ಒಟ್ಟು 4 ಕಡೆಗಳಲ್ಲಿ , 1 ವಚನಕಾರರು , 4 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಅನುಭವದ ಪರಿ ನೂರ್ವರಿಗೆ ನೂರು ನೂರು ಪರಿ |ದಿನವೊಂದರೊಳೆ ಅದೊಬ್ಬಂಗೆ ನೂರು ಪರಿ ||ಎಣಿಪುದಾರನುಭವವನ್; ಆವ ಪ್ರಮಾಣದಲಿ? |ಮಣಲ ಗೋಪುರವೊ ಅದು - ಮಂಕುತಿಮ್ಮ ||
ಅನುಭವದ ಪಾಲೊಳು ವಿಚಾರ ಮಂಥನವಾಗೆ |ಜನಿಯಿಕುಂ ಜ್ಞಾನನವನೀತವದೆ ಸುಖದಂ ||ಗಿಣಿಯೋದು ಪುಸ್ತಕಜ್ಞಾನ; ನಿನ್ನನುಭವವೆ |ನಿನಗೆ ಧರುಮದ ದೀಪ - ಮಂಕುತಿಮ್ಮ ||
ಗಣನೆಗೆಟುಕದ ಗುಣಗಳಾತ್ಮದವವರ್ಣ್ಯಗಳು |ಮನದ ದೇಹದ ಜೀವದೆಲ್ಲ ಕರಣಗಳಾ ||ಅನುಭವದ ಮುಕುರದೊಳ್ ಪ್ರತಿಫಲಿಸೆ ತನ್ನದೊಂ- |ದಣುವದುವೆ ಸುಂದರವೊ - ಮಂಕುತಿಮ್ಮ ||
ತನುವ ತಣಿಸುವ ತುತ್ತು ಮನಕೆ ನಂಜಾದೀತು |ಮನಮೋಹ ಜೀವಕ್ಕೆ ಗಾಳವಾದೀತು ||ಅನುಭವದ ಪರಿಣಾಮವೊಂದರಿಂದೊಂದಕ್ಕೆ |ಗಣಿಸಾತ್ಮಲಾಭವನು - ಮಂಕುತಿಮ್ಮ ||