ಒಟ್ಟು 18 ಕಡೆಗಳಲ್ಲಿ , 1 ವಚನಕಾರರು , 17 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಆವುದಿರುವಿಕೆಗಾದಿ? ಎಂದು ಸೃಷ್ಟಿಯ ಮೊದಲು? |ಅವುದಬ್ಧಿಯ ತೆರೆಗಳಲಿ ಮೊಟ್ಟಮೊದಲು? ||ಆವುದೆಲರಿನ ನಿಲ್ಲದಲೇತಕ್ಕೆ ಗಡುಸೀಮೆ? |ಈ ವಿಶ್ವಕಥೆಯಂತು - ಮಂಕುತಿಮ್ಮ ||
ಆಹ! ಈ ಮೋಹಗಳೊ ನೇಹಗಳೊ ದಾಹಗಳೊ |ಊಹಿಪೆಯ ಸೃಷ್ಟಿಯಲಿ ಹೃದಯವಿಹುದೆಂದು? ||ಹೋಹೊ ಹಾಹಾ ಎಂದು ನಮ್ಮ ಬಾಯ್ಬಿಡಿಸುವುದೆ |ಈ ಹರಿಬದೊಳಗುಟ್ಟೊ? - ಮಂಕುತಿಮ್ಮ ||
ಈ ಜಗದ ಗಂಧ ಪರಿಪರಿ ಹಸಿವ ಕೆಣಕುತಿರೆ |ಭೋಜನವ ನೀಡೆನೆನೆ ಮನ ಸುಮ್ಮನಿಹುದೆ? ||ಸಾಜಗಳ ಕೊಲ್ಲೆನುವ ಹಠಯೋಗಕಿಂತ ಸರಿ |ರಾಜಯೋಗದುಪಾಯ - ಮಂಕುತಿಮ್ಮ ||
ಈ ವಿಶ್ವದಲಿ ನೋಡಲೆಲ್ಲರೆಲ್ಲರ ನಂಟು |ಆವನಾ ಬಂಧುತೆಯ ಜಡೆಯ ಬಿಡಿಸುವನು? ||ಜೀವ ಜೀವಕೆ ನಂಟು ಜಡ ಚೇತನಕೆ ನಂಟು |ಆವುದದಕಂಟಿರದು? - ಮಂಕುತಿಮ್ಮ ||
ಏಕವಾಗವೆ ದೈವಚಿತ್ತ ನರಚಿತ್ತಗಳು? |ಏಕೆನ್ನ ಮನವನಾಳನು ಲೋಕದೊಡೆಯಂ? ||ಬೇಕೆನಿಪುದೊಂದೆನಗೆ; ವಿಧಿ ಗೆಯ್ವುದಿನ್ನೊಂದು |ಈ ಕುಟಿಲಕೇಂ ಮದ್ದು? - ಮಂಕುತಿಮ್ಮ ||
ಕಡಿದೊಡೆ ಪರೀಕ್ಷೆಗುಳಿವುವು ಸತ್ತನಾರುಗಳು |ಕಡಿಯದಿರೆ ಮರದಿ ಪರಿಯುವುದು ಜೀವರಸ ||ಬಿಡುವಮ್ ಈ ಬಾಳ್ ಅದೇಕೆಂಬ ಚರ್ಚೆಯ; ನಾವು |ದುಡಿವಮ್ ಅದು ಪೆಂಪುಗೊಳೆ - ಮಂಕುತಿಮ್ಮ ||
ಜೀವನದೊಂದು ಪರಮೈಶ್ವರ್ಯ ಬೊಮ್ಮನದು |ಸೇವೆಯದನೂರ್ಜಿತಂಗೊಳಿಸುವೆಲ್ಲೆಸಕ ||ಈವರಾರ್ ಕೊಳುವರಾರೆಲ್ಲರೊಂದಾಗಿರಲು? |ನೈವೇದ್ಯಭಾಗಿ ನೀಂ - ಮಂಕುತಿಮ್ಮ ||
ಜೀವನವ್ಯಾಪಾರ ಮೂವರೊಟ್ಟುವಿಚಾರ |ಭಾವಿಪೊಡೆ ನೀನು; ಜಗ; ಇನ್ನೊಂದದೃಷ್ಟ ||ಆವಗಂ ಮೂರನೆಯ ಭಾಗಸ್ಥನಿಚ್ಛೆ ಬಲ |ಈ ವಿವರವರಿಯೆ ಸುಖ - ಮಂಕುತಿಮ್ಮ ||
ತಾಯೊ ತಂಗಿಯೊ ಎನಿಪ ಶುಚಿಯ ಸೌಮ್ಯದ ಸೊಬಗು |ಪ್ರೇಯಸಿಯ ಕರೆವೊಲಾತುರವಡಿಪ ಬೆಡಗು ||ಈಯೆರಡು ಸಮದ ರುಚಿ ನಿನ್ನನಿಬ್ಬಗೆಗೊಳಿಸೆ |ಧ್ಯೇಯ ನಿನಗಾವುದೆಲೊ? - ಮಂಕುತಿಮ್ಮ ||
ತೋಯಿಸುತ ಬೇಯಿಸುತ ಹೆಚ್ಚುತ್ತ ಕೊಚ್ಚುತ್ತ |ಕಾಯಿಸುತ ಕರಿಯುತ್ತ ಹುರಿಯುತ್ತ ಸುಡುತ ||ಈಯವನಿಯೊಲೆಯೊಳೆಮ್ಮಯ ಬಾಳನಟ್ಟು ವಿಧಿ |ಬಾಯ ಚಪ್ಪರಿಸುವನು - ಮಂಕುತಿಮ್ಮ ||
ಬದುಕಿಗಾರ್ ನಾಯಕರು; ಏಕನೊ ಅನೇಕರೋ? |ವಿಧಿಯೊ ಪೌರುಷವೊ ಧರುಮವೊ ಅಂಧಬಲವೋ? ||ಕುದುರುವುದದೆಂತು ಈಯವ್ಯವಸ್ಥೆಯ ಪಾಡು? |ಅದಿಗುದಿಯೆ ಗತಿಯೇನೊ? - ಮಂಕುತಿಮ್ಮ ||
ರಾಮನಿರ್ದಂದು ರಾವಣನೊಬ್ಬನಿರ್ದನಲ |ಭೀಮನಿರ್ದಂದು ದುಶ್ಯಾಸನನದೊರ್ವನ್ ||ಈ ಮಹಿಯೊಳನ್ಯಾಯಕಾರಿಯಿಲ್ಲದುದೆಂದು? |ರಾಮಭಟನಾಗು ನೀಂ - ಮಂಕುತಿಮ್ಮ ||
ವಾಸನೆ ವಿವೇಚನೆಗಳೆರಡಕಂ ಸಂಘರ್ಷೆ |ಪ್ರಾಚೀನಕಂ ಪೌರುಷಕ್ಕಮಿರುವಂತೆ ||ಆಶಾವಿನಾಶಮುಂ ಧೀಶಕ್ತಿಯುದ್ಭವಮುಮ್ |ಈಶಪ್ರಸಾದದಿಂ - ಮಂಕುತಿಮ್ಮ ||
ವ್ಯಾಕರಣ ಕಾವ್ಯಲಕ್ಷಣಗಳನು ಗಣಿಸದೆಯೆ |ಲೋಕತಾಪದಿ ಬೆಂದು ತಣಿಪನೆಳಸಿದವಂ ||ಈ ಕಂತೆಯಲಿ ತನ್ನ ನಂಬಿಕೆಯ ನೆಯ್ದಿಹನು |ಸ್ವೀಕರಿಕೆ ಬೇಳ್ವವರು - ಮಂಕುತಿಮ್ಮ ||
ಹಾಗೆಯೋ ಹೀಗೆಯೋ ಹೇಗೆ ಹೇಗೆಯೊ ಜನುಮ |ಸಾಗಿ ಮುಗಿವುದು; ಮುಗಿದು ಮರೆವುದದೆ ಸುಕೃತ ||ಈಗಲೋ ಆಗಲೋ ಎಂದೊ ಮುಗಿವುಂಟೆಂಬ |ಭಾಗ್ಯವನು ನೆನೆದು ನಲಿ - ಮಂಕುತಿಮ್ಮ ||