ಒಟ್ಟು 9 ಕಡೆಗಳಲ್ಲಿ , 1 ವಚನಕಾರರು , 7 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಅದು ಒಳಿತು ಇದು ಕೆಟ್ಟುದೆಂಬ ಹಟ ನಿನಗೇಕೆ? |ಹೊದಿಸಿಹುದು ದೈವವೆಲ್ಲಕಮೊಂದು ತೆರೆಯ ||ಸೊದೆಯ ಸೌರಭ ನಂಜುಬಟ್ಟಲಲಿ ತೋರೀತು |ವಿಧಿಯ ಬಗೆಯೆಂತಿಹುದೊ! - ಮಂಕುತಿಮ್ಮ ||
ಅದು ಬೇಕು ಇದು ಬೇಕು ಮತ್ತೊಂದು ಬೇಕೆಂದು |ಬೆದಕುತಿರುವುದು ಲೋಕ ಸೊಗದಿರವನೆಳಸಿ ||ಹೃದಯಗುಹೆಯಾ ಸುಖಧ್ಯಾನದೂಟೆಯೆ ಸಾಕ್ಷಿ |ಮುದಗಳಮಿತದ ನಿಧಿಗೆ - ಮಂಕುತಿಮ್ಮ ||
ಇದು ನಡೆಯಲಿಲ್ಲವದು ನಿಂತುಹೋಯಿತೆನುತ್ತ |ಎದೆಯುಬ್ಬೆಗವನೊಂದಿ ಕುದಿಯುತಿಹುದೇಕೋ? ||ಅಧಿಕಾರಪಟ್ಟವನು ನಿನಗಾರು ಕಟ್ಟಿಹರು? |ವಿಧಿಯ ಮೇಸ್ತ್ರಿಯೆ ನೀನು? - ಮಂಕುತಿಮ್ಮ ||
ಇಂದು ಮದುವೆಯ ಹಬ್ಬ; ನಾಳೆ ವೈಕುಂಠ ತಿಥಿ |ಇಂದು ಮೃಷ್ಟಾನ್ನಸುಖ; ನಾಳೆ ಭಿಕ್ಷಾನ್ನ ||ಇಂದು ಬರಿಯುಪವಾಸ; ನಾಳೆ ಪಾರಣೆ---ಯಿಂತು |ಸಂದಿರುವುದನ್ನಋಣ - ಮಂಕುತಿಮ್ಮ ||
ಇಂದೆದ್ದ ತೆರೆ ನಾಳೆ ಬೀಳುವುದು; ಮರುವಗಲು |ಮುಂದೆ ತಾನೇಳುವುದು ಬೇರೆ ಗಾತ್ರದಲಿ ||ಇಂದು ನಾಳೆಗಳನೆಲ್ಲವ ಕೂಡಿ ನೋಡಿದೊಡೆ |ಮುಂದಹುದು ಬೆರಗೊಂದೆ - ಮಂಕುತಿಮ್ಮ ||
ಬಾಂದಳದ ಬಾಗು; ರವಿಕಿರಣಗಳ ನೀಳ್ಕೋಲು |ಇಂದುಮಣಿನುಣ್ಪು; ತಾರೆಗಳ ಕಣ್ಮಿನುಗು ||ಚೆಂದದಂಗಾಂಗಭಾವದಿ ಮೊದಲ ಪಾಠವಿವು |ಸೌಂದರ್ಯಗುರು ಪ್ರಕೃತಿ - ಮಂಕುತಿಮ್ಮ ||
ಸಂದೇಹವೀ ಕೃತಿಯೊಳಿನ್ನಿಲ್ಲವೆಂದಲ್ಲ |ಇಂದು ನಂಬಿಹುದೆ ಮುಂದೆಂದುಮೆಂದಲ್ಲ ||ಕುಂದು ತೋರ್ದಂದದನು ತಿದ್ದಿಕೊಳೆ ಮನಸುಂಟು |ಇಂದಿಗೀ ಮತವುಚಿತ - ಮಂಕುತಿಮ್ಮ ||