ಒಟ್ಟು 9 ಕಡೆಗಳಲ್ಲಿ , 1 ವಚನಕಾರರು , 8 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಆಶೆಗಳ ಕೆಣಕದಿರು; ಪಾಶಗಳ ಬಿಗಿಯದಿರು |ಕ್ಲೇಶದ ಪರೀಕ್ಷೆಗಳಿಗೆನ್ನ ಕರೆಯದಿರು ||ಬೇಸರದ ಪಾತಕಸ್ಮೃತಿಯ ಚುಚ್ಚದಿರ್; ಎನ್ನು- |ತೀಶನನು ಬೇಡುತಿರೊ - ಮಂಕುತಿಮ್ಮ ||
ಎನ್ನ ಬೇಡಿಕೆ ನಷ್ಟವಹುದೆಂತು ದೇವನಿರೆ? |ಅನ್ಯಾಯ ಜಗವೆಲ್ಲ; ದೇವನಿರನೆನುತ ||ತನ್ನ ತನ್ನನುಭವವ ನಂಬಲೋರೊರ್ವನುಂ |ಭಿನ್ನವಾಗದೆ ಸತ್ಯ? - ಮಂಕುತಿಮ್ಮ ||
ತನ್ನ ಬೆವರಿನ ಕೊಳದಿ ತಾಂ ಮುಳುಗಿ ತೇಲುತ್ತೆ |ಧನ್ಯನಾನೆನ್ನುವನದೊರ್ವ ಸ್ವತಂತ್ರನ್ ||ಪುಣ್ಯತೀರ್ಥದೊಳಿಳಿದು ಕರಗಲ್ ಸ್ವತಂತ್ರ ತಾನ್ |ಎನ್ನುವವನಿನ್ನೊರ್ವ - ಮಂಕುತಿಮ್ಮ ||
ತನ್ನ ರುಚಿ ರಾಮರುಚಿ; ತನ್ನ ಸಂತುಷ್ಟಿ ಪರಿ- |ಪೂರ್ಣವಪ್ಪುದು ರಾಮಸಂತುಷ್ಟಿಯಿಂದೆ ||ಎನ್ನುವಾ ಸಾಜದಾ ದೈವಾತ್ಮಭಾವದಲಿ |ಧನ್ಯಳಾದಳು ಶಬರಿ - ಮಂಕುತಿಮ್ಮ ||
ಬನ್ನಿರಾಡುವ ಕಣ್ಣಮುಚ್ಚಾಲೆಯಾಟವನು |ಎನ್ನನರಸಿರಿ ಬನ್ನಿ ಮಕ್ಕಳಿರ ಬೇಗ ||ಬನ್ನಿರಾಟವ ಬೇಡವೆಂಬರನು ನಾಂ ಬಿಡೆನು |ಎನ್ನುವಜ್ಜಿಯೊ ಬೊಮ್ಮ - ಮಂಕುತಿಮ್ಮ ||
ಮುನ್ನಾದ ಜನುಮಗಳ ನೆನಸಿನಿಂ ನಿನಗೇನು? |ಇನ್ನುಮಿಹುದಕೆ ನೀಡು ಮನವನ್; ಎನ್ನುವವೋಲ್ ||ಬೆನ್ನ ಪಿಂತಿನದು ಕಾಣಿಸದಂತೆ ಪರಮೇಷ್ಠಿ |ಕಣ್ಣನಿಟ್ಟನು ಮುಖದಿ - ಮಂಕುತಿಮ್ಮ ||
ಹುದುಗಿಹುದದೆಲ್ಲಿ ಪರಮಾತ್ಮನೀ ತನುವಿನಲಿ? |ಹೃದಯದೊಳೊ ಮೆದುಳಿನೊಳೊ ಹುಬ್ಬಿನಿರುಕಿನೊಳೋ? ||ಇದನೆನಿತೊ ತರ್ಕಿಸಿಹರ್; ಎನ್ನೆಣಿಕೆಯನು ಕೇಳು |ಉದರವಾತ್ಮನಿವಾಸ - ಮಂಕುತಿಮ್ಮ ||
ಹೆಸರು ಹೆಸರೆಂದು ನೀಂ ಬಸವಳಿವುದೇಕಯ್ಯ? |ಕಸದೊಳಗೆ ಕಸವಾಗಿ ಹೋಹನಲೆ ನೀನು? ||ಮುಸುಕಲೀ ಧರೆಯ ಮರೆವೆನ್ನನ್; ಎನ್ನುತ ಬೇಡು |ಮಿಸುಕದಿರು ಮಣ್ಣಿನಲಿ - ಮಂಕುತಿಮ್ಮ ||