ಒಟ್ಟು 3 ಕಡೆಗಳಲ್ಲಿ , 1 ವಚನಕಾರರು , 3 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಒರ್ವ ನಾನೆಂದು ನೀನೆಂತು ತಿಳಿಯುವೆ ಜಗದಿ? |ನೂರ್ವರಣಗಿಹರು ನಿನ್ನಾತ್ಮಕೋಶದಲಿ ||ಪೂರ್ವಿಕರು; ಜತೆಯವರು; ಬಂಧುಸಖಶತ್ರುಗಳು |ಸರ್ವರಿಂ ನಿನ್ನ ಗುಣ - ಮಂಕುತಿಮ್ಮ ||
ಒರ್ವನೆ ನಿಲುವೆ ನೀನುತ್ಕಟಕ್ಷನಗಳಲಿ |ಧರ್ಮಸಂಕಟಗಳಲಿ; ಜೀವಸಮರದಲಿ ||ನಿರ್ವಾಣದೀಕ್ಷೆಯಲಿ; ನಿರ್ಯಾಣಘಟ್ಟದಲಿ |ನಿರ್ಮಿತ್ರನಿರಲು ಕಲಿ - ಮಂಕುತಿಮ್ಮ ||
ಸಾರ್ವಲೌಕಿಕಸೌಖ್ಯ ನೆಲಸುವನ್ನೆಗಮಿಳೆಯೊ- |ಳೊರ್ವನುಂ ಸುಖಿಯಲ್ತು; ದಿಟದಿ; ಪೂರ್ಣದಲಿ ||ಒರ್ವನುಬ್ಬಸದ ಬಿಸಿ ವಿಷವಾಯುವಾಗಿ ತಾ |ನುರ್ವರೆಯ ಮುಸುಕೀತು - ಮಂಕುತಿಮ್ಮ ||