ಒಟ್ಟು 4 ಕಡೆಗಳಲ್ಲಿ , 1 ವಚನಕಾರರು , 4 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಒಡೆಯನೆಂದೋ ಬಂದು ಕೇಳ್ವನದಕುತ್ತರವ |ಕೊಡಬೇಕು ತಾನೆನುವವೊಲು ಋಜುತೆಯಿಂದ ||ಒಡಲ; ಜಾಣಿನ; ಜೀವಶಕ್ತಿಗಳನೆಲ್ಲವನು |ಮುಡುಪುಕೊಟ್ಟನು ಭರತ - ಮಂಕುತಿಮ್ಮ ||
ಪೊಡೆಯುಣಿಸ ಮಿಗಹಕ್ಕಿಹುಳುಗಳಂದದಿ ನರನ |ತಡಕುವನು; ತನ್ನಾತ್ಮದುಣಿಸ ಮರೆಯುವನು ||ಒಡಲಿನಬ್ಬರವೇನು? ಆತುಮದ ನಾಣ್ಚೇನು? |ಪೊಡವಿಗಿದೆ ದುಮ್ಮಾನ - ಮಂಕುತಿಮ್ಮ ||
ಮಡಕೆಯನು ಬಡಿದು ಹೊನ್ಕೊಡವ ತೋರುವ ಸಖನೆ |ಪಡೆದಿಹೆಯ ರಹದಾರಿಯನು ಹೊನ್ನ ಗಣಿಗೆ? ||ಒಡಲಿಗೊಗ್ಗಿದ ನೀರ ಚೆಲ್ಲಿದೊಡದೇಂ ಪಾಲ |ಕುಡಿವ ಸಂತಸಕೆಣೆಯೆ? - ಮಂಕುತಿಮ್ಮ ||
ಹರಿಗೆ ನಿನ್ನನುರಾಗವೆಲ್ಲವನು ಸಲ್ಲಿಸೆನೆ |ಮರುನುಡಿಯ ನುಡಿವನೇನ್ ಒಡಲ ತೋರದನು? ||ಪರಿತಪಿಸುವುದು ಜೀವ ಜೀವಸರಸವನೆಳಸಿ |ನರಧರ್ಮಸೂಕ್ಷ್ಮವಿದು - ಮಂಕುತಿಮ್ಮ ||