ಒಟ್ಟು 4 ಕಡೆಗಳಲ್ಲಿ , 1 ವಚನಕಾರರು , 4 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಅಂತೊ ಇಂತೋ ಎಂತೊ ಜೀವಕಥೆ ಮುಗಿಯುವುದು |ಅಂದೊ ಇಂದೋ ಎಂದೊ ಜನುಮ ಕಳೆಯುವುದು ||ಒಂದೆ ಮರೆವಿನ ಮುಸುಕು ಮುಸುಕಲಿಹುದೆಲ್ಲವನು |ಸಂತಸದ ಮಾತಿಷ್ಟೆ - ಮಂಕುತಿಮ್ಮ ||
ಎಂದೊ ನಿನಗೊಂದುದಿನ ಮೂಗು ಮುರಿಯುವುದು ದಿಟ |ವೃಂದಾರಕರು ಮತ್ಸರಿಸರೆ ಗರ್ವಿತರ? ||ಸಂದರ್ಭಗಳನದಕೆ ಜೋಡಿಪನು ವಿಧಿರಾಯ |ಅಂದಿಕೊಳ್ಳನೆ ನಿನ್ನ? - ಮಂಕುತಿಮ್ಮ ||
ಹಾಗೆಯೋ ಹೀಗೆಯೋ ಹೇಗೆ ಹೇಗೆಯೊ ಜನುಮ |ಸಾಗಿ ಮುಗಿವುದು; ಮುಗಿದು ಮರೆವುದದೆ ಸುಕೃತ ||ಈಗಲೋ ಆಗಲೋ ಎಂದೊ ಮುಗಿವುಂಟೆಂಬ |ಭಾಗ್ಯವನು ನೆನೆದು ನಲಿ - ಮಂಕುತಿಮ್ಮ ||
ಹೀಗೊ ಹಾಗೋ ಹೇಗೊ ಜನುಮಕಥೆ ಮುಗಿಯುವುದು |ಈಗಲೋ ಆಗಲೋ ಎಂದೊ ಮುಗಿಯುವುದು ||ಸಾಗಿಮುಗಿವುದು; ಮುಗಿದು ಮರೆವುದದೆ ನರಸುಕೃತ |ಭೂಗತಸ್ಥಿತಿ ಮುಕುತಿ - ಮಂಕುತಿಮ್ಮ ||