ಒಟ್ಟು 5 ಕಡೆಗಳಲ್ಲಿ , 1 ವಚನಕಾರರು , 5 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಎರಡು ಕೋಣೆಗಳ ನೀಂ ಮಾಡು ಮನದಾಲಯದಿ |ಹೊರಕೋಣೆಯಲಿ ಲೋಗರಾಟಗಳನಾಡು ||ವಿರಮಿಸೊಬ್ಬನೆ ಮೌನದೊಳಮನೆಯ ಶಾಂತಿಯಲಿ |ವರಯೋಗಸೂತ್ರವಿದು - ಮಂಕುತಿಮ್ಮ ||
ಎರಡುತೆರ ಮೌಲ್ಯಂಗಳೆಲ್ಲಕಂ ಲೋಕದಲಿ |ಪರಮಾರ್ಥಕೊಂದು; ಸಾಂಪ್ರತದರ್ಥಕೊಂದು ||ಪರಿಕಿಸೆರಡಂ ನೀನು; ಹೊರಬೆಲೆಯ ಗುಣಿಪಂದು |ಮರೆಯಬೇಡೊಳಬೆಲೆಯ - ಮಂಕುತಿಮ್ಮ ||
ಎರಡುಮಿರಬಹುದು ದಿಟ; ಶಿವರುದ್ರನಲೆ ಬೊಮ್ಮ! |ಕರವೊಂದರಲಿ ವೇಣು; ಶಂಖವೊಂದರಲಿ! ||ಬೆರಳ್ಗಳೆರಡಾನುಮಿರೆ ಕೈ ಚಿಟಿಕೆಯಾಡುವುದು |ಒರುವನಾಡುವುದೆಂತು? - ಮಂಕುತಿಮ್ಮ ||
ಪುರುಷಂ ಸ್ವತಂತ್ರನೋ? ದೈವವಿಧಿ ಪರವಶನೊ? |ಎರಡುಮನಿತಿನಿತುಳ್ಳ ತೋಳಿನಂತಿಹನೋ? ||ತಿರುಗುವುದು ಮಡಿಸುವುದು ತೋಳ್ ಮೈಯಕಟ್ಟಿನಲಿ |ನರನಂತು ಮಿತಶಕ್ತ - ಮಂಕುತಿಮ್ಮ ||
ಸ್ಥಿರ ಹಿಮಾಚಲ ಬೊಮ್ಮ; ಚರ ಜಾಹ್ನವಿಯೆ ಮಾಯೆ |ಪರಸತ್ತ್ವಘನದ ವಿದ್ರವರೂಪ ವಿಶ್ವ ||ಪರಮಾರ್ಥಕೊಂದಕ್ಷಿ ವೆವಹಾರಕಿನ್ನೊಂದು |ಎರಡುಮೊಂದಾಂತರ್ಯ - ಮಂಕುತಿಮ್ಮ ||