ಕಗ್ಗ ಸಂಚಯ alpha
  • ಡಿ.ವಿ.ಜಿ
  • ಕಗ್ಗ
  • ಸಂಶೋಧನೆ
  • ಪದಕೋಶ
  • ಸಂಪರ್ಕಿಸಿ
  • ನಮ್ಮ ಬಗ್ಗೆ
ಇದರಂತೆ : ಇದನ್ನು :

ಒಟ್ಟು 5 ಕಡೆಗಳಲ್ಲಿ , 1 ವಚನಕಾರರು , 5 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಧಾರುಣಿಯ ನಡಿಗೆಯಲಿ ಮೇರುವಿನ ಗುರಿಯಿರಲಿ |ಮೇರುವನು ಮರೆತಂದೆ ನಾರಕಕೆ ದಾರಿ ||ದೂರವಾದೊಡದೇನು? ಕಾಲು ಕುಂಟಿರಲೇನು? |ಊರ ನೆನಪೇ ಬಲವೊ - ಮಂಕುತಿಮ್ಮ ||
--------------
ಡಾ. ಡಿ.ವಿ.ಗುಂಡಪ್ಪ

ನರವಿವೇಕವದೇನು ಬರಿಯ ಮಳೆನೀರಲ್ಲ |ಕೆರೆಯ ನೀರ್ ಊರ ಮೈಸೋಂಕುಗಳ ಬೆರಕೆ ||ಧರೆಯ ರಸವಾಸನೆಗಳಾಗಸದ ನಿರ್ಮಲದ |ವರವ ಕದಡಾಗಿಪುವು - ಮಂಕುತಿಮ್ಮ ||

ನೀರ ನೆರೆ ತನ್ನೆದುರಿನಣೆಕಟ್ಟನೊದೆಯುವುದು |ಊರನದು ಕೊಚ್ಚುವುದು ಬದಿಯ ಕಟ್ಟದಿರೆ ||ಏರಿಗಳನಿಕ್ಕೆಲದಿ ನಿಲಿಸೆ ಹರಿವುದು ಸಮನೆ |ಪೌರುಷದ ನದಿಯಂತು - ಮಂಕುತಿಮ್ಮ ||

ನೂರಾರು ಸರಕುಗಳು ಜೀವಿತದ ಸಂತೆಯಲಿ |ಊರಿನವು; ಕೇರಿಯವು; ಮನೆಯಾತ್ಮವದವು ||ಬೇರೆ ಬೇರೆ ಪುರುಳ್ಗೆ ಬೇರೆ ನೆಲೆ; ಬೇರೆ ಬೆಲೆ |ತಾರತಮ್ಯವೆ ತತ್ತ್ವ - ಮಂಕುತಿಮ್ಮ ||

ಪಾರಿಜಾತವ ಕಂಡು ನಿಡುಸುಯ್ದು; ಪದಗಳಿಂ |ಶೌರಿಕಥೆಯನು ಹೆಣೆದು ತೃಪ್ತನಹನು ಕವಿ ||ಊರಿನುದ್ಯಾನಕದ ತರಿಸಿ ಬೆಳಸುವ ಕಾರ್ಯ- |ಧೀರನಲ ರಾಜ್ಯಕನು - ಮಂಕುತಿಮ್ಮ ||

©2014 - 2020 ಕನ್ನಡ ಸಂಚಯ | ಸಾಹಿತ್ಯ ಸಂಶೋಧನೆ ಹಾಗೂ ಅಧ್ಯಯನ ವೇದಿಕೆ