ಕಗ್ಗ ಸಂಚಯ alpha
  • ಡಿ.ವಿ.ಜಿ
  • ಕಗ್ಗ
  • ಸಂಶೋಧನೆ
  • ಪದಕೋಶ
  • ಸಂಪರ್ಕಿಸಿ
  • ನಮ್ಮ ಬಗ್ಗೆ
ಇದರಂತೆ : ಇದನ್ನು :

ಒಟ್ಟು 5 ಕಡೆಗಳಲ್ಲಿ , 1 ವಚನಕಾರರು , 5 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಲ್ಲಿ ಚೆನ್ನಲ್ಲಿ ಚೆನ್ನೆಲ್ಲೊ ಚೆನ್ನೆನುತೆಣಿಸಿ |ಹುಲ್ಲುಬಯಲೊಂದೆಡೆಯಿನೊಂದಕ್ಕೆ ನೆಗೆದು ||ಮೆಲ್ಲದೆಯೆ ಧಾವಿಸುತ ದಣಿವ ಕರುವನು ಪೋಲ್ತೊ- |ಡೆಲ್ಲಿಯೋ ಸುಖ ನಿನಗೆ? - ಮಂಕುತಿಮ್ಮ ||
--------------
ಡಾ. ಡಿ.ವಿ.ಗುಂಡಪ್ಪ

ಇಹುದೊ ಇಲ್ಲವೊ ತಿಳಿಯಗೊಡದೊಂದು ವಸ್ತು ನಿಜ |ಮಹಿಮೆಯಿಂ ಜಗವಾಗಿ ಜೀವವೇಷದಲಿ ||ವಿಹರಿಪುದದೊಳ್ಳಿತೆಂಬುದು ನಿಸದವಾದೊಡಾ |ಗಹನ ತತ್ತ್ವಕೆ ಶರಣೊ - ಮಂಕುತಿಮ್ಮ ||

ಎಲ್ಲ ಬರಿ ಗೊಣಗಾಟ; ತಿಣಕಾಟ; ತಡಕಾಟ |ಇಲ್ಲ ನಮಗೂರೆಕೋಲ್; ತಿಳಿಬೆಳಕುಮಿಲ್ಲ ||ಬಲ್ಲತನ ಮಬ್ಬಿನಲಿ ನಿದ್ರಿಸದೆ ತೆವಳುವುದು |ಸಲ್ಲದುಬ್ಬಟೆ ನಮಗೆ - ಮಂಕುತಿಮ್ಮ ||

ಎಲ್ಲಕಂ ನಿನಗಿಲ್ಲ ಕರ್ತವ್ಯದಧಿಕಾರ |ಇಲ್ಲದೆಯುಮಿಲ್ಲ ನಿನಗಾ ಹೊರೆಯ ಪಾಲು ||ಸಲ್ಲಿಸಾದನಿತ; ಮಿಕ್ಕುದು ಪಾಲಿಗನ ಪಾಡು |ಒಲ್ಲನವನ್ ಅರೆನಚ್ಚ - ಮಂಕುತಿಮ್ಮ ||

ಒಳ್ಳೆ ಲೆಕ್ಕಿಗನಲ್ಲ ಪರಮೇಷ್ಠಿ; ನಮ್ಮಿಂದ |ಸಲ್ಲುವುದ ಕೊಳಲು ಜನ್ಮಾಂತರಕೆ ಕಾಯ್ವಂ ||ಇಲ್ಲಿ ಸಲ್ಲುವುದ ತಾನಿಂದೆ ತೀರಿಸಿಕೊಳ್ಳ- |ಲೊಲ್ಲನೇನಂತಕನು? - ಮಂಕುತಿಮ್ಮ ||

©2014 - 2020 ಕನ್ನಡ ಸಂಚಯ | ಸಾಹಿತ್ಯ ಸಂಶೋಧನೆ ಹಾಗೂ ಅಧ್ಯಯನ ವೇದಿಕೆ