ಒಟ್ಟು 170 ಕಡೆಗಳಲ್ಲಿ , 1 ವಚನಕಾರರು , 151 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಲೋಕವೆಲ್ಲವು ಚಿತ್ರವಿಂದ್ರಜಾಲದ ಕೃತ್ಯ |ಸಾಕೆನದೆ ಬೇಕೆನದೆ ನೋಡು ನೀನದನು ||ತಾಕಿಸದಿರಂತರಾತ್ಮಂಗಾವಿಚಿತ್ರವನು |ಹಾಕು ವೇಷವ ನೀನು - ಮಂಕುತಿಮ್ಮ ||
ಲೋಕವೆಲ್ಲವು ದೈವಲೀಲೆಯೆಂಬರೆ; ಪೇಳಿ |ಶೋಕ ಸೋಂಕಿರದೊಡಾ ಲೀಲೆ ನೀರಸವೇಂ? ||ಮೂಕಂಗೆ ಕಳ್ ಕುಡಿಸಿ ಚೇಳ್ ಕುಟಕಿಪಾಟವಿದು |ಏಕಪಕ್ಷದ ಲೀಲೆ - ಮಂಕುತಿಮ್ಮ ||
ವಿಧಿಗೆ ನೀಂ ಕಾರ್ಯನಕ್ಷೆಯ ವಿಧಿಸ ಹೊರಡದಿರು |ಅಧಿಕಾರಿ ನೀನಲ್ಲ; ವಿಧಿ ಬೆಪ್ಪನಲ್ಲ ||ಹದವರಿತು ವಿಧಿ ತಾನೆ ಕುದುರಿಸುವನೆಲ್ಲವನು |ಅದಟದಿರು ನೀನವನ - ಮಂಕುತಿಮ್ಮ ||
ಶೂನ್ಯವೆಲ್ಲವುಮೆಂಬೊಡಂತೆನಿಸುವುದದೇನು? |ಅನ್ಯವಿಲ್ಲೆನುವರಿವದೊಂದಿರ್ಪುದಲ್ತೆ? ||ಚಿನ್ಮಯವನದನೆ ನೀಂ ಸತ್ಯವೆಂದಾಶ್ರಯಿಸು |ಶೂನ್ಯವಾದವೆ ಶೂನ್ಯ - ಮಂಕುತಿಮ್ಮ ||
ಶ್ರೀಯನಾಯುವ ಬಲವ ಜಯವ ಬೇಡಿರ್ದೊಡಂ |ಗಾಯತ್ರಿಯನೆ ಪರಮಮಂತ್ರವೆಂದಾರ್ಯರ್ |ಧೀಯಂ ಪ್ರಚೋದಿಸೆಂದನುದಿನದಿ ಬೇಡಿದರು |ಶ್ರೇಯಸ್ಸು ಧೀಮಹಿಮೆ - ಮಂಕುತಿಮ್ಮ ||
ಸಂದೇಹವೀ ಕೃತಿಯೊಳಿನ್ನಿಲ್ಲವೆಂದಲ್ಲ |ಇಂದು ನಂಬಿಹುದೆ ಮುಂದೆಂದುಮೆಂದಲ್ಲ ||ಕುಂದು ತೋರ್ದಂದದನು ತಿದ್ದಿಕೊಳೆ ಮನಸುಂಟು |ಇಂದಿಗೀ ಮತವುಚಿತ - ಮಂಕುತಿಮ್ಮ ||
ಸದ್ದು ಮಾಡದೆ ನೀನು ಜಗಕೆ ಬಂದವನಲ್ಲ |ಒದ್ದಾಟ ಗುದ್ದಾಟ ಬಾಳೆಲ್ಲವಾಯ್ತು ||ಗದ್ದಲವ ಬಿಡಲು ಕಡೆದಿನವಾನುಮಾದೀತೆ? |ನಿದ್ದೆವೊಲು ಸಾವ ಪಡೆ - ಮಂಕುತಿಮ್ಮ ||
ಸಂಬಳದ ಹಂಬಲವೊ; ಡಾಂಬಿಕತೆಯಬ್ಬರವೊ |ಇಂಬು ಕೂರ್ಮೆಯ ಕರೆಯೊ; ಕರುಳ ಕರೆಕರೆಯೋ ||ತುಂಬಿಹುವು ಬಾಳಿನಲಿ ನೂರು ತಕರಾರುಗಳು |ಬೆಂಬಲವವೆಲೊ ಜಗಕೆ - ಮಂಕುತಿಮ್ಮ ||
ಸಮವರ್ತಿಗಳು ಜಗದೊಳಿಬ್ಬರೇ ದಿಟವರಿಯೆ |ಯಮರಾಜನೊಬ್ಬ ಜಾಠರರಾಜನೊಬ್ಬ ||ಶ್ರಮವನನುದಿನಮುಮಾಗಿಪನೊಬ್ಬನೆಲ್ಲವನು |ಶಮಿಸಿ ಮುಗಿಸುವನೊಬ್ಬ - ಮಂಕುತಿಮ್ಮ ||
ಸರಿಯಾಗಲಿಲ್ಲವದು ಸರಿಯಿದಲ್ಲವೆನುತ್ತ |ಹರಡಿಕೊಳಬೇಡ ಮುಳ್ಳನು ಹಾಸಿಗೆಯಲಿ ||ಕೊರೆಯಾದೊಡೇನೊಂದು? ನೆರೆದೊಡೇನಿನ್ನೊಂದು? |ಒರಟು ಕೆಲಸವೊ ಬದುಕು - ಮಂಕುತಿಮ್ಮ ||
ಸರ್ವಾರ್ಥ ಸಹಭಾಗಿತೆಗೆ ರಾಷ್ಟ್ರ ಕುಲ ವರ್ಗ |ಸರ್ವದಣು ತಾನೆನುತ್ತೋರೊರ್ವ ಮನುಜನ್ ||ಸರ್ವಜೀವ ಸಮೃದ್ಧಿಗನುಗೂಡಿ ದುಡಿಯುತಿರೆ |ಪರ್ವವಂದಿಳೆಗೆಲವೊ - ಮಂಕುತಿಮ್ಮ ||
ಸಾಧ್ಯಪಡದಾರಿಗಂ ನರಭಾಲಪಟ್ಟವನು |ಶುದ್ಧಪಡಿಸಲು ತೊಡೆದು ಪೂರ್ವದೆಲ್ಲವನು ||ಹೊದ್ದೆ ಹರಿಯಲಿ ಬೇಕು ಕರ್ಮಶೇಷದ ಪಟವ |ಬುದ್ಧಿನುಡಿ ಸೈರಣೆಯೆ - ಮಂಕುತಿಮ್ಮ ||
ಸಿಂಧುವನು ಹಿಮಗಿರಿಗೆ ಹಿಂದಿರುಗಿ ಬೇರೊಂದು |ಚೆಂದದಲಿ ಪರಿದು ಬಾರೆಂದಾಣತಿಪೆಯಾ? ||ಸಂದರ್ಭವಿಡಿದು ಜನಚೈತನ್ಯ ಪರಿದಿಹುದು |ಅಂಧಗತಿಯಲ್ಲವದು - ಮಂಕುತಿಮ್ಮ ||
ಸಿರಿದರಿದ್ರತೆಗಳ್ಗೆ ಫಲದೊಳಂತರ ಕಿರಿದು |ಸರಿತಪ್ಪುಗಳಿಗಂತು; ಜಾಣ್ ಬೆಪ್ಪುಗಳ್ಗಂ ||ಮರಣವೆಲ್ಲವನೊಂದೆ ತೆರದಿ ಮುಸುಕುವುದೆಂದೊ |ಪರವೆಯೆಂತಾದೊಡೇಂ? - ಮಂಕುತಿಮ್ಮ ||
ಸುತೆಯ ಪೋಷಿಸಿ ಬೆಳಸಿ; ಧನಕನಕದೊಡನವಳನ್- |ಇತರಗೃಹಕಿತ್ತು ನೀಂ ಕೇಳ್ವ ಮುಯ್ಯೇನು? ||ಪ್ರತಿಫಲವು ಬೇರೇಕೆ? ಸುಕೃತಕದು ತಾನೆ ಫಲ |ಹಿತ ಮನದ ಪಾಕಕದು - ಮಂಕುತಿಮ್ಮ ||