಿಯದಿರು ನಿನ್ನಿರವ - ಮಂಕುತಿಮ್ಮ ||
ಎಲ್ಲ ಅರೆಬೆಳಕು ಅರೆಸುಳಿವು ಅರೆತಿಳಿವುಗಳಿಲ್ಲಿ |ಎಲ್ಲಿ ಪರಿಪೂರಣವೊ ಅದನರಿಯುವನಕ ||ಸೊಲ್ಲಿಸುವರಾರು ಸೃಷ್ಟಿಯ ಪೇಟಿಯೊಳಗುಟ್ಟ? |ಎಲ್ಲ ಬಾಳು ರಹಸ್ಯ - ಮಂಕುತಿಮ್ಮ ||
ಎಲ್ಲ ನಾಶನವೆಲ್ಲಕಾಲವಶವಾದೊಡಂ |ಕ್ಷುಲ್ಲಕನು ನರನಾದೊಡಂ ಕಾಲನಿದಿರೊಳ್ ||ಉಲ್ಲಾಸವೇ ಧರ್ಮ; ಕೊಲ್ಲಿಪನೆ ಬೆಳೆಯಿಪನು |ಹುಲ್ಲೊಣಗಿ ಬೆಳೆವುದಲ? - ಮಂಕುತಿಮ್ಮ ||