ಒಟ್ಟು 3 ಕಡೆಗಳಲ್ಲಿ , 1 ವಚನಕಾರರು , 3 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಎನ್ನ ಬೇಡಿಕೆ ನಷ್ಟವಹುದೆಂತು ದೇವನಿರೆ? |ಅನ್ಯಾಯ ಜಗವೆಲ್ಲ; ದೇವನಿರನೆನುತ ||ತನ್ನ ತನ್ನನುಭವವ ನಂಬಲೋರೊರ್ವನುಂ |ಭಿನ್ನವಾಗದೆ ಸತ್ಯ? - ಮಂಕುತಿಮ್ಮ ||
ಕಣ್ಣೆರಡದೇಕೆರಡುಮೊಂದೆ ಪಕ್ಕದೊಳೇಕೆ? |ಬೆನ್ನೊಳೊಂದೆದೆಯೊಳೊಂದಿರಲು ಸುಕರವಲ? ||ಅನ್ಯಾಯ ವಿಕಟಂಗಳೆನಿತೊ ಸೃಷ್ಟಿಕ್ರಮದಿ! |ಸೊನ್ನೆ ಜನವಾಕ್ಕಲ್ಲಿ - ಮಂಕುತಿಮ್ಮ ||
ವನ್ಯಮೃಗಗಳ ನಡುವೆ ಗೋವು ಬಂದೇನಹುದು? |ಪಣ್ಯವೀಧಿಯಲಿ ತಾತ್ತ್ವಿಕನಿಗೇನಹುದು? ||ಅನ್ಯಾಯದುನ್ಮತ್ತ ಕೋಲಾಹಲದ ಲೋಕ |ಪುಣ್ಯವನು ಚಿಂತಿಪುದೆ? - ಮಂಕುತಿಮ್ಮ ||