ಕಗ್ಗ ಸಂಚಯ alpha
  • ಡಿ.ವಿ.ಜಿ
  • ಕಗ್ಗ
  • ಸಂಶೋಧನೆ
  • ಪದಕೋಶ
  • ಸಂಪರ್ಕಿಸಿ
  • ನಮ್ಮ ಬಗ್ಗೆ
ಇದರಂತೆ : ಇದನ್ನು :

ಒಟ್ಟು 5 ಕಡೆಗಳಲ್ಲಿ , 1 ವಚನಕಾರರು , 5 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಲೆಕಟ್ಟನಾಗಾಗ ಕಲಸಿಕೊಡುವುದೆ ಸೃಷ್ಟಿ |ಬಳಿಕೆಲೆಯ ಗತಿಯೆಂತೊ ಎಲ್ಲಿ ಸೇರುವುದೋ! ||ಬಳಸುತಿಹುದೊಂದೊಂದುಮೊಂದೊಂದು ದಿಕ್ಕಿನಲಿ |ಅಲೆಯುವೆವು ನಾವಂತು - ಮಂಕುತಿಮ್ಮ ||
--------------
ಡಾ. ಡಿ.ವಿ.ಗುಂಡಪ್ಪ

ಎಲ್ಲ ಅರೆಬೆಳಕು ಅರೆಸುಳಿವು ಅರೆತಿಳಿವುಗಳಿಲ್ಲಿ |ಎಲ್ಲಿ ಪರಿಪೂರಣವೊ ಅದನರಿಯುವನಕ ||ಸೊಲ್ಲಿಸುವರಾರು ಸೃಷ್ಟಿಯ ಪೇಟಿಯೊಳಗುಟ್ಟ? |ಎಲ್ಲ ಬಾಳು ರಹಸ್ಯ - ಮಂಕುತಿಮ್ಮ ||

ಎಲ್ಲಿಯದನೋ ಅದೆಲ್ಲಿಯದಕೋ ಹೆಣೆಯುವನು |ಒಲ್ಲೆವೆನೆ ನೀವೆ ಕಿತ್ತಾಡಿಕೊಳಿರೆನುವನ್ ||ಬೆಲ್ಲದಡುಗೆಯಲಿ ಹಿಡಿ ಮರಳನೆರಚಿರಿಸುವನು |ಒಳ್ಳೆಯುಪಕಾರಿ ವಿಧಿ - ಮಂಕುತಿಮ್ಮ ||

ಎಲ್ಲಿಯೋ ವಿಧಿಯ ಗೂಢದ ಕರ್ಮಶಾಲೆಯಲಿ |ನಿಲ್ಲದಾಡುತ್ತಿಹುವು ಯಂತ್ರಕೀಲುಗಳು ||ಎಲ್ಲಾಗುಹೋಗುಗಳುಮಾ ಚಕ್ರಗತಿಯಂತೆ |ತಲ್ಲಣವು ನಿನಗೇಕೆ? - ಮಂಕುತಿಮ್ಮ ||

ಒಲ್ಲೆನೆನುವರದಾರ್ ಅಹಿಂಸೆತತ್ತ್ವದ ಸೊಬಗ? |ಸಲ್ಲಿಸುವೆನಾ ವ್ರತವನೆನಲೊಂದು ತೊಡಕು ||ಹುಲ್ಲೆಯನು ತಿನುವ ಹುಲಿಯೊಣಹುಲ್ಲನುಣಲಹುದೆ? |ಎಲ್ಲಿ ಸೃಷ್ಟಿಯಲಿ ದಯೆ? - ಮಂಕುತಿಮ್ಮ ||

©2014 - 2020 ಕನ್ನಡ ಸಂಚಯ | ಸಾಹಿತ್ಯ ಸಂಶೋಧನೆ ಹಾಗೂ ಅಧ್ಯಯನ ವೇದಿಕೆ