ಒಟ್ಟು 11 ಕಡೆಗಳಲ್ಲಿ , 1 ವಚನಕಾರರು , 4 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಏನು ಜೀವನದರ್ಥ? ಏನು ಪ್ರಪಂಚಾರ್ಥ? |ಏನು ಜೀವಪ್ರಪಂಚಗಳ ಸಂಬಂಧ? ||ಕಾಣದಿಲ್ಲಿರ್ಪುದೇನಾನುಮುಂಟೆ? ಅದೇನು? |ಜ್ಞಾನ ಪ್ರಮಾಣವೇಂ? - ಮಂಕುತಿಮ್ಮ ||
ಏನು ಪ್ರಪಂಚವಿದು! ಏನು ಧಾಳಾಧಾಳಿ! |ಏನದ್ಭುತಾಪಾರಶಕ್ತಿನಿರ್ಘಾತ! ||ಮಾನವನ ಗುರಿಯೇನು? ಬೆಲೆಯೇನು? ಮುಗಿವೇನು? |ಏನರ್ಥವಿದಕೆಲ್ಲ? - ಮಂಕುತಿಮ್ಮ ||
ಏನು ಭೈರವಲೀಲೆಯೀ ವಿಶ್ವವಿಭ್ರಮಣೆ! |ಏನು ಭೂತಗ್ರಾಮನರ್ತನೋನ್ಮಾದ! ||ಏನಗ್ನಿ ಗೋಳಗಳು! ಏನಂತರಾಳಗಳು! |ಏನು ವಿಸ್ಮಯ ಸೃಷ್ಟಿ? - ಮಂಕುತಿಮ್ಮ ||
ಮಾನವರೊ ದಾನವರೊ ಭೂಮಾತೆಯನು ತಣಿಸೆ |ಶೋಣಿತವನೆರೆಯುವರು ಬಾಷ್ಪ ಸಲುವುದಿರೆ? ||ಏನು ಹಗೆ! ಏನು ಧಗೆ! ಏನು ಹೊಗೆ! ಯೀ ಧರಣಿ |ಸೌನಿಕನ ಕಟ್ಟೆಯೇಂ? - ಮಂಕುತಿಮ್ಮ ||