ಒಟ್ಟು 156 ಕಡೆಗಳಲ್ಲಿ , 1 ವಚನಕಾರರು , 135 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಸೌಂದರ್ಯ ಬಾಂಧವ್ಯಗಳು ಸತ್ಯವಲ್ಲದೊಡೆ |ಕುಂದುವಡೆಯದ ಸತ್ಯವಿಳೆಯೊಳಿನ್ನೆಲ್ಲಿ? ||ಗಂಧಾನಿಲಂಗಳವು ಪರಸತ್ತ್ವಪುಷ್ಪದವು |ಸಂದೇಹವೇನೆಲವೊ - ಮಂಕುತಿಮ್ಮ ||
ಸೌಂದರ್ಯದೊಳ್ ದ್ವಂದ್ವ; ಬಾಂಧವ್ಯದೊಳ್ ದ್ವಂದ್ವ |ದ್ವಂದ್ವವೀ ಲೋಕ ಸಹವಾಸಗಳೊಳೆಲ್ಲ ||ಮುಂದೆ ನೀನಾವುಭಯಗಳ ದಾಟಿ ಸಾಗುತಿರೆ |ಬಂಧಮೋಚನ ನಿನಗೆ - ಮಂಕುತಿಮ್ಮ ||
ಸ್ವಾತಿ ಮಳೆಹನಿ ಬೀಳ್ವ; ಶುಕ್ತಿ ಬಾಯ್ದೆರೆದೇಳ್ವ |ಕೌತುಕದ ಸಮಯಯೋಗದೆ ಮೌಕ್ತಿಕ ಫಲ ||ಪ್ರೀತಿ ಸುಖ ಸತ್ಯದರ್ಶನ ಶಾಂತಿಗಳ ಹುಟ್ಟುಮ್ |ಆ ತೆರದ ಯೋಗದಿನೆ - ಮಂಕುತಿಮ್ಮ ||
ಹತ್ಯೆಯೋ ಹನ್ಯತೆಯೊ ವಿಜಯವೋ ಪರಿಭವವೊ |ಕ್ಷತ್ರಿಯಂ ಸ್ವಾರ್ಥಮಂ ಗಣಿಸುವನೆ ರಣದೊಳ್? ||ಕೃತ್ಯನಿರ್ಣಯ ಬಾಹ್ಯಲಾಭನಷ್ಟದಿನಲ್ಲ |ಆತ್ಮಋಣವದು ಜಗಕೆ - ಮಂಕುತಿಮ್ಮ ||
ಹಾಲ ಕಾಯಿಸಿ ಹೆಪ್ಪನಿಕ್ಕಿ ಕಡೆದೊಡೆ; ಮೊದಲು |ಮೇಲೆ ಕಾಣದ ಬೆಣ್ಣೆ ತೇಲಿ ಬರುವಂತೆ ||ಬಾಳನೀ ಜಗದ ಮಂತುವು ಕಡೆಯಲೇಳುವುದು |ಆಳದಿಂದಾತ್ಮಮತಿ - ಮಂಕುತಿಮ್ಮ ||
ಹಾಳು ಹಾಳೆಲ್ಲ ಬಾಳೆನ್ನುತಿರ್ದೊಡೆಯುಮದ- |ರೂಳಿಗವ ತಪ್ಪಿಸುವ ಜಾಣನೆಲ್ಲಿಹನು? ||ಊಳಿಗವೊ ಕಾಳಗವೊ ಕೂಳ್ಕರೆಯೊ ಗೋಳ್ಕರೆಯೊ |ಬಾಳು ಬಾಳದೆ ಬಿಡದು - ಮಂಕುತಿಮ್ಮ ||
ಹುಲಿಯ ಕೆಣಕುವುದು ಹುಲಿ; ಕಪಿಯನಣಕಿಪುದು ಕಪಿ |ಹುಲಿಕಪಿಗಳವಿತಿರದ ನರಜಂತುವೆಲ್ಲಿ? ||ಮಲಗಿರುವ ಮೃಗವನಂತಿರಲು ಬಿಡುವುದೆ ಜಾಣು |ಕುಲುಕದಿರು ಬಾಲವನು - ಮಂಕುತಿಮ್ಮ ||
ಹೂವ ತಳೆದ ಗುಲಾಬಿಯಿಂದ ಮನಕಹುದೇನು? |ನೋವೊ? ಸಂತಸವೊ? ನೋಡಾಮುಳ್ಳು ಬಾಳ್ಗೆ ||ಹೂವೆ ದಿವ್ಯಕಿರೀಟವದುವೆ ಕಾಲಕಟಾಕ್ಷ |ಜೀವನದ ತಿರುಳಷ್ಟೆ - ಮಂಕುತಿಮ್ಮ ||
ಹೃದ್ಯ ಹೃದಯೇಂಗಿತಕೆ ರಾಗ ತಾಳದ ಕಟ್ಟು |ಗದ್ಯ ಲೌಕಿಕ ತಾತ್ತ್ವಿಕಕ್ಕಚ್ಚುಕಟ್ಟು ||ಮಧ್ಯದಲಿ ಮಿಸುಕಿ; ನೆಲಬಿಟ್ಟು ಬಾನ್ ಮುಟ್ಟದಿಹ |ಪದ್ಯವಧಿಕಪ್ರಸಂಗಿ - ಮಂಕುತಿಮ್ಮ ||
ಹೇರಾಳು ಮೂಟೆಗೂಲಿಯ ಬೇಡಿ ಹೆಗಲೊಡ್ಡಿ |ಭಾರವನು ನಾಲ್ಕು ಮಾರೊಯ್ದಷ್ಟರೊಳಗೇ ||ದೂರವಿನ್ನೆಷ್ಟೆನುತಲಾತುರಿಪನ್ ಅದನಿಳಿಸೆ |ಕಾರುಬಾರುಗಳಷ್ಟೆ - ಮಂಕುತಿಮ್ಮ ||
ಹೇಳಲಾಗದ ಹಸಿವು; ತಾಳಲಾಗದ ತಪನೆ |ಆಳದಲಿ ನಾಚನಾಗಿಪ ಚಿಂತೆಯೂಟೆ ||ಗಾಳಿಯೆತ್ತೆತ್ತಣಿನೊ ತಂದೀವ ಸೋಂಕು---ಇವೆ |ಬಾಳ ಸಾಮಗ್ರಿಯಲ - ಮಂಕುತಿಮ್ಮ ||
ಹೊಟ್ಟೆರಾಯನ ನಿತ್ಯದಟ್ಟಹಾಸವೊ ಬಾಳು |ಧೃಷ್ಟ ಧಣಿಯೂಳಿಗಕೆ ಸೊಟ್ಟು ಮೈಬಾಗು ||ಹಿಟ್ಟಿಗಗಲಿದ ಬಾಯಿ; ಬಟ್ಟೆಗೊಡ್ಡಿದ ಕೈಯಿ |ಇಷ್ಟೆ ನಮ್ಮೆಲ್ಲ ಕಥೆ - ಮಂಕುತಿಮ್ಮ ||
ಹೊರಗು ಹೊರೆಯಾಗದವೊಲ್ ಒಳಗನನುಗೊಳಿಸಿ; ನೀ- |ನೊಳಗು ಶೆಕೆಯಾಗದವೊಲ್ ಅಳವಡಿಸೆ ಹೊರಗ ||ಸರಿಸಮದೊಳೆರಡನುಂ ಬಾಳಿನಲಿ ಜೋಡಿಪುದೆ |ಪರಮಜೀವನಯೋಗ - ಮಂಕುತಿಮ್ಮ ||
ಹೊಸತನವೆ ಬಾಳು; ಹಳಸಿಕೆಯೆಲ್ಲ ಸಾವು ಬಿಡು |ರಸವು ನವನವತೆಯಿಂದನುದಿನವು ಹೊಮ್ಮಿ ||ಹಸನೊಂದು ನುಡಿಯಲ್ಲಿ ನಡೆಯಲ್ಲಿ ನೋಟದಲಿ |ಪಸರುತಿರೆ ಬಾಳ್ ಚೆಲುವು - ಮಂಕುತಿಮ್ಮ ||
ಹೋರಾಡು ಬೀಳ್ವನ್ನಮೊಬ್ಬೊಂಟಿಯಾದೊಡಂ |ಧೀರಪಥವನೆ ಬೆದಕು ಸಕಲಸಮಯದೊಳಂ ||ದೂರದಲಿ ಗೊಣಗುತ್ತ ಬಾಳ್ವ ಬಾಳ್ಗೇನು ಬೆಲೆ? |ಹೋರಿ ಸತ್ತ್ವವ ಮೆರಸು - ಮಂಕುತಿಮ್ಮ ||